ಯುವವಾಹಿನಿ (ರಿ.) ಕೂಳೂರು ಘಟಕ

ಸ್ನೇಹ ಸಮ್ಮಿಲನ – 2022

ಕೂಳೂರು ಘಟಕದ ವತಿಯಿಂದ ಯುವವಾಹಿನಿಯ ಎಲ್ಲಾ ಸದಸ್ಯರ ಸಂಪರ್ಕ ಹಾಗೂ ಉತ್ತಮ ಭಾಂದವ್ಯಕ್ಕಾಗಿ ಯುವವಾಹಿನಿ (ರಿ.) ಕೂಳೂರು ಘಟಕದ ಸ್ನೇಹ ಸಮ್ಮಿಲನ 2022 ಕಾರ್ಯಕ್ರಮವು ದಿನಾಂಕ 15-05-2022 ರಂದು ಪಡುಬಿದ್ರಿ ಬ್ಲೂ ಪ್ಲ್ಲಾಗ್ ಬೀಚ್ ನಲ್ಲಿ ನಡೆಯಿತು. ಘಟಕದ ಅಧ್ಯಕ್ಷರಾದ ದೀಕ್ಷೀತ್ ಸಿ ಎಸ್ ಎಲ್ಲರನ್ನೂ ಸ್ವಾಗತಿಸಿದರು. ಪಡುಬಿದ್ರಿ ಘಟಕದ ಅಧ್ಯಕ್ಷರಾದ ಯಶೋಧರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಸ್ನೇಹ ಮಿಲನ 2022 ಉತ್ತಮ ರೀತಿಯಲ್ಲಿ ಸಾಗಲಿ ಎಂದು ಶುಭ ಹಾರೈಸಿದರು. ನಂತರ ಮಾಜಿ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ರವರ ನೇತೃತ್ವದಲ್ಲಿ 4 ತಂಡಗಳನ್ನು ರಚಿಸಿ ತಂಡಗಳ ಮಧ್ಯೆ ಮಧ್ಯಾಹ್ನದವರೆಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಮಧ್ಯಾಹ್ನದ ಭೋಜನದ ನಂತರ ಸದಸ್ಯರು ಬೀಚ್ ನಲ್ಲಿ ವಿವಿಧ ಆಟಗಳನ್ನು ಆಡಿ ಮನರಂಜಿಸಿದರು. ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರಾದ ದೀಕ್ಷಿತ್ ಸಿ ಎಸ್, ನಿಕಟ ಪೂರ್ವ ಅಧ್ಯಕ್ಷರಾದ ನಯನ ರಮೇಶ್, ದ್ವೀತಿಯ ಉಪಾಧ್ಯಕ್ಷರಾದ ಯಶವಂತ್ ಪೂಜಾರಿ, ಮಾಜಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಭಾಸ್ಕರ್ ಕೋಟ್ಯಾನ್, ಮಾರ್ಗದರ್ಶಕರಾದ ಚಂದಪ್ಪ ಸನಿಲ್, ಪಡುಬಿದ್ರಿ ಘಟಕದ ಅಧ್ಯಕ್ಷರು ಮತ್ತು ಕೋಶಾಧಿಕಾರಿ, ಕಾರ್ಯದರ್ಶಿ ಸುಮಾ ಶಿವು ಕೋಡಿಕಲ್, ಸಂಚಾಲಕರಾದ ರೋಹಿತ್ ಕುಮಾರ್ ಉಪಸ್ಥಿತರಿದ್ದರು. ಬ್ಲೂ ಫ್ಲ್ಯಾಗ್ ಬೀಚ್ ನ ಮ್ಯಾನೇಜರ್ ಕಿರಣ್ ಕುಮಾರ್ ಬೀಚ್ ನ ಬಗ್ಗೆ ಮಾಹಿತಿ ನೀಡಿದರು. ಕೊನೆಯಲ್ಲಿ ಕಾರ್ಯದರ್ಶಿ ಸುಮಾ ಶಿವು ಕೋಡಿಕಲ್ ಧನ್ಯವಾದಗೈದರು.
ಘಟಕದಿಂದ 80 ಮಂದಿ ಸದಸ್ಯರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!