Yuvavahini

JUL 17, 2022 2.34 PM IST

ಯುವವಾಹಿನಿ (ರಿ.)ಬಜಪೆ ಘಟಕ

ಆಟಿದ ನೆಂಪು – 2022

 ಬಜ್ಪೆ:- ಯುವವಾಹಿನಿ ಬಜ್ಪೆ ಘಟಕದ ವತಿಯಿಂದ 8ನೇ ವರ್ಷದ ಅಟಿದ ನೆಂಪು – 2022 ಕಾರ್ಯಕ್ರಮವು ಶ್ರೀ ನಾರಾಯಣ ಗುರು ಸಭಾಭವನ ಬಜಪೆ ಇಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.)ಬಜಪೆ -ಕರಂಬಾರು ಇವರ ಸಹಕಾರದೊಂದಿಗೆ 17 ಜುಲೈ 2022 ರಂದು ನಡೆಯಿತು. ಕಾರ್ಯಕ್ರಮವನ್ನು ಶ್ರೀ ಸ್ವಯಂಭೂಲಿಂಗೇಶ್ವರ ದೇವಸ್ಥಾನ ದೊಡ್ಡಿಕಟ್ಟ, ಬಜಪೆ ಇದರ ಅಧ್ಯಕ್ಷರಾದ ಲೋಕೇಶ್ ಆರ್. ಅಮೀನ್ ಇವರು ಕಳಸಕ್ಕೆ ಅಕ್ಕಿ ಹಾಕಿ ಹಿಂಗಾರವನ್ನು ಅರಳಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಯುವವಾಹಿನಿಯ ಯಾವುದೇ ಸಾಮಾಜಿಕ ಕಾರ್ಯಗಳಿಗೆ ನನ್ನ ಪ್ರೋತ್ಸಾಹ ಹಾಗೂ ಸಹಾಯ ಹಸ್ತ ಇದೆ ಎಂದು ಹೇಳಿ ಶುಭ ಹಾರೈಸಿದರು. ಸಾಹಿತಿ ಪ್ರಮೀಳಾ ದೀಪಕ್ ಪೆರ್ಮುದೆ ಇವರು ಆಟಿಯ ವಿಶೇಷತೆಯ ಬಗ್ಗೆ ಉಪನ್ಯಾಸ ನೀಡಿ, ಹೆತ್ತವರು ತಮ್ಮ ಮಕ್ಕಳಿಗೆ ಆಟಿಯ ವಿಶೇಷತೆಯ ಬಗ್ಗೆ ಮನವರಿಕೆ ಮಾಡಿ ಕೊಡಬೇಕು ಹಾಗೂ ಹಿಂದಿನ ಕಾಲದ ಕಷ್ಟದ ದಿನಗಳ ಬಗ್ಗೆ ತಿಳಿಯಪಡಿಸಬೇಕು. ಯುವವಾಹಿನಿ ಘಟಕವು ಪ್ರತಿವರ್ಷ ಈ ಆಟಿದ ನೆಂಪು ಕಾರ್ಯಕ್ರಮ ಏರ್ಪಡಿಸುವುದು ಶ್ಲಾಘನೀಯ ಎಂದು ಹೇಳಿದರು. ಯುವವಾಹಿನಿ ಬಜಪೆ ಘಟಕದ ಅಧ್ಯಕ್ಷರಾದ ಉಷಾ ಸುವರ್ಣ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಕಳೆದ ಸಾಲಿನ 10ನೇ ತರಗತಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ನಮ್ಮ ಸಮಾಜದ ನಾಲ್ವರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಸರಿತಾ ಚಾರಿಟೇಬಲ್ ಟ್ರಸ್ಟ್ ಸುಂಕದಕಟ್ಟೆ,ಬಜಪೆ ಹಾಗೂ ಸುಕುಮಾರ್ ಸಾಲಿಯಾನ್ ಸ್ವಾಮಿಲಪದವು, ಬಜಪೆ ಇವರುಗಳ ಸಹಕಾರದೊಂದಿಗೆ ಯುವವಾಹಿನಿಯ ವಿದ್ಯಾನಿಧಿಯಿಂದ ಏಳು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿ ಅವರ ಮುಂದಿನ ಶಿಕ್ಷಣಕ್ಕೆ ಸಹಕರಿಸಲಾಯಿತು. ಪಣಂಬೂರು-ಕುಲಾಯಿ ಘಟಕದ ಆತಿಥ್ಯದಲ್ಲಿ ನಡೆದ ಮಾಧವ ಕೀರ್ತನೋತ್ಸವ ಭಜನಾ ಸ್ಪರ್ಧೆಯಲ್ಲಿ ಬಜ್ಪೆ ಘಟಕವು ಪ್ರಥಮ ಬಹುಮಾನ ಪಡೆದಿದ್ದು ಭಾಗವಹಿಸಿದ ಸದಸ್ಯರನ್ನು ಗೌರವಿಸಲಾಯಿತು. ಮುಖ್ಯ ಅತಿಥಿಯಾದ ಮೂಲ್ಕಿ -ಮೂಡಬಿದ್ರೆ ಓ ಬಿ ಸಿ ಮೋರ್ಚಾದ ಅಧ್ಯಕ್ಷರಾದ ರಾಜೇಶ್ ಅಮೀನ್ ಪೋರ್ಕೊಡಿ ಮಾತನಾಡಿ ಇಂದು ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಉತ್ತಮವಾಗಿ ಕಲಿತು ಉನ್ನತ ಹುದ್ದೆ ಪಡೆದು ನೀವು ಯುವವಾಹಿನಿಯೊಂದಿಗೆ ಕೈ ಜೋಡಿಸಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಕೊಡುವಂತಾಗಲಿ ಎಂದು ಶುಭ ಹಾರೈಸಿದರು. ಇನ್ನೊರ್ವ ಮುಖ್ಯ ಅತಿಥಿ ಯುವವಾಹಿನಿ ಕೇಂದ್ರ ಸಮಿತಿಯ ಕೋಶಾಧಿಕಾರಿಯಾದ ಜಗದೀಶ್ ಚಂದ್ರ ಮೂಡಬಿದ್ರೆ ಇವರು ಯುವವಾಹಿನಿ ಬಜಪೆ ಘಟಕದ ಕಾರ್ಯವೈಖರಿಯನ್ನು ಶ್ಲಾಘಿಸಿದರು. ಅತಿಥಿಯಾಗಿ ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಯೋಗೀಶ್ ಪೂಜಾರಿ, ಕಾರ್ಯಕ್ರಮ ಸಂಚಾಲಕರಾದ ಪ್ರಜ್ವನಿ ಮಿತೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಮೊದಲು ನಾರಾಯಣ ಗುರು ಮಂದಿರದಲ್ಲಿ ಪೂಜೆ ಸಲ್ಲಿಸಿ ನಂತರ ಯುವವಾಹಿನಿ ಕುಟುಂಬ ಸದಸ್ಯರಿಂದ ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು ಹಾಗೂ ಯುವವಾಹಿನಿ ಸದಸ್ಯರು ತಮ್ಮ ತಮ್ಮ ಮನೆಯಲ್ಲಿ ಆಟಿಯ ವೈಶಿಷ್ಟತೆ ಬೀರುವ ತಿಂಡಿ ತಿನಿಸು ಪದಾರ್ಥಗಳನ್ನು ಮಾಡಿ ತಂದಿದ್ದರು. ಸಾನ್ವಿ ಪ್ರಾರ್ಥಿಸಿ, ಸಂಧ್ಯಾ ಕುಲಾಯಿ ಸ್ವಾಗತಿಸಿ, ಚಂದ್ರಶೇಖರ ಪೂಜಾರಿ ವಿದ್ಯಾರ್ಥಿಗಳ ಹೆಸರನ್ನು ವಾಚಿಸಿ, ರವೀಂದ್ರ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ಕಾರ್ಯದರ್ಶಿ ನಿಶಾಲ್ ಧನ್ಯವಾದಗೈದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!