Yuvavahini

OCT 29, 2019 3.56 PM IST

ಯುವವಾಹಿನಿ (ರಿ) ಮಂಗಳೂರು ಘಟಕ

ದೀಪಾವಳಿ ಆಚರಣೆ

ದಿನಾಂಕ 29.10.2019 ರಂದು ಸಂಜೆ ಯುವವಾಹಿನಿ ಸಭಾಂಗಣ ದಲ್ಲಿ ಘಟಕದ ಎಲ್ಲಾ  ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಸೇರಿ ದೀಪಗಳ ಹಬ್ಬ ದೀಪಾವಳಿ ಯನ್ನು ಸಂಭ್ರಮ ಸಡಗರದಿಂದ ಆಚರಿಸಿದೇವು. ಸಾಯಂಕಾಲ 4.30 ಗಂಟೆಗೆ ಘಟಕದ ಹಿರಿಯ ಸದಸ್ಯರಾದ ಶ್ರೀಯುತ ಪರಮೇಶ್ವರ ಪೂಜಾರಿಯವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.  ವಿಷ್ಣು ಸಹಸ್ರನಾಮದೊಂದಿಗೆ ಆರಂಭಗೊಂಡ ಭಜನಾ ಕಾರ್ಯಕ್ರಮದಲ್ಲಿ ವಿವಿಧ ಸದಸ್ಯರು ಎರಡು ಗಂಟೆಗಳ ಕಾಲ ಸುಶ್ರಾವ್ಯವಾಗಿ ಭಜನೆ ಹಾಡಿದರು. ನಂತರ 6.30 ಗಂಟೆಗೆ ಸಾಪ್ತಾಹಿಕ ಸಭೆಯನ್ನು ನಡೆಸಲಾಯಿತು. ಅಧ್ಯಕ್ಷರಾದ ಶ್ರೀ ಕೆ ಆರ್. ಲಕ್ಷ್ಮೀನಾರಾಯಣರವರು ಎಲ್ಲಾ ಅತಿಥಿಗಳನ್ನು ಮತ್ತು ಸರ್ವ ಸದಸ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಕಾರ್ಯದರ್ಶಿಯವರಾದ ಗಣೇಶ್ ವಿ. ಕೋಡಿಕಲ್ ರವರು ಗತ ಸಭೆಯ ವರದಿಯನ್ನು ಓದಿ, ಅನುಮೋದನೆ ಪಡಕೊಂಡರು. ಘಟಕದಿಂದ ನಡೆಯುವ ವಿವಿಧ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು ಮತ್ತು ಡಿಸೆಂಬರ್ 22 ರಂದು ನಡೆಯುವ ಯುವವಾಹಿನಿಯ ಪ್ರತಿಷ್ಠಿತ ಅಂತರ್ ಘಟಕ ಸಾಂಸ್ಕೃತಿಕ ಕಾರ್ಯಕ್ರಮ ಡೆನ್ನಾನ ಡೆನ್ನನ – 2019 ರ  ಬಗ್ಗೆ ಚರ್ಚಿಸಿ, ಉಪಯುಕ್ತ ಸಮಿತಿಗಳನ್ನು ರಚಿಸಿ, ಸರ್ವರಿಗೂ ಸೂಕ್ತ ಮಾಹಿತಿಯನ್ನು ನೀಡಲಾಯಿತು. ಅಧ್ಯಕ್ಷರು ದೀಪಾವಳಿ ಆಚರಣೆಯ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಸದಸ್ಯರಾದ ಸತೀಶ್ ಕುಮಾರ್ ರವರು ಸರ್ವರಿಗೂ ವಂದನೆಗಳನ್ನು ಸಲ್ಲಿಸಿದರು. ಸಭೆಯ ನಂತರ ಎಲ್ಲಾ ಸದಸ್ಯರು ಯುವವಾಹಿನಿ ಸಭಾಂಗಣ ದ ಒಳಗಡೆ ಮತ್ತು ಹೊರಗಡೆ ಹಣತೆಗಳನ್ನು ಹಚ್ಚಿ ಸಂಭ್ರಮಿಸಿದರು. ನಂತರ ನಡೆದ ಕುಣಿತ ಭಜನೆಯಲ್ಲಿ ಘಟಕದ ಎಲ್ಲಾ ಸದಸ್ಯರು ಪಾಲ್ಗೊಂಡರು. ಸರ್ವಾಲಂಕೃತಗೊಂಡ ಬ್ರಹ್ಮಶ್ರೀ ನಾರಾಯಣ ಗುರುವರ್ಯ ರ ಭಾವಚಿತ್ರಕ್ಕೆ ಮಂಗಳಾರತಿ ಮಾಡಲಾಯಿತು.  ಕಾರ್ಯಕ್ರಮದ ಸಂಚಾಲಕರಾದ ಗೋಪಾಲ ಪೂಜಾರಿಯವರ ವಿಶೇಷ ಮುತುವರ್ಜಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕೇಂದ್ರ ಸಮಿತಿ ಪ್ರದಾನ ಕಾರ್ಯದರ್ಶಿ ಎಸ್. ಆರ್. ಪ್ರದೀಪ್, ಸಂಘಟನಾ ನಿರ್ದೇಶಕರಾದ ಹರೀಶ್ ಸನಿಲ್, ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಉಮಾ ಶ್ರೀಕಾಂತ್ ಮತ್ತಿತರ ಗಣ್ಯರು ಬಾಗವಹಿಸಿದ್ದರು. ನಮ್ಮ ಘಟಕದ ಆಜೀವ ಗೌರವ ಸದಸ್ಯರಾದ ಶ್ರೀನಿವಾಸ ಪೂಜಾರಿ ಹಾಗೂ ದೇವೇಂದ್ರ ಕೋಟ್ಯಾನ್ ರವರು ಜಂಟಿಯಾಗಿ 1st year Bio medical Deralakatte  ಯಲ್ಲಿ ಕಲಿಯುತ್ತಿರುವ ವಿಧ್ಯಾರ್ಥಿನಿ ಶಾಲೋನಿಯವರಿಗೆ ಶೈಕ್ಷಣಿಕ ವೆಚ್ಚವನ್ನು ವಿತರಿಸಿದರು. ಬೊಳ್ಳಿ ಟ್ರಾವಲ್ಸನ ಮಾಲೀಕರಾದ ಅರುಣ್ ರವರು ಘಟಕದ ಶೈಕ್ಷಣಿಕ ದತ್ತು ಸ್ವೀಕಾರ ನಿಧಿಗೆ ದೇಣಿಗೆ ನೀಡಿದರು. ಅರುಣ್ ರವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸುಮಾರು ನೂರಕ್ಕೂ ಅಧಿಕ ಸದಸ್ಯರು ದೀಪಾವಳಿ ಆಚರಣೆಯಲ್ಲಿ ಪಾಲ್ಗೊಂಡು ಸಂಭ್ರಮದ ಹಬ್ಬವನ್ನು ಆಚರಿಸಿದರು. ನಂತರ ಎಲ್ಲರಿಗೂ ಪ್ರಸಾದ, ಸಿಹಿತಿಂಡಿ ಹಾಗೂ ಉಪಾಹಾರ ವಿತರಿಸಲಾಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!