ದಿನಾಂಕ 2.10.19 ರಂದು ಯುವವಾಹಿನಿ ಕೂಳೂರು ಘಟಕದ ವತಿಯಿಂದ 150 ನೇ ಗಾಂಧಿ ಜಯಂತಿ ಪ್ರಯುಕ್ತ ಭಾರತಿ ಪದವಿಪೂರ್ವ ಕಾಲೇಜು, ನಂತೂರು ಇಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಭಾರತಿ ಸಮೂಹ ಸಂಸ್ಥೆಯ ಸೇವಾ ಸಮಿತಿಯ ಕಾರ್ಯದರ್ಶಿ ಕೃಷ್ಣ ನೀರಮೂಲೆ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಯುವವಾಹಿನಿ (ರಿ) ಕೂಳೂರು ಘಟಕದ ಉಪಾಧ್ಯಕ್ಷರಾದ ಪವಿತ್ರ. ಯು. ಅಮೀನ್ ರವರು ದೀಪ ಬೆಳಗಿಸುವುದರ ಮೂಲಕ ಮಾಡಿದರು. ನಂತರ ಮಾತನಾಡಿದ ಇವರು ಸ್ವಚ್ಛತೆ ಎಂಬುದು ನಮ್ಮ ಮನೆಯಲ್ಲಿ ಪ್ರಾರಂಭವಾಗಿ ನಂತರ ಶಾಲೆ, ಕಾಲೇಜು, ನಗರ, ರಾಜ್ಯ, ದೇಶ ಹೀಗೆ ವಿಸ್ತರಣೆಗೊಳ್ಳಬೇಕು ಎಂದರು. ನಂತರ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಜೀವನ್ ದಾಸ್ ರವರು ಮಾತನಾಡಿ ಸ್ವಚ್ಛತೆ ಮನಸ್ಸಿನಿಂದ ಪ್ರಾರಂಭಗೊಳ್ಳಬೇಕು ಎಂದರು.
ನಂತರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕೃಷ್ಣ ರವರು ಮಾತನಾಡಿ ಸ್ವಚ್ಛತೆ ಪ್ರತಿಯೊಬ್ಬನ ಜವಾಬ್ದಾರಿ ಎಂದರು.
ಕಾರ್ಯಕ್ರಮದಲ್ಲಿ ಘಟಕದ ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್, ಕಾರ್ಯದರ್ಶಿ ಮಧುಶ್ರೀ ಪ್ರಶಾಂತ್, ಕಾರ್ಯಕ್ರಮದ ಸಂಚಾಲಕರಾದ ಸುಮಾ ಕೋಡಿಕಲ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.
ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಅಶೋಕ್. ಎಸ್ ರವರು ಕಾರ್ಯಕ್ರಮ ನಿರೂಪಿಸಿದರು.
ವಿಧ್ಯಾರ್ಥಿಗಳು ಹಿಂದೂ ಸಂಸ್ಕೃತಿ ಬಿಂಬಿಸುವ ನಿಟ್ಟಿನಲ್ಲಿ ಸರಸ್ವತಿ ಸ್ತೋತ್ರ ಮಾಡಿ ಪ್ರಾರ್ಥಿಸಿದರು.
ನಂತರ ವಿದ್ಯಾರ್ಥಿಗಳ ವಿವಿಧ ತಂಡಗಳನ್ನು ಮಾಡಿ, ಯುವವಾಹಿನಿ ಸದಸ್ಯರು ಒಟ್ಟಾಗಿ ಸೇರಿಕೊಂಡು ಕಾಲೇಜು ವಠಾರ ಸ್ವಚ್ಛಗೊಳಿಸಿದೆವು. ವಿದ್ಯಾರ್ಥಿಗಳಿಗೆ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿತ್ತು.