Yuvavahini

NOV 14, 2019 3.45 PM IST

ಯುವವಾಹಿನಿ (ರಿ) ಕೂಳೂರು ಘಟಕ

ಮಕ್ಕಳ ದಿನಾಚರಣೆ

ದಿನಾಂಕ 14.11.19 ರಂದು ಸಂಜೆ 4 ಗಂಟೆಗೆ ಸರಿಯಾಗಿ ಯುವವಾಹಿನಿ ಕೂಳೂರು ಘಟಕದ ವತಿಯಿಂದ ಮಕ್ಕಳ ದಿನಾಚರಣೆಯನ್ನು ಸಂವೇದನಾ ಮಕ್ಕಳ ಆಶ್ರಮ ನಂತೂರು, ತಾರೆತೋಟ ಇಲ್ಲಿ ಆಚರಿಸಲಾಯಿತು. ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಯುವವಾಹಿನಿ ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷರಾದ ಸಂಜೀವ ಪೂಜಾರಿ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ದೀಪ ಪ್ರಜ್ವಲಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ರವರು ವಹಿಸಿದ್ದರು. ನಮ್ಮ ಘಟಕದ ವತಿಯಿಂದ ಎಲ್ಲಾ ಮಕ್ಕಳಿಗೂ 10,600 ರೂ ಪಾದರಕ್ಷೆಗಳನ್ನು ವಿತರಿಸಲಾಯಿತು. ಅಲ್ಲಿನ ಕಾರ್ಯ ನಿರ್ವಾಹಕರಾದ ಜಯಲತಾ ರವರು ಮಾತನಾಡಿ ಯುವವಾಹಿನಿಯಿಂದ ನಮಗೆ ಇದೇ ರೀತಿ ಸಹಕಾರ ಸಿಗಲಿ ಎಂದು ಆಶಿಸಿದರು. ಕಾರ್ಯಕ್ರಮದಲ್ಲಿ ಸಂವೇದನಾ ಆಶ್ರಮದ ಕಾರ್ಯ ನಿರ್ವಾಹಕರಾದ ಜಯಲತಾ, ಯುವವಾಹಿನಿ ಕೂಳೂರು ಘಟಕದ ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್, ನಿಕಟಪೂರ್ವ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಪವಿತ್ರ. ಯು ಅಮೀನ್, ಕಾರ್ಯದರ್ಶಿ ಮಧುಶ್ರೀ ಪ್ರಶಾಂತ್ ಹಾಗೂ ಕಾರ್ಯಕ್ರಮದ ಸಂಚಾಲಕರಾದ ಕೃತಿಕಾ ಅಮೀನ್ ಉಪಸ್ಥಿತರಿದ್ದರು.
ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ ಅವರೊಂದಿಗೆ ಸುಮಾರು 2 ಗಂಟೆಗಳ ಕಾಲ ಕಳೆದೆವು. ನಂತರ 3 ಮಕ್ಕಳ ಹುಟ್ಟು ಹಬ್ಬವನ್ನು ಕೇಟ್ ಕಟ್ ಮಾಡಿ ಆಚರಿಸಲಾಯಿತು.
ಕಾರ್ಯಕ್ರಮದ ಕೊನೆಯಲ್ಲಿ ಜಯ ಲತಾ ರವರಿಗೆ ಯುವವಾಹಿನಿ ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷರಾದ ಸಂಜೀವ ಪೂಜಾರಿ ಯವರು ಸ್ಮರಣಿಕೆ ನೀಡಿ ಗೌರವಿಸಿದರು. ಕಾರ್ಯಕ್ರಮದ ಸಂಚಾಲಕರಾದ ಕೃತಿಕಾ ಹಾಗೂ ಪ್ರತೀಶ್ ಗೌರೀಶ್ ರವರು ನಿರೂಪಿಸಿದರು. ಕೃತಿಕಾ ರವರು ವಂದಿಸಿದರು. ಮಕ್ಕಳಿಗೆ ಹಾಗೂ ಸದಸ್ಯರಿಗೆ ಲಘು ಉಪಾಹಾರ ಏರ್ಪಡಿಸಿದ್ದೆವು. ಅಂದಿನ ರಾತ್ರಿ ಊಟವನ್ನು ನಮ್ಮ ಘಟಕದ ವತಿಯಿಂದ ಆಯೋಜಿಸಲಾಗಿತ್ತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!