ಯುವವಾಹಿನಿ (ರಿ) ಸಸಿಹಿತ್ಲು ಘಟಕ

ಶ್ರೀ ಕೃಷ್ಣ ವೇಷ ಸ್ಪರ್ಧೆ

ಸಸಿಹಿತ್ಲು : ಯುವವಾಹಿನಿ (ರಿ) ಸಸಿಹಿತ್ಲು ಘಟಕ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪುಟಾಣಿಗಳಿಗಾಗಿ ಬಂಗಾರ ಬಹುಮಾನದ ಶ್ರೀ ಕೃಷ್ಣ ವೇಷ ಸ್ಪರ್ಧೆ ನಡೆಯಿತು. ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷ ರಾದ ಪ್ರಕಾಶ್ ಕುಮಾರ್ ಬಿ.ಎನ್ ದೀಪ ಬೆಳಗಿಸಿ ಕಾರ್ಯಕ್ರಮ.ಉದ್ಘಾಟಿಸಿದರು. ಎ.ಜೆ ಡೆನ್ಟಲ್ ಸೈನ್ಸ್ ಕಾಲೇಜಿನ ಪ್ರಾಧ್ಯಾಪಕರಾದ ರಿತೇಶ್, ಮಂಗಳಾದೇವಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಸಂಜ್ಯೋತಿ ಶೇಖಾ, ನಾರಾಯಣಗುರು ಮಹಿಳಾ ಸಮಿತಿ ಅಧ್ಯಕ್ಷೆ ಶುಭಾ ಪ್ರೇಮನಾಥ್ ಮುಖ್ಯ ಅತಿಥಿಯಾಗಿದ್ದರು. ಈ ಸಂದರ್ಭದಲ್ಲಿ ಕಲಾ ವಸ್ತ್ರವಿನ್ಯಾಸಗಾರರಾದ ಜನಾರ್ದನ್ ಶೆಟ್ಟಿಗಾರ್ ಇವರಿಗೆ ಕಲಾ ಗೌರವ ಮತ್ತು ಸಮಾಜ ಸೇವಕರಾದ ರಮೇಶ್ ಪೂಜಾರಿ ಇವರಿಗೆ ಸೇವಾ ಗೌರವ ನೀಡಿ ಗೌರವಿಸಲಾಯಿತು. ಅಲ್ಲದೆ ಅಂಗನವಾಡಿ ಮಕ್ಕಳಿಗೆ ಉಚಿತ ಬ್ಯಾಗ್ ವಿತರಿಸಲಾಯಿತು. ಒಂದರಿಂದ ಹತ್ತು ವರುಷದ ಒಳಗಿನ ಮಕ್ಕಳಿಗೆ ನಾಲ್ಕು ವಿಭಾಗದಲ್ಲಿ ಶ್ರೀ ಕೃಷ್ಣ ವೇಷ ಸ್ಪರ್ಧೆ ನಡೆಯಿತು. ಪ್ರತಿ ವಿಭಾಗದಲ್ಲಿ ವಿಜೇತರಿಗೆ ಚಿನ್ನದ ಉಂಗುರ ಮತ್ತು ದ್ವಿತೀಯ ಸ್ಥಾನಿಗಳಿಗೆ ಬೆಳ್ಳಿ ನಾಣ್ಯ ಬಹುಮಾನ ನೀಡಲಾಯಿತು. ಅಲ್ಲದೆ ಯುವವಾಹಿನಿ ಕೇಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಘಟಕದ ಮಾಜಿ ಅಧ್ಯಕ್ಷರಾದ ನರೇಶ್ ಕುಮಾರ್ ಮತ್ತು ಕಾರ್ಯದರ್ಶಿಯಾಗಿ ಆಯ್ಕೆಯಾದ ಪ್ರದೀಪ್ ಎಸ್.ಆರ್ ಇವರನ್ನು ಅಭಿನಂದಿಸಲಾಯಿತು. ಘಟಕದ ಕಾರ್ಯದರ್ಶಿ ಶಕಿಲಾ ನರೇಶ್, ಸಂಚಾಲಕರಾದ ಪ್ರೀತಿ ಮತ್ತು ನಿರೀಕ್ಷಾ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!