ಯುವವಾಹಿನಿ ಕೂಳೂರು ಘಟಕದ ಆಶ್ರಯದಲ್ಲಿ

ವಿಶ್ವ ಮಹಿಳಾ ದಿನಾಚರಣೆ 2022

ಕೂಳೂರು :- ಯುವವಾಹಿನಿ ಕೂಳೂರು ಘಟಕದ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ದಿನಾಚರಣೆ ಕಾರ್ಯಕ್ರಮವು ದಿನಾಂಕ 16-03-2022 ಬುಧವಾರದಂದು ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರ ಕೂಳೂರು ಇಲ್ಲಿ 7.00 ಗಂಟೆಗೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವ ಚಿತ್ರಕ್ಕೆ ದೀಪ ಬೆಳಗಿಸುವುದರೊಂದಿಗೆ ಆರಂಭವಾಯಿತು. ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಉಪಮೇಯರ್ ಸುಮಂಗಲಾ ರಾವ್ ಕಾರ್ಯಕ್ರಮವನ್ನು ಉದ್ಘಾಟಿಸಿ ಹೆಣ್ಣು ಅಬಲೆಯಲ್ಲ ಸಬಲೆ ಮಹಿಳೆ ಕೇವಲ ಮನೆ ಕೆಲಸಕ್ಕೆ ಸೀಮಿತವಲ್ಲ ಆಕೆಯನ್ನು ಎಲ್ಲಾ ಕ್ಷೇತ್ರಗಳಲ್ಲೂ ಸರಿಸಮಾನವಾಗಿ ನೋಡಬೇಕು ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಮಹಿಳಾ ಸಂಘಟನಾ ನಿರ್ದೇಶಕಿ ಸುಮಾ ವಸಂತ್ ಇವರು ಮಾತನಾಡಿ ಮಹಿಳಾ ದಿನಾಚರಣೆ ಕುರಿತು ಮಾಹಿತಿ ನೀಡಿದರು. 1975 ಮಾರ್ಚ್ 8 ರಿಂದ ವಿಶ್ವ ಮಹಿಳಾ ದಿನಾಚರಣೆ ಆಚರಿಸುತ್ತಾ ಇದ್ದೇವೆ. ಮಹಿಳೆಯರು ದೈಹಿಕವಾಗಿ ಬಲಾಢ್ಯರಲ್ಲದಿದ್ದರು ಮಾನಸಿಕವಾಗಿ ಬಲಾಢ್ಯರು ಎಂದು ಹೇಳಿದರು, ಎಪ್ರಿಲ್ 3ರಂದು ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಸಾರಥ್ಯದಲ್ಲಿ ಹೊಂಬೆಳಕು 2022 ಮಹಿಳಾ ಆರ್ಥಿಕ ಸ್ವಾವಲಂಬನೆಯತ್ತ ದಿಟ್ಟ ಹೆಜ್ಜೆ (ಬೃಹತ್ ವಸ್ತು ಪ್ರದರ್ಶನ ಹಾಗೂ ಮಾರಾಟ) ಕಾರ್ಯಕ್ರಮವು ಹೋಟೆಲ್ ವುಡ್ ಲ್ಯಾಂಡ್ಸ್ ಜ್ಯೋತಿ ಬಂಟ್ಸ್ ಹಾಸ್ಟೆಲ್ ಇಲ್ಲಿ ನಡೆಯಲಿದ್ದು ಎಲ್ಲರೂ ಭಾಗವಹಿಸಿ ಸಹಕರಿಸಬೇಕೆಂದು ಕೇಳಿಕೊಂಡರು. ಕಾರ್ಯಕ್ರಮದಲ್ಲಿ ಮಹಿಳಾ ಸಾಧಕಿ ರಾಧಿಕಾ ಸಿ ಎಸ್ ಇವರನ್ನು ಅಭಿನಂದಿಸಲಾಯಿತು. ಅಭಿನಂದನೆಯನ್ಮು ಸ್ವೀಕರಿಸಿದ ಇವರು ತನ್ನ ವೃತ್ತಿ ಜೀವನದ ಅನುಭವವನ್ನು ಹಂಚಿಕೊಂಡರು. ತನ್ನನ್ನು ಅಭಿನಂದಿಸಿದಕ್ಕೆ ಘಟಕಕ್ಕೆ ಧನ್ಯವಾದ ಸಲ್ಲಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಘಟಕದ ಅಧ್ಯಕ್ಷರಾದ ದೀಕ್ಷಿತ್ ಸಿ ಎಸ್ ಮಾತನಾಡಿ ಹೆಣ್ಣು ತಾಯಿಯಾಗಿ , ತಂಗಿಯಾಗಿ, ಅಕ್ಕನಾಗಿ, ಹೆಂಡತಿಯಾಗಿ, ಸ್ನೇಹಿತೆಯಾಗಿ ಪ್ರತಿಯೊಬ್ಬರ ಬದುಕಿನಲ್ಲೂ ಮುಖ್ಯವಾದ ಪಾತ್ರವನ್ನು ವಹಿಸುವಳು ಎಂದು ಹೆಣ್ಣಿನ ಮಹತ್ವದ ಬಗ್ಗೆ ತಿಳಿಸಿದರು. ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರಿಗೆ ಏರ್ಪಡಿಸಿದ್ದ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಅತಿಥಿಗಳಿಗೆ , ತೀರ್ಪುಗಾರರಿಗೆ , ಸಂಚಾಲಕರು ಮತ್ತು ಸಹಸಂಚಾಲಕರಿಗೆ ಅಧ್ಯಕ್ಷರು ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಮಹಿಳೆಯರಿಗಾಗಿ ಬೆಂಕಿ ರಹಿತ ಅಡುಗೆ ಸ್ಪರ್ಧೆ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಕೊನೆಗೆ ಸದಸ್ಯರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ವೇದಿಕೆಯಲ್ಲಿ ಘಟಕದ ಕಾರ್ಯದರ್ಶಿ ಸುಮಾ ಶಿವು ಕೋಡಿಕಲ್, ಸಂಚಾಲಕರಾದ ಅನಿತಾ ತುಕಾರಾಮ್ ಉಪಸ್ಥಿತರಿದ್ದರು. ನಿಕಟ ಪೂರ್ವ ಅಧ್ಯಕ್ಷರಾದ ನಯನರಮೇಶ್ , ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್, ಲೋಕೇಶ್ ಕೋಟ್ಯಾನ್, ಭಾಸ್ಕರ್ ಕೋಟ್ಯಾನ್, ಮಾರ್ಗದರ್ಶಕರಾದ ಗಿರಿಧರ್ ಸನಿಲ್, ಚಂದಪ್ಪ ಸನಿಲ್, ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷರಾದ ಸಂಜೀವ್ ಪೂಜಾರಿ,ಹಾಗೂ ವಿವಿಧ ಘಟಕಗಳ ಅಧ್ಯಕ್ಷರು ,ಕಾರ್ಯದರ್ಶಿಗಳು , ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು. ಘಟಕದ ಸದಸ್ಯರಾದ ಪ್ರತೀಕ್ಷಾ, ಸ್ವಾತಿ, ಸುಶ್ಮಿತಾ ಪ್ರಾರ್ಥನೆ ಮಾಡಿದರು. ಘಟಕದ ಅಧ್ಯಕ್ಷರಾದ ದೀಕ್ಷಿತ್ ಸಿ ಎಸ್ ಸ್ವಾಗತಿಸಿದರು. ಸುಮಂಗಲಾ ಕಾರ್ಯಕ್ರಮವನ್ನು ನಿರೂಪಣೆ ಮಾಡಿದರು .ಸಂಚಾಲಕರಾದ ಅನಿತಾ ತುಕಾರಾಮ್ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!