Yuvavahini

AUG 20, 2019 5.36 PM IST

ಯುವವಾಹಿನಿ (ರಿ.) ಮಂಗಳೂರು ಘಟಕ

ದೇವರಾಜು ಅರಸು ಜಯಂತಿ ಆಚರಣೆ

ದಿನಾಂಕ 20.08.2019 ರಂದು ಯುವವಾಹಿನಿ ಸಭಾಂಗಣ ದಲ್ಲಿ ನಮ್ಮ ಘಟಕದಿಂದ ಕರ್ನಾಟಕ ರಾಜ್ಯದ ಪ್ರಸಿದ್ಧ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ರವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. 20.08.1815 ರಂದು ಜನಿಸಿ ಮೈಸೂರು ಮಹಾರಾಜರ ಆಸ್ಥಾನದಲ್ಲಿ ಅಧಿಕಾರಿಯಾಗಿ,  ನಿಜಲಿಂಗಪ್ಪನವರ ಸಂಪುಟದಲ್ಲಿ ಸಚಿವರಾಗಿ, ಸಿನಿಮಾ ನಟನಾಗಿ, ಎಂಟು ವರ್ಷಗಳ ತನ್ನ ಕಾಲಾವಧಿಯಲ್ಲಿ ಅನೇಕ ಸುಧಾರಣೆಗಳನ್ನು ಜಾರಿಗೆ ತಂದಿರುವ ಕರ್ನಾಟಕದ ಪ್ರಸಿದ್ಧ ಮುಖ್ಯಮಂತ್ರಿಯಾಗಿರುವ ದೇವರಾಜ್ ಅರಸು ರವರ ಭಾವಚಿತ್ರಕ್ಕೆ ಘಟಕದ ಮಾಜಿ ಸಲಹೆಗಾರರಾದ ಶ್ರೀಯುತ ಪರಮೇಶ್ವರ ಪೂಜಾರಿಯವರು ಹಾರ ಹಾಕಿ ಪುಷ್ಪ ಸಮರ್ಪಿಸುವುದರ ಮೂಲಕ ದೇವರಾಜ ಅರಸು ಜನ್ಮ ದಿನಾಚರಣೆ ಆಚರಿಸಲಾಯಿತು. ಉಳುವವನೇ ಹೊಲದೊಡೆಯ, ದಕ್ಷಿಣ ಕನ್ನಡದಲ್ಲಿ ಬಿಲ್ಲವ ಜನಾಂಗಕ್ಕೆ ಸಹಕಾರ, ಮಲಹೊರುವ ಪದ್ಧತಿ ನಿರ್ಮೂಲನೆ, ಜೀತದಾಳು ಪದ್ಧತಿ ನಿರ್ಮೂಲನೆ, ವ್ರದ್ದಾಪ್ಯವೇತನ, ಒಂದು ಮನೆ ಒಂದು ದೀಪ, ಮೀಸಲಾತಿ ಯೋಜನೆ ಹೀಗೆ ಸುಮಾರು 150ಕ್ಕೂ ಅಧಿಕ ಯೋಜನೆಗಳನ್ನು ಜಾರಿಗೆ ತಂದು ದೇವರಾಜ್ ಅರಸು ಯುಗ ಎಂದು ಪ್ರಸಿದ್ಧರಾಗಿರುವ ದೇವರಾಜ ಅರಸುರವರು ತನ್ನ ಕೊನೆಯ ಜೀವಿತದ ಅವಧಿಯಲ್ಲಿ ತನ್ನ ಹೊಲದಲ್ಲಿ ಕೃಷಿಕನಾಗಿ ಜೀವಿಸುತ್ತಾ ಎಲ್ಲರಿಗೂ ಮಾದರಿಯಾಗಿದ್ದರು ಎಂದು ಪರಮೇಶ್ವರ ಪೂಜಾರಿಯವರು ತಿಳಿಸಿದರು.ಮಾಜಿ ಅಧ್ಯಕ್ಷರಾದ ಸಾಧು ಪೂಜಾರಿಯವರು ಶ್ರೀಗುರು ಚಿಂತನ-ಮಂಥನ ಕಾರ್ಯಕ್ರಮವನ್ನು ಮುಂದುವರಿಸುತ್ತಾ ಜಾತಿಭೇದ ವರ್ಣಬೇದಗಳ ಬಗ್ಗೆ ಗುರುಗಳ ವಿಚಾರಧಾರೆಯನ್ನು ಪ್ರಸ್ತುತಪಡಿಸಿದರು. ಬೃಹದಾಕಾರದ ಮರದಲ್ಲಿರುವ ವಿವಿಧ ಆಕಾರಗಳ ಎಲೆಗಳ ರಸವನ್ನು ಹಿಂಡಿದರೆ ಬರುವ ರಸವೂ ಹೇಗೆ ಒಂದೇ ಬಣ್ಣದ್ದಾಗಿರುತ್ತದೋ, ಹಾಗೆಯೇ ಜಗತ್ತಿನಲ್ಲಿರುವ ಎಲ್ಲಾ ಪಂಗಡಗಳು ಒಂದೇ ಜಾತಿ ಎಂದು ನಾರಾಯಣ ಗುರುಗಳು ಮಹಾತ್ಮ ಗಾಂಧೀಜಿಯವರಿಗೆ ಮನವರಿಕೆ ಮಾಡಿದ್ದನ್ನು ನೆನಪಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ಆರ್. ಲಕ್ಷ್ಮೀ ನಾರಾಯಣ ರವರು ವಹಿಸಿದ್ದರು. ನಿಕಟಪೂರ್ವ ಅಧ್ಯಕ್ಷರಾದ ನವೀನ್ ಚಂದ್ರ, ಉಪಾಧ್ಯಕ್ಷ ಚಂದ್ರಶೇಖರ್ ಕರ್ಕೇರ, ಸಮಾಜ ಸೇವಾ ನಿರ್ಧೇಶಕರಾದ ಯೋಗೀಶ್ ಕುಮಾರ್ ಡೆಂಟಲ್ ಮತ್ತು ಸದಸ್ಯರು ಪಾಲ್ಗೊಂಡಿದ್ದರು. ಕೊನೆಯಲ್ಲಿ ಕಾರ್ಯದರ್ಶಿ ಗಣೇಶ್ ವಿ ಕೋಡಿಕಲ್ ರವರು ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸಿದರು.

 

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!