Yuvavahini

FEB 19, 2017 7.17 AM IST

ಯುವ ಸಿಂಚನ

ದೇಯಿ ಬೈದ್ಯೆತಿ ಮತ್ತು ಕೋಟಿ-ಚೆನ್ನಯರ ಮೂಲಸ್ಥಾನ ಶಿಲಾನ್ಯಾಸ ; ರಾಮ-ಲಕ್ಷ್ಮಣರಿಗೆ ಸಮಾನರಾದ ಕೋಟಿ-ಚೆನ್ನಯರು: ಕನ್ಯಾಡಿ ಶ್ರೀ

ಸಮಾಜದಲ್ಲಿ ಅಧರ್ಮ ತುಂಬಿದ್ದ ಸಂದರ್ಭ ಶಸ್ತ್ರಬಲದ ಮೂಲಕ ಧರ್ಮ ಸ್ಥಾಪನೆ ಮಾಡಿದ ಕೋಟಿ ಚೆನ್ನಯರು ರಾಮ-ಲಕ್ಷ್ಮಣರಿಗೆ ಸಮಾನರು ’ವಸುಧೈವ ಕುಟುಂಬಕಂ’ ಸಂದೇಶ ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಗಳ ಆಶಯದಂತೆ ಶಾಂತಿ ನೆಲೆಸಬೇಕಾದರೆ ಧರ್ಮ ಕ್ಷೇತ್ರಗಳ ಉನ್ನತಿಯಾಗಬೇಕು. ಕೋಟಿ-ಚೆನ್ನಯರು, ಮಾತೆ ದೇಯಿ ಬೈದ್ಯೆತಿಯ ಕ್ಷೇತ್ರ ಅಭಿವೃದ್ಧಿಗೆ ಕೈಂಕರ್ಯ ತೊಡುವ ಮೂಲಕ ಸುವರ್ಣಾಕ್ಷರದಲ್ಲಿ ಬರೆದಿಡುವ ಸಂದರ್ಭ ಸೃಷ್ಟಿಯಾಗಿದೆ ಎಂದು ಕನ್ಯಾಡಿ ಶ್ರೀರಾಮ ಕ್ಷೇತ್ರದ ಮಠಾಧೀಶ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.

ಮಾತೆ ದೇಯಿ ಬೈದ್ಯೆತಿ ಮತ್ತು ಕೋಟಿ-ಚೆನ್ನಯರ ಮೂಲಸ್ಥಾನವಾಗಿರುವ ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ಗೆಜ್ಜೆಗಿರಿ ನಂದನ ಬಿತ್ತಿಲ್‌ನಲ್ಲಿ ಮೂಲಸ್ಥಾನ ಗರಡಿ ಸೇರಿ 9 ಐತಿಹಾಸಿಕ ಸ್ಥಳಗಳ ಪುನರುತ್ಥಾನಕ್ಕೆ 19-02-2017 ರಂದು ನಡೆದ ಶಿಲಾನ್ಯಾಸ ಕಾರ್ಯಕ್ರಮದ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.

ಸಭಾ ಕಾರ್ಯಕ್ರಮ ಉದ್ಘಾಟಿಸಿದ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಮಾತನಾಡಿ, ಸಾಮಾಜಿಕ ಅಸಮಾನತೆ ವಿರುದ್ಧ ಧ್ವನಿಯೆತ್ತಿ ಹೋರಾಟದ ಕಿಚ್ಚು ಹಚ್ಚಿದವರು ಕೋಟಿ-ಚೆನ್ನಯರು. ಅವರ ಮೂಲ ಕ್ಷೇತ್ರ ಅಭಿವೃದ್ಧಿಗೆ ಎಲ್ಲ ಸಹಕಾರ ನೀಡಲಾಗುವುದು. ನಾರಾಯಣ ಗುರುಸ್ವಾಮಿ ಅವರ ಸಿದ್ಧಾಂತ ವರ್ತಮಾನದಲ್ಲಿ ಅನುಷ್ಠಾನದ ಅಗತ್ಯವಿದೆ. ಪಡುಮಲೆ ಕ್ಷೇತ್ರದ ಮುಡುಪಿನಡ್ಕದಲ್ಲಿ ಮಾತೆ ದೆಯಿ ಬೈದ್ಯೆತಿ ಔಷಧ ವನ ನಿರ್ಮಾಣದ ಅವಕಾಶ ಸಿಕ್ಕಿರುವುದಕ್ಕೆ ಸಂತೋಷವಿದೆ. 2ನೇ ಹಂತದ ಅಭಿವೃದ್ಧಿ ಕಾರ್ಯ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕುಂದಾಪುರ, ಉಡುಪಿ, ಕಾರ್ಕಳ, ಮೂಡಬಿದ್ರೆ ಇನ್ನಿತರ ಕಡೆಗಳಿಂದ ತಂಡೋಪ ತಂಡವಾಗಿ ಜನಸಾಗರ ಹರಿದು ಬಂತು. ಸುಮಾರು ೩೦೦ಕ್ಕೂ ಅಧಿಕ ಬಸ್‌ಗಳಲ್ಲಿ, ಕಾರು, ಮುಂತಾದ ವಿವಿಧ ವಾಹನಗಳಲ್ಲಿ ಜನರು ಶ್ರೀ ಕ್ಷೇತ್ರಕ್ಕೆ ಆಗಮಿಸಿದ್ದರು. ನಿರೀಕ್ಷೆಗೂ ಮೀರಿ ಜನಸಾಗರ ಸಂಗಮಗೊಳ್ಳುವ ಮೂಲಕ ಗೆಜ್ಜೆಗಿರಿ ಕ್ಷೇತ್ರ ದಾಖಲೆ ಬರೆಯಿತು. ದೇಶ-ವಿದೇಶಗಳಿಂದ ಅತಿಥಿ ಗಣ್ಯರು ಆಗಮಿಸಿದ್ದರು. ಆಗಮಿಸಿದ ಎಲ್ಲ ಭಕ್ತಾದಿಗಳಿಗೆ ಬೆಳಗ್ಗಿನ ಉಪಹಾರ, ಮಧ್ಯಾಹ್ನ ಭೋಜನದ ವ್ಯವಸ್ಥೆಯನ್ನು ಮಾಡಲಾಗಿತ್ತು. ಭಕ್ತಾದಿಗಳ ವಾಹನ ನಿಲುಗಡೆ ಅಲ್ಲಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಶಿಲಾನ್ಯಾಸ ಕಾರ್ಯಕ್ರಮದ ಅಂಗವಾಗಿ ಭಾನುವಾರ ಬೆಳಿಗ್ಗೆ ಕ್ಷೇತ್ರಕ್ಕೆ ಬೃಹತ್ ವಾಹನ ಜಾಥಾ ಏರ್ಪಡಿಸಲಾಗಿತ್ತು. ಮಂಗಳೂರು, ಕಾರ್ಕಳ, ಮೂಡಬಿದ್ರೆ, ಬಂಟ್ವಾಳ, ಗುರುವಾಯನಕೆರೆ ಮುಂತಾದ ಕಡೆಗಳಿಂದ ವಾಹನ ಜಾಥಾ ಆಗಮಿಸಿತ್ತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!