Yuvavahini

JUN 05, 2022 4.15 PM IST

ಯುವವಾಹಿನಿ (ರಿ.) ಪಣಂಬೂರು- ಕುಳಾಯಿ "ಮಾಧವ ಕೀರ್ತನೊತ್ಸವ - 2022"

ಭಜನೆಯಿಂದ ಸುಸಂಸ್ಕೃತ ಸಮಾಜ ನಿರ್ಮಾಣ : ಡಾ. ಅರುಣ್ ಉಳ್ಳಾಲ್

ಮಂಗಳೂರು: ಭಜನೆ ಮೂಲಕ ಯುವಪೀಳಿಗೆ ಸುಸಂಸ್ಕೃತರಾಗುವುದರೊಂದಿಗೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಉಪನ್ಯಾಸಕ ಡಾ.ಅರುಣ್‌ ಉಳ್ಳಾಲ್ ಹೇಳಿದರು. ಅವರು ಯುವವಾಹಿನಿ (ರಿ.) ಕೇಂದ್ರ ಸಮಿತಿ ಹಾಗೂ ಯುವವಾಹಿನಿ (ರಿ.) ಪಣಂಬೂರು- ಕುಳಾಯಿ ಘಟಕದ ಸಹಯೋಗದಲ್ಲಿ ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ ಅಂತರ್ ಘಟಕಗಳ ಭಜನಾ ಸ್ಪರ್ಧೆ “ಮಾಧವ ಕೀರ್ತನೋತ್ಸವ-2022” ಸಮರೋಪ ಸಮಾರಂಭದಲ್ಲಿ ಮಾತನಾಡಿದರು.

ಅಧ್ಯಕ್ಷರಾದ ರವಿ ಅಮೀನ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಯುವವಾಹಿನಿ (ರಿ.) ಕೇಂದ್ರ ಸಮಿತಿ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು, ವಕೀಲರಾದ ಮಯೂರ್ ಕೀರ್ತಿ ಉಪಸ್ಥಿತರಿದ್ದರು. ಭಜನಾ ಪೋಷಕ ಮಾಧವ ಅಂಚನ್ ಇಡ್ಯಾ,ಹಿರಿಯರಾದ ಪಿ. ನಾರಾಯಣ ಪೂಜಾರಿ ಕುಳಾಯಿ,ಡಾ.ಅರುಣ್ ಉಳ್ಳಾಲ್ ಇವರನ್ನು ಸಮಾರಂಭದಲ್ಲಿ ಗೌರವಿಸಲಾಯಿತು. ಘಟಕದ ಮಾಜಿ ಅಧ್ಯಕ್ಷರಾದ ಸುರೇಶ್ ಪೂಜಾರಿ ವಿಜೇತರ ಪಟ್ಟಿ ವಾಚಿಸಿದರು. ಸಂಜೀವ ಸುವರ್ಣ, ರಾಜೀವ ಪೂಜಾರಿ ಹಾಗೂ ಅಕ್ಷಿತಾ ಕಾರ್ಯಕ್ರಮ ನಿರ್ವಹಿಸಿ, ಕಾರ್ಯದರ್ಶಿ ಹರಿಣಿ ಜಗದೀಶ್ ವಂದಿಸಿದರು. ಮಾಧವ ಕೀರ್ತನೋತ್ಸವ ಉದ್ಘಾಟನೆ: ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ ಕುಳಾಯಿ ಅಧ್ಯಕ್ಷ ಗೋಪಾಲ ಬಂಗೇರ ಕಾರ್ಯಕ್ರಮ ಉದ್ಘಾಟಿಸಿದರು. ಶಿವಗಿರಿ ಮಠದ ಸ್ವಾಮೀಜಿ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು. ದಕ್ಷಿಣ ಕನ್ನಡ ಜಿಲ್ಲಾ ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಕುಮಾರಚಂದ್ರ, ಡಾ.ರವೀಶ್ ಪಡುಮಲೆ, ಯುವವಾಹಿನಿ (ರಿ.) ಕೇಂದ್ರ ಸಮಿತಿಯ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕ ಬಾಬು ಪೂಜಾರಿ ಮೊದಲಾದವರಿದ್ದರು. ವಿದ್ಯಾರ್ಥಿನಿ ಯಶ್ವಿತಾಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ಪದ್ಮನಾಭ ಮರೋಳಿ ಪ್ರಸ್ತಾವನೆಗೈದರು. ಯುವವಾಹಿನಿ (ರಿ.) ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!