Yuvavahini

SEP 13, 2019 9.13 AM IST

ಯುವವಾಹಿನಿ (ರಿ) ಮಂಗಳೂರು ಘಟಕ

ಬ್ರಹ್ಮಶ್ರೀ ನಾರಾಯಣ ಗುರು ಸಂದೇಶ ಪ್ರಚಾರ ಜಾಥಾ

 

           ಬ್ರಹ್ಮಶ್ರಿ ನಾರಾಯಣ ಗುರುಗಳ 165ನೇ ಜನ್ಮ ದಿನಾಚರಣೆಯು ತಾರೀಕು 13.9.2019 ರ ಶುಕ್ರವಾರದಂದು ಮಂಗಳೂರು ಘಟಕದ ವತಿಯಿಂದ ಬಹಳ ವಿಜೃಂಭಣೆಯಿಂದ ಜರುಗಿತು. ಘಟಕದ *ಯುವವಾಹಿನಿ ಸಭಾಂಗಣ* ದಲ್ಲಿ ಬೆಳಿಗ್ಗೆ 9.30 ಗಂಟೆಗೆ ಪುಷ್ಪಾಲಂಕಾರಗೊಂಡ ಗುರುಗಳ ಭಾವಚಿತ್ರಕ್ಕೆ ಕೇಂದ್ರ ಸಮಿತಿ ಅಧ್ಯಕ್ಷರಾದ  ನರೇಶ್ ಕುಮಾರ್ ಸಸಿಹಿತ್ಲು  ರವರು ಆರತಿ ಬೆಳಗಿ ಪುಷ್ಪ ಅರ್ಪಿಸುವುದರೊಂದಿಗೆ ಗುರುನಾರಾಯಣ ಜಯಂತಿಗೆ ಚಾಲನೆ ನೀಡಿದರು. ಸರ್ವಾಲಂಕಾರ ಗೊಂಡ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರವಿರುವ ರಥಕ್ಕೆ ಕೇಂದ್ರ ಸಮಿತಿ ಅಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲುರವರು ತೆಂಗಿನಕಾಯಿ ಹೊಡೆಯುವುದರ ಮೂಲಕ ರಥಕ್ಕೆ ಚಾಲನೆ ನೀಡಿದರು. ರಥವು ಭಜನೆ, ಚೆಂಡೆ ವಾದ್ಯ ಹಾಗೂ ನಾರಾಯಣಗುರುಗಳ ತತ್ವ ಸಂದೇಶಗಳ ಪ್ರಚಾರದೊಂದಿಗೆ ಯುವವಾಹಿನಿ ಸಭಾಂಗಣದಿಂದ ಹೊರಟು ಚಿಲಿಂಬಿ ಮಾರ್ಗವಾಗಿ ಲೇಡಿ ಹಿಲ್ ಗೆ ಬಂತು. ಲೇಡಿಹಿಲ್ ನಲ್ಲಿ ಯುವವಾಹಿನಿ ಸಹ ಘಟಕಗಳ ಸಂಯುಕ್ತ ದೊಂದಿಗೆ ಆರಂಭಗೊಂಡ *ಬ್ರಹತ್ ಗುರು ಸಂದೇಶ ಪ್ರಚಾರ ಪಾದ ಜಾಥ* ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಅಧ್ಯಕ್ಷರಾದ ಶ್ರೀ ಹೆಚ್ ಎಸ್  ಸಾಯಿರಾಮ್ ಮತ್ತು ಕೋಶಾಧಿಕಾರಿ ಶ್ರೀ ಪದ್ಮರಾಜ್ ರವರು ಧ್ವಜ ನೀಡುವುದರೊಂದಿಗೆ ಚಾಲನೆ ನೀಡಿದರು. ಪಾದ ಜಾಥವು  ಮಾಜಿ ಅಧ್ಯಕ್ಷರಾದ ಸಾಧು ಪೂಜಾರಿಯವರ ಗುರು ಸಂದೇಶ, ಭಜನೆ ಮತ್ತು ಚಂಡೆಗಳ ನಾದದೊಂದಿಗೆ  ಮಣ್ಣಗುಡ್ಡೆ ಮಾರ್ಗವಾಗಿ ಕುದ್ರೋಳಿ ದೇವಸ್ಥಾನ ತಲುಪಿತು. ದೇವಸ್ಥಾನದ ಆಡಳಿತ ಮಂಡಳಿ ಮತ್ತು ಅರ್ಚಕರು ಗುರುನಾರಾಯಣ ಭಾವಚಿತ್ರಕ್ಕೆ ಆರತಿ ಬೆಳಗಿ ಸ್ವಾಗತಿಸಿದರು.  ಸರ್ವ ಸದಸ್ಯರ ಸಮ್ಮುಖದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ವಿಶೇಷ ಗುರು ಪೂಜೆ ಸಲ್ಲಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ, ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಮಂಗಳೂರು ಇವರ ಸಹಕಾರದೊಂದಿಗೆ ನಡೆಯುವ ಬ್ರಹ್ಮಶ್ರಿ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಮಂಗಳೂರು ಘಟಕ ಪ್ರಕಟಿಸಿರುವ *ಶ್ರೀ ಗುರು ಅಷ್ಟೋತ್ತರ ಶತನಾಮಾವಳಿ* ಪುಸ್ತಕವನ್ನು ಕರ್ನಾಟಕ ಸರಕಾರದ ಸಚಿವರಾದ ಸನ್ಮಾನ್ಯ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಬಿಡುಗಡೆಗೊಳಿಸಿದರು. ಘಟಕದ ಅಧ್ಯಕ್ಷರಾದ ಕೆ ಆರ್ ಲಕ್ಷ್ಮೀ ನಾರಾಯಣರವರು ಸಹಕಾರ ನೀಡಿದ ಎಲ್ಲಾ ಸಹ ಘಟಕದ ಅಧ್ಯಕ್ಷ  ಕಾರ್ಯದರ್ಶಿ ಹಾಗೂ ಸದಸ್ಯರುಗಳಿಗೆ ವಂದನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಮಂಗಳೂರು ಘಟಕದ ಕಾರ್ಯದರ್ಶಿ ಗಣೇಶ್ ವಿ ಕೋಡಿಕಲ್, ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಶ್ರೀಯುತ ಜಗದೀಶ್ ಸುವರ್ಣ, ಶ್ರೀಕಾಂತ್  ಸುವರ್ಣ, ಗೋಪಾಲ ಪೂಜಾರಿ,  ಸಂಘಟನಾ ನಿರ್ದೇಶಕರಾದ ಹರೀಶ್ ಪೂಜಾರಿ, ಮೋಹನ ದಾಸ ಮಾಲೆಮಾರ್, ಮಾಜಿ ಅಧ್ಯಕ್ಷರುಗಳು ಹಾಗೂ ಸರ್ವ ಸದಸ್ಯರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!