ನಾಯಕತ್ವ ಬೆಳವಣಿಗೆ, ಪ್ರತಿಭೆಗೆ ವೇದಿಕೆ ನೀಡುವ ಯುವವಾಹಿನಿ ಯುವಕರ ವ್ಯಕ್ತಿತ್ವ ರೂಪಿಸುವ ಪ್ರೇರಕ ಶಕ್ತಿ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ತಿಳಿಸಿದರು.ಅವರು ದಿನಾಂಕ 10.07.2022 ರಂದು ಬಂಟ್ವಾಳ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ನಡೆದ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ 2022-23 ನೇ ಸಾಲಿನ ಪದಗ್ರಹಣ ಸಮಾರಂಭದಲ್ಲಿ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ.ಸೇಸಪ್ಪ ಕೋಟ್ಯಾನ್ ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿದರು. ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಟ್ರಸ್ಟಿಗಳಾದ ಜಗದೀಪ್ ಡಿ.ಸುವರ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಅಧ್ಯಕ್ಷರಾಗಿ ಗಣೇಶ್ ಪೂಂಜರೆಕೋಡಿ, ಕಾರ್ಯದರ್ಶಿಯಾಗಿ ನಾಗೇಶ್ ಪೂಜಾರಿ ನೈಬೇಲು, ಉಪಾಧ್ಯಕ್ಷರಾಗಿ ಹರೀಶ್ ಕೋಟ್ಯಾನ್ ಕುದನೆ, ದಿನೇಶ್ ಸುವರ್ಣ ರಾಯಿ, ಕೋಶಾಧಿಕಾರಿಯಾಗಿ ಧನುಷ್ ಮದ್ವ, ಜತೆ ಕಾರ್ಯದರ್ಶಿಯಾಗಿ ಲೋಹಿತ್ ಕನಪಾದೆ ಹಾಗೂ ನಿರ್ದೇಶಕರು, ಸಂಘಟನಾ ಕಾರ್ಯದರ್ಶಿಗಳ 21 ಸದಸ್ಯರ ನೂತನ ತಂಡವು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಸಾರ್ಥಕ ಐವತ್ತು ವರುಷಗಳ ಶುಭಯಾನದ ಸವಿನೆನಪಿನ ಸಲುವಾಗಿ ಕೆ.ಸೇಸಪ್ಪ ಕೋಟ್ಯಾನ್ ಚಂದ್ರಾವತಿ ದಂಪತಿಗಳಿಗೆ ಯುವವಾಹಿನಿ ಬಂಟ್ವಾಳ ಘಟಕದ ಪರವಾಗಿ ಅಭಿಮಾನದ ಸಿಂಚನ ಸಮರ್ಪಿಸಲಾಯಿತು. ಈ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಯುವವಾಹಿನಿ ಕುಟುಂಬ ಸದಸ್ಯರಾದ ನಮನ್ ಎಮ್ ಇವರನ್ನು ಅಭಿನಂದಿಸಲಾಯಿತು. ಯುವವಾಹಿನಿ ಬಂಟ್ವಾಳ ಘಟಕದ ಉಪಾಧ್ಯಕ್ಷ ನಾಗೇಶ್ ಎಮ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ನಿಕಟಪೂರ್ವ ಅಧ್ಯಕ್ಷರಾದ ಇಂದಿರೇಶ್ ನೂತನ ಪದಾಧಿಕಾರಿಗಳನ್ನು ಪರಿಚಯಿಸಿದರು. ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ, ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷರು, ಯುವವಾಹಿನಿ ಕೇಂದ್ರ ಸಮಿತಿಯ ಸಲಹೆಗಾರರಾದ ಪದ್ಮರಾಜ್ ಆರ್ ಹಾಗೂ ಯುವವಾಹಿನಿಯ ವಿವಿಧ ಘಟಕಗಳ ಪದಾಧಿಕಾರಿಗಳು ನೂತನ ತಂಡಕ್ಕೆ ಶುಭ ಹಾರೈಕೆ ಮಾಡಿದರು. ಘಟಕಕ್ಕೆ ಸೇರ್ಪಡೆಯಾದ ನೂತನ ಸದಸ್ಯರನ್ನು ಅಭಿನಂದಿಸಲಾಯಿತು. ಸರ್ವರ ಸಹಕಾರದೊಂದಿಗೆ ಮುಂದಿನ ಸಾಲಿನಲ್ಲಿ ಯುವವಾಹಿನಿ ಬಂಟ್ವಾಳ ಘಟಕವನ್ನು ಯಶಸ್ವಿಯಾಗಿ ಮುನ್ನಡೆಸುವ ಆತ್ಮವಿಶ್ವಾಸ ತನ್ನಲ್ಲಿದೆ ಎಂದು 2022-23 ನೇ ಸಾಲಿನ ಯುವವಾಹಿನಿ ಬಂಟ್ವಾಳ ಘಟಕದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಗಣೇಶ್ ಪೂಂಜರೆಕೋಡಿ ತಿಳಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ, ಸಂಘಟನಾ ಕಾರ್ಯದರ್ಶಿ ಶಿವಾನಂದ ಎಮ್ ಹಾಗೂ ನೂತನ ಕಾರ್ಯದರ್ಶಿ ನಾಗೇಶ್ ಪೂಜಾರಿ ನೈಬೇಲು ವೇದಿಕೆಯಲ್ಲಿ ಉಪಸ್ಥಿತರಿದ್ದರು ನಾಗೇಶ್ ಏಲಾಬೆ ಸ್ವಾಗತಿಸಿದರು, ಹರೀಶ್ ಕೋಟ್ಯಾನ್ ಕುದನೆ ಪ್ರಸ್ತಾವನೆ ಮಾಡಿದರು. ಲೋಹಿತ್ ಕನಪಾದೆ ಧನ್ಯವಾದ ನೀಡಿದರು, ಯತೀಶ್ ಕಾರ್ಯಕ್ರಮ ನಿರೂಪಿಸಿದರು.