Yuvavahini

MAR 13, 2022 11.48 AM IST

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಸಿಂಧೂರ : "ಚುಕ್ಕಿಯಿಂದ ಚಂದ್ರಮನೆಡೆಗೆ"

ಆರ್ಥಿಕ ಸದೃಢತೆಯಿಂದ ಮಹಿಳೆಗೆ ಗೌರವ: ರೇಖಾ ಗೋಪಾಲ್

ಬೆಳ್ತಂಗಡಿ: ”ಮಹಿಳೆ ಇನ್ನೊಬ್ಬರ ಮುಂದೆ ಕೈ ಚಾಚಿ ಬದುಕುವುದಕ್ಕಿಂತ ತಾನೇ ಹಣ ಗಳಿಸಿಕೊಳ್ಳಬೇಕು. ಆಕೆ ಅರ್ಥಿಕವಾಗಿ ಸದೃಢವಾದಾಗ ಸಮಸ್ಯೆ ದೂರವಾಗುವುದರ ಜೊತೆಗೆ ಸಮಾಜದಲ್ಲಿ ಗೌರವ, ಸ್ಥಾನಮಾನ ಸಿಗುವುದು’ ಎಂದು ಮಂಗಳೂರು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕಿ ರೇಖಾ ಗೋಪಾಲ್ ಹೇಳಿದರು.

ಅವರು ದಿನಾಂಕ 13.03.2022 ರಂದು ಬೆಳ್ತಂಗಡಿಯ ಸುವರ್ಣ ಆರ್ಕೆಡ್,ಇದರ ಸಭಾಂಗಣದಲ್ಲಿ ಬೆಳ್ತಂಗಡಿ ಯುವವಾಹಿನಿ ಘಟಕ, ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ, ಬೆಳ್ತಂಗಡಿ ಇವರ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ “ಚುಕ್ಕಿಯಿಂದ ಚಂದ್ರಮನೆಡೆಗೆ” ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು. ಬೆಳ್ತಂಗಡಿ ಘಟಕದ ಸಲಹೆಗಾರ ಸದಾನಂದ ಪೂಜಾರಿ ಉಂಗಿಲಬೈಲು ಉದ್ಘಾಟಿಸಿ ಮಾತನಾಡಿ, ಮಹಿಳೆಯರ ಶೋಷಣೆ ಆದಾಗ ಎಲ್ಲರೂ ಒಂದಾಗಿ ಪ್ರತಿಭಟಿಸಬೇಕು. ಮಹಿಳೆಗೆ ಮಾತೆಯ ಗೌರವ ನೀಡಬೇಕು’ ಎಂದರು.

ಸಿಂಧೂರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೆಳ್ತಂಗಡಿ ಯುವವಾಹಿನಿ ಘಟಕದ ಅಧ್ಯಕ್ಷೆ ಸುಜಾತಾ ಅಣ್ಣಿ ಪೂಜಾರಿ ಮಾತನಾಡಿ, ‘ಮಹಿಳೆ ಸಮಾಜದಲ್ಲಿ ಜವಾಬ್ದಾರಿ ನಿಭಾಯಿಸುವ ಸಂದರ್ಭ ಟೀಕೆಗಳು ಸಾಮಾನ್ಯ. ತಪ್ಪು ಮಾಡದೇ ಇದ್ದಾಗ ಟೀಕೆಗಳಿಗೆ ಅಂಜಬೇಕಾಗಿಲ್ಲ’ ಎಂದರು. ಕಾರ್ಯಕ್ರಮದಲ್ಲಿ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ನಿರ್ದೇಶಕಿ ಪ್ರೇಮಾ ಉಮೇಶ್, ಮಹಿಳಾ ಬಿಲ್ಲವ ವೇದಿಕೆಯ ಉಪಾಧ್ಯಕ್ಷೆ ಕೇಶವತಿ ಹಾಗೂ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯದರ್ಶಿ ಪ್ರಮೀಳಾ ಇವರನ್ನು ಗೌರವಿಸಿ ಅಭಿನಂದಿಸಲಾಯಿತು. ವೇದಿಕೆಯಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಎಂ ಕೆ ಪ್ರಸಾದ್, ಘಟಕದ ಕಾರ್ಯದರ್ಶಿ ಸಂತೋಷ್ ಅರಳಿ, ಮಹಿಳಾ ಸಂಚಾಲನ ಸಮಿತಿ ಅಧ್ಯಕ್ಷೆ ವನಿತಾ ಜನಾರ್ದನ್, ವೇದಾಪ್ರಭಾಕರ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಘಟಕದ ಸಲಹೆಗಾರರು ಮಾಜಿ ಅಧ್ಯಕ್ಷರು ಎಲ್ಲಾ ಸದಸ್ಯರು ಪದಾಧಿಕಾರಿಗಳು ಭಾಗವಹಿಸಿದ್ದರು. ಘಟಕದ ಮಹಿಳಾ ನಿರ್ದೇಶಕಿ ಬೇಬಿಂದ್ರ ಪ್ರಾರ್ಥಿಸಿದರು, ಮಹಿಳಾ ಸಂಚಲನ ಸಮಿತಿಯ ವನಿತಾ ಜನಾರ್ದನ್ ಸ್ವಾಗತಿಸಿ, ಮಹಿಳಾ ಸಂಚಲನ ಸಮಿತಿಯ ಕಾರ್ಯದರ್ಶಿ ವೇದ ಪ್ರಭಾಕರ್ ಧನ್ಯವಾದಗೈದರು‌. ಕಾರ್ಯಕ್ರಮವನ್ನು ಚಂದ್ರಹಾಸ ಬಳೆಂಜ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!