Yuvavahini

JUL 21, 2019 8.37 AM IST

ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ಆಟಿದ ಪೊರ್ಲು-2019

ಆಟಿ ಆಚರಣೆ ಮೂಢನಂಬಿಕೆಯಲ್ಲ ಅದು ತುಳುವರ ಮೂಲನಂಬಿಕೆ-ವಿದ್ವಾನ್ ರಾಜೇಶ್ವರಿ

ಕೂಳೂರು : ನಮ್ಮ ಪೂರ್ವಜರು ಆಟಿ ತಿಂಗಳಲ್ಲಿ ಬರುವ ರೋಗ ರುಜಿನಗಳನ್ನು ತಡೆಗಟ್ಟಲು ಹಲವಾರು ಆಚರಣೆಗಳನ್ನು ಕಾರ್ಯ ರೂಪಕ್ಕೆ ತಂದು ಅದನ್ನು ಆಚರಿಸುತ್ತಿದ್ದರು. ನಿಜವಾಗಿಯೂ ಆಟಿ ಆಚರಣೆಯು ಮೂಢನಂಬಿಕೆಯಲ್ಲ ಅದು ತುಳುವರ ಮೂಲನಂಬಿಕೆ ಎಂದು ಬೆಸೆಂಟ್ ಕಾಲೇಜಿನ ಉಪನ್ಯಾಸಕಿ ರಾಜೇಶ್ವರಿ ತಿಳಿಸಿದರು.
ಅವರು ದಿನಾಂಕ 21.07.19 ರಂದು ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ನಡೆದ ಆಟಿದ ಪೊರ್ಲು-2019 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಯುವವಾಹಿನಿಯ ಮುಖ್ಯ ಧ್ಯೇಯ ಸಂಪರ್ಕದ ನೆಲೆಯಲ್ಲಿ ಕಾರ್ಯಕ್ರಮವು ಘಟಕದ ಸದಸ್ಯರಾದ ಜಯಶ್ರೀ ಹಾಗೂ ಶೋಭ ಇವರ ಮನೆಯಲ್ಲಿ ನಡೆಯಿತು.
ಇನ್ನೋರ್ವ ಮುಖ್ಯ ಅತಿಥಿ ಬಾಸ್ಕರ್ ಪೂಜಾರಿ ರವರು ಹಲಸಿನ ಹಣ್ಣು ತುಂಡು ಮಾಡುವ ಮೂಲಕ ವಿಭಿನ್ನವಾಗಿ ಉದ್ಘಾಟಿಸಿದರು. ಯುವವಾಹಿನಿ (ರಿ) ಕೂಳೂರು ಘಟಕದ ಅಧ್ಯಕ್ಷರಾದ ಭಾಸ್ಕರ ಕೋಟ್ಯಾನ್ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ವೇದಿಕೆಯಲ್ಲಿರುವ ಎಲ್ಲರಿಗೂ ಎಲೆ ಅಡಿಕೆ ಕೊಟ್ಟು ಶಾಲು ಹೊದಿಸಿ ಸ್ವಾಗತಿಸಿದರು.  ಕಾರ್ಯಕ್ರಮದಲ್ಲಿ ಘಟಕದ ಸಲಹೆಗಾರರಾದ ನೇಮಿರಾಜ್, ಕಾರ್ಯಕ್ರಮದ ಸಂಚಾಲಕರಾದ ಶೋಭ. ಟಿ. ಕರ್ಕೇರ, ಕಾರ್ಯದರ್ಶಿ ಮಧುಶ್ರೀ ಪ್ರಶಾಂತ್, ಯುವವಾಹಿನಿ ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷರಾದ ಸಂಜೀವ ಪೂಜಾರಿ, ಘಟಕದ ನಿಕಟಪೂರ್ವ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ ಉಪಸ್ಥಿತರಿದ್ದರು.


ಆಟಿ ಆಚರಣೆಗೆ ಸಂಬಂಧಿಸಿದಂತೆ ರಸಪ್ರಶ್ನೆ ಸ್ಪರ್ಧೆ ಹಾಗೂ ವಿವಿಧ ಆಟಗಳನ್ನು ಘಟಕದ ಕಾರ್ಯದರ್ಶಿ ಮಧುಶ್ರೀ ಪ್ರಶಾಂತ್ ನಡೆಸಿಕೊಟ್ಟರು. ಹಿರಿಯ ಸದಸ್ಯರಾದ ಜಾನಕಿ, ಸುಶೀಲಾ ಹಾಗೂ ಸೀತ ರವರಿಂದ ತುಳು ಪಾರ್ದನ, ಘಟಕದ ಸದಸ್ಯರಾದ ವಿಮಲ, ಜಾನಕಿ ಯವರಿಂದ ಆಟಿ ಕಳೆಂಜ ಪ್ರದರ್ಶನ ಇವೆಲ್ಲವೂ ಕಾರ್ಯಕ್ರಮದ ವಿಶೇಷತೆಗಳಾಗಿತ್ತು. ಕಾರ್ಯಕ್ರಮದಲ್ಲಿ ಸೇಸಪ್ಪ ಪೂಜಾರಿ ಹಾಗೂ ಗಿರಿಜ ಪೂಜಾರ್ತಿ ಇವರು ಹಿರಿಯ ಕೃಷಿಕರಾಗಿದ್ದು, ಈಗಲೂ ಕೃಷಿ ಮಾಡುತ್ತಿದ್ದಾರೆ. ಇವರಿಗೆ ವೇದಿಕೆಯಲ್ಲಿರುವ ಗಣ್ಯರು ಸೇರಿ ಅಭಿನಂದಿಸಿದರು. ಮನೆಯ ಒಡತಿ ಮೀನಾಕ್ಷಿ ಸದಾಶಿವ ಇವರಿಗೆ ಅಧ್ಯಕ್ಷರು ಸ್ಮರಣಿಕೆ ನೀಡಿ ಗೌರವಿಸಿದರು. ಘಟಕದ ಸದಸ್ಯ ಹೇಮಂತ್ ಪ್ರಾರ್ಥಿಸಿದರು. ಘಟಕದ ಸ್ಥಾಪಕ ಅಧ್ಯಕ್ಷರಾದ ಸುಜಿತ್ ರಾಜ್ ನಿರೂಪಿಸಿದರು. ಸಂಚಾಲಕರಾದ ಶೋಭ. ಟಿ ರವರು ವಂದಿಸಿದರು. ಆಟಿ ತಿಂಗಳಲ್ಲಿ ತಯಾರಿಸುವ ಸುಮಾರು 20 ಬಗೆಯ ತಿಂಡಿ ತಿನಿಸುಗಳನ್ನು ಘಟಕದ ಸದಸ್ಯರು ತಯಾರಿಸಿ ತಂದಿದ್ದರು. ಎಲ್ಲರಿಗೂ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!