Yuvavahini

MAR 19, 2017 4.04 AM IST

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ಆಂತರ್ಯ – ಮನದೊಳಗಿನ ಮಾತು ಉದ್ಘಾಟನೆ

ಎಲ್ಲಾ ಕ್ಷೇತ್ರದಲ್ಲಿ ಮಹಿಳೆಯರ ಸಾಧನೆಯ ಹಿಂದೆ ಕಲ್ಲು ಮುಳ್ಳುಗಳ ಹಾದಿಯ ಮೂಲಕ ಕಠಿಣವಾದ ಪರಿಶ್ರಮವಿದೆ. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮಹಿಳೆಯರನ್ನು ಗುರುತಿಸಿ ಗೌರವಿಸಿ ಅಭಿನಂದಿಸಿದ ಯುವವಾಹಿನಿ ಕಾರ್ಯ ಶ್ಲಾಘನೀಯ ಎಂದು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ, ಮಂಗಳೂರಿನ ಪ್ರಥಮ ಪ್ರಜೆ ಶ್ರೀಮತಿ ಕವಿತಾ ಸನಿಲ್ ತಿಳಿಸಿದರು.

ಅವರು ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ದಿನಾಂಕ 19.03.2017 ನೇ ಆದಿತ್ಯವಾರ ಶ್ರೀ ಕ್ಷೇತ್ರ ಕುದ್ರೋಳಿಯ ಗ್ಲಾಸ್ ಹೌಸ್­ನಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಜರುಗಿದ ಸಂವೇದನಾ ಶೀಲ ಕಾರ್ಯ ಸಾಧನಾಶೀಲ ಮಹಿಳೆಯರ – ಸಂವಾದ – ಆಂತರ್ಯ – ಮನದೊಳಗಿನ ಮಾತು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಹೆಣ್ಣು ತಾಯಿಯಾಗಿ, ಹೆಂಡತಿಯಾಗಿ, ಅಕ್ಕನಾಗಿ, ತಂಗಿಯಾಗಿ ಮಾತ್ರ ತಮ್ಮ ಜವಾಬ್ದಾರಿ ನಿರ್ವಹಿದರೆ ಸಾಲದು,ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡುವ ಮೂಲಕ ಗೌರವದ ಸ್ಥಾನಮಾನ ಹೊಂದಬೇಕು ಎಂದು ಮುಂಬೈ ಹೈಕೋರ್ಟಿನ ವಕೀಲರಾದ ಶ್ರೀಮತಿ ರೋಹಿಣಿ ಸಾಲ್ಯಾನ್ ಸಮಾರಂಭ ಉದ್ಘಾಟಿಸಿ ಅಭಿಪ್ರಾಯ ಪಟ್ಟರು.

ತೆರೆಮರೆಯಲ್ಲಿರುವ ಪ್ರತಿಭೆಯನ್ನು ಗುರುತಿಸಿ ಗೌರವಿಸಿ ಬೆಳಕಿಗೆ ತರುವ ಕಾರ್ಯವನ್ನು ಯುವವಾಹಿನಿ ಮಾಡುವ ಮೂಲಕ ಮಾದರಿ ಸಂಘಟನೆಯಾಗಿ ಮೂಡಿಬಂದಿದೆ ಎಂದು ಮುಖ್ಯ ಅತಿಥಿಯಗಿ ಮಾತನಾಡಿದ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯದರ್ಶಿ ಗೀತಾಂಜಲಿ ಸುವರ್ಣ ತಿಳಿಸಿದರು.

ಕುದ್ರೋಳಿ ಶ್ರೀ ಗೋಕ್ರಣನಾಥ ಕ್ಷೇತ್ರದ ಅದ್ಯಕ್ಷ ಎಚ್ ಎಸ್ ಸಾಯಿರಾಂ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಯುವವಾಹಿನಿ ಕೇಂದ್ರ ಸಮಿತಿಯ ಅದ್ಯಕ್ಷ ಪದ್ಮನಾಭ ಮರೋಳಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು ಮಹಿಳಾ ಸಂಘಟನಾ ನಿರ್ದೇಶಕಿ ಶ್ರೀಮತಿ ಗುಣವತಿ ರಮೇಶ್ ಪ್ರಸ್ತಾವನೆಯ ಮೂಲಕ ಸ್ವಾಗತಿಸಿದರು, ಪ್ರಧಾನ ಕಾರ್ಯದರ್ಶಿ ನಿತೇಶ್ ಜೆ. ಕರ್ಕೇರಾ ಧನ್ಯವಾದ ನೀಡಿದರು, ಯುವ ಸಾಹಿತಿ ಶ್ರೀಮತಿ ಪ್ರಮೀಳಾ ದೀಪಕ್ ಪೆರ್ಮುದೆ ಹಾಗೂ ನರೇಶ್ ಕುಮಾರ್ ಸಸಿಹಿತ್ಲು ಕಾರ್ಯಕ್ರಮ ನಿರ್ವಹಿಸಿದರು

ಉದ್ಘಾಟನಾ ಸಮಾರಂಭ ಮೊದಲು ರಿತೇಶ್ ಹಾಗೂ ಬಳಗ ಸುರತ್ಕಲ್ ಇವರಿಂದ ಗಾನ – ನೃತ್ಯ – ಕುಂಚ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

One thought on “ಆಂತರ್ಯ – ಮನದೊಳಗಿನ ಮಾತು ಉದ್ಘಾಟನೆ

  1. The programme appears to be held in a befitting manner as seen from the photos. Good selection of the guests. Gunavathi karkera and Manila Chapter deserve to be appreciated.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!