Yuvavahini

NOV 20, 2019 3.21 PM IST

ಯುವವಾಹಿನಿ (ರಿ) ಕೂಳೂರು ಘಟಕ

ಸ್ನೇಹ ಸಮ್ಮಿಲನ 2019

ಯುವವಾಹಿನಿ ಕೂಳೂರು ಘಟಕದ ವತಿಯಿಂದ ಸ್ನೇಹ ಸಮ್ಮಿಲನ 2019 ಕಾರ್ಯಕ್ರಮವು ದಿನಾಂಕ 17.11.19 ರಂದು ಬಡ್ಡ ಕುದುರು ಮರಕಡ ಇಲ್ಲಿ ನಡೆಯಿತು.  ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಸದಸ್ಯರ ತಂಡ ಮರವೂರು ತಲುಪಿ, ಅಲ್ಲಿಂದ ದೋಣಿಯ ಮೂಲಕ ಕುದುರು ತಲುಪಿದೆವು. 10 ಗಂಟೆಗೆ ಸರಿಯಾಗಿ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಮ್ಮ ಘಟಕದ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅಲ್ಲಿನ ಸ್ಥಳೀಯರಾದ ಸದಾಶಿವ ಪೂಜಾರಿ ಹಾಗೂ ಭುಜಂಗ ರವರು ಇದ್ದರು.  ಕಾರ್ಯಕ್ರಮದಲ್ಲಿ ನಮ್ಮ ಘಟಕದ ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್, ಉಪಾಧ್ಯಕ್ಷರಾದ ಪವಿತ್ರ. ಯು ಅಮೀನ್, ಕಾರ್ಯದರ್ಶಿ ಮಧುಶ್ರೀ ಪ್ರಶಾಂತ್ ಹಾಗೂ ಕಾರ್ಯಕ್ರಮದ ಸಂಚಾಲಕರಾದ ಸುಮಾ ಕೋಡಿಕಲ್ ರವರು ಉಪಸ್ಥಿತರಿದ್ದರು. ಅಧ್ಯಕ್ಷರು ಎಲ್ಲರನ್ನೂ ಹೂ ನೀಡಿ ಸ್ವಾಗತಿಸಿದರು. ಮುಖ್ಯ ಅತಿಥಿಗಳು ಬ್ರಹ್ಮಶ್ರೀ ನಾರಾಯಣ ಗುರು ವರ್ಯರ ಭಾವಚಿತ್ರಕ್ಕೆ ದೀಪ ಬೆಳಗಿಸಿದರು.  ನಂತರ ಕಾರ್ಯಕ್ರಮದ ಕುರಿತು ಸದಾಶಿವ ಪೂಜಾರಿ ರವರು ಮಾತನಾಡಿ ಮೊದಲ ಬಾರಿಗೆ ಕಾರ್ಯಕ್ರಮ ನಡೆಯುತ್ತಿದ್ದು ಕಾರ್ಯಕ್ರಮ ಯಾವುದೇ ವಿಘ್ನಗಳು ಇಲ್ಲದೆ ಒಳ್ಳೆಯ ರೀತಿಯಲ್ಲಿ ನಡೆಯಲಿ ಎಂದು ಹಾರೈಸಿದರು. ನಂತರ ಅಧ್ಯಕ್ಷರು ಕಾರ್ಯಕ್ರಮದ ಕುರಿತು ಮಾತನಾಡಿದರು. ಸಭಾ ಕಾರ್ಯಕ್ರಮದ ನಂತರ ಸದಸ್ಯರು ಎಲ್ಲರೂ ಉಪಹಾರ ಮುಗಿಸಿ 2 ತಂಡಗಳನ್ನು ಮಾಡಿ, ತಂಡಗಳ ನಡುವೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು.  ಕಾರ್ಯಕ್ರಮದಲ್ಲಿ ಘಟಕದ ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ ರವರ 50 ನೇ ಹುಟ್ಟು ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ನಂತರ ಮತ್ತಷ್ಟು ಸ್ಪರ್ಧೆಗಳೊಂದಿಗೆ ಕಾರ್ಯಕ್ರಮ ಮುಂದುವರೆಯಿತು.  ಸಂಚಾಲಕರು ಎಲ್ಲರಿಗೂ ಧನ್ಯವಾದ ಸಲ್ಲಿಸಿದರು. ಮಧ್ಯಾಹ್ನದ ಊಟ ಹಾಗೂ ಚಹಾ ತಿಂಡಿಗಳನ್ನು ಘಟಕದ ಸದಸ್ಯರೆಲ್ಲರೂ ಒಟ್ಟು ಸೇರಿ ಸ್ಥಳದಲ್ಲಿಯೇ ತಯಾರಿಸಿದೆವು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!