ತಾ. 12-2-2017 ರಿಂದ 15-2-2017 ರವರೆಗೆ ಯುವವಾಹಿನಿ ಕೇಂದ್ರ ಸಮಿತಿಯ ಕಛೇರಿಯಲ್ಲಿ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ವತಿಯಿಂದ ಭಾರತ ಸರಕಾರ ದತ್ತೋಪಂತ್ ಥೇಂಗಡಿ ರಾಷ್ಟ್ರೀಯ ಕಾರ್ಮಿಕರ ಶಿಕ್ಷಣ ಅಭಿವೃದ್ಧಿ ಮಂಡಳಿ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಪ್ರಾದೇಶಿಕ ನಿರ್ದೇಶನಾಲಯ ಮಂಗಳೂರು ಇದರ ಸಹಯೋಗದೊಂದಿಗೆ 4 ದಿನಗಳ ಅಸಂಘಟಿತ ಕಾರ್ಮಿಕರ ಕಾರ್ಯಾಗಾರ ಜರಗಿತು.
ಕಾರ್ಯಕ್ರಮವನ್ನು ರಾಷ್ಟ್ರೀಯ ಕಾರ್ಮಿಕ ಶಿಕ್ಷಣ ಮಂಡಳಿಯ ಶಿಕ್ಷಣಾಧಿಕಾರಿ ಸತೀಶ್ ಕುಮಾರ್ ಹಾಗೂ ಕೇರ್ಸ್ ಮಂಗಳೂರು ಇದರ ನಿರ್ದೇಶಕರಾಗಿರುವ ಸತೀಶ್ ಮಾಬೆನ್ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಹರಿಣ ಜೆ. ರಾವ್‌ರವರು ಪೇಪರ್ ಬ್ಯಾಗ್ ತಯಾರಿಕೆ, ಕೃತಕ ಆಭರಣ, ಸಾಸ್ ತಯಾರಿಕೆ ಹಾಗೂ ಕೇಶ ವಿನ್ಯಾಸದ ಬಗ್ಗೆ ಮಾಹಿತಿಯನ್ನು ನೀಡಿದರು. ಸಮಾರೋಪ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿ ಹರಿಣ ಜೆ. ರಾವ್, ರಾಷ್ಟ್ರೀಯ ಕಾರ್ಮಿಕ ಶಿಕ್ಷಣ ಮಂಡಳಿಯ ಶಿಕ್ಷಣಾಧಿಕಾರಿ ಸತೀಶ್ ಕುಮಾರ್ ಹಾಗೂ ಸತೀಶ್ ಮಾಬೆನ್, ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಸಾಧು ಪೂಜಾರಿ, ಮಹಿಳಾ ಘಟಕದ ಅಧ್ಯಕ್ಷರಾದ ವಿದ್ಯಾ ರಾಕೇಶ್, ಕಾರ್ಯದರ್ಶಿ ರೇಖಾ ಗೋಪಾಲ್ ಮೊದಲಾದವರು ಉಪಸ್ಥಿತರಿದ್ದರು. ಸುಮಾರು ೫೨ ಮಹಿಳೆಯರು ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆದರು.
As per my observation ,every programme the Manila Chapter conducted , it was very systematically arranged. Hands up to the President and members.