Yuvavahini

AUG 15, 2022 2.57 PM IST

ಯುವವಾಹಿನಿ ಬಂಟ್ವಾಳ ಘಟಕದ ಆಟಿಡೊಂಜಿ ಕೂಟ

ವೈಜ್ಞಾನಿಕ ಕಾರಣಗಳ ಮೂಲಕ ಸಂಸ್ಕೃತಿ ಸಂಸ್ಕಾರದ ಬಗ್ಗೆ ಯುವಜನತೆಗೆ ತಿಳಿಸಿದಾಗ ಯಶಸ್ಸು ಸಾಧ್ಯ : ಡಾ.ಅರುಣ್ ಉಳ್ಳಾಲ್

ಬಂಟ್ವಾಳ : ವಿದೇಶಿ ಸಂಸ್ಕೃತಿ ಬಗ್ಗೆ ಆಕರ್ಷಣೆಗೆ ಒಳಗಾಗುವ ಯುವ ಜನತೆಗೆ ವೈಜ್ಞಾನಿಕ ಕಾರಣಗಳನ್ನು ನೀಡಿ ನಮ್ಮ ಸಂಸ್ಕೃತಿ ಸಂಸ್ಕಾರಗಳ ಬಗ್ಗೆ ಮನವರಿಕೆ ಮಾಡಿದಾಗ ಯುವ ಪೀಳಿಗೆ ನಮ್ಮ ಸಂಸ್ಕೃತಿ ಸಂಸ್ಕಾರವನ್ನು ಉಳಿಸಿ ಬೆಳೆಸುವ ಹಾದಿ ಸುಗಮವಾಗಲಿದೆ ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವ ಸಂಶೋಧಕ, ಉಪನ್ಯಾಸಕ ಡಾ.ಅರುಣ್ ಉಳ್ಳಾಲ್ ಅಭಿಪ್ರಾಯ ಪಟ್ಟರು. ಅವರು ದಿನಾಂಕ 15.08.2022 ರಂದು ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನಲ್ಲಿ ಜರುಗಿದ ಆಟಿಡೊಂಜಿ ಕೂಟ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ಗಣೇಶ್ ಪೂಂಜರೆಕೋಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಉದಯ ಅಮೀನ್ ಮಟ್ಟು, ನೆಕ್ಕಿತಪುಣಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಸೀತಾರಾಮ ಪೂಜಾರಿ, ಬಂಟ್ವಾಳ ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ, ಉದ್ಯಮಿ ಲೋಕೇಶ್ ಕಲ್ಲಡ್ಕ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಯುವವಾಹಿನಿ ಬಂಟ್ವಾಳ ಘಟಕದ ಕಾರ್ಯದರ್ಶಿ ನಾಗೇಶ್ ಪೂಜಾರಿ ನೈಬೇಲು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸನ್ಮಾನ
ಪ್ರಗತಿಪರ ಕೃಷಿಕರಾದ ಮೋಹನ್ ಪೂಜಾರಿ ಅಗ್ರಬೈಲು, ಉದ್ಯಮಿ, ಸಂಘಟಕ, ಧಾರ್ಮಿಕ ಮುಖಂಡ ವಿಶ್ವನಾಥ ಬಿ, ಯುವ ಉದ್ಯಮಿ, ಸಂಘಟಕ ರಾಜೇಶ್ ಸುವರ್ಣ, ಪಾರಂಪರಿಕ ಮೂರ್ತೇದಾರಿಕೆಯ ತನಿಯಪ್ಪ ಪೂಜಾರಿ ಕೇದಗೆ, ಸಾಮಾಜಿಕ ಮುಂದಾಳು, ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತ ನ್ಯಾಯವಾದಿ ಶೈಲಜಾ ರಾಜೇಶ್ ಇವರುಗಳನ್ನು ಸನ್ಮಾನಿಸಲಾಯಿತು. ಪ್ರತಿಮಾ ಅಂಚನ್, ಪ್ರಜಿತ್ ಅಮಿನ್, ಮಧುಸೂದನ್ ಪೂಜಾರಿ ಮದ್ವ, ನಿಕೇಶ್ ಕೋಟ್ಯಾನ್, ಸಂದೀಪ್ ಇವರುಗಳು ಪರಿಚಯಿಸಿದರು. ಮಂಗಳೂರು ತಾಲೂಕು ಬಿಲ್ಲವ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಯುವವಾಹಿನಿ ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ಜಿತೇಂದ್ರ ಜೆ ಸುವರ್ಣ ಇವರನ್ನು ಅಭಿನಂದಿಸಲಾಯಿತು. ಉಪನ್ಯಾಸಕ ಚೇತನ್ ಮುಂಡಾಜೆ ಪ್ರಸ್ತಾವನೆ ಮಾಡಿದರು, ಕೂಟದ ಸಂಚಾಲಕ ಕಿರಣ್‌ರಾಜ್ ಪೂಂಜರೆಕೋಡಿ ಸ್ವಾಗತಿಸಿದರು, ಯುವವಾಹಿನಿ ಕೋಶಾಧಿಕಾರಿ ಧನುಷ್ ಮದ್ವ ಧನ್ಯವಾದ ನೀಡಿದರು, ಯತೀಶ್ ಪೂಜಾರಿ ಶಂಬೂರು ಕಾರ್ಯಕ್ರಮ ನಿರ್ವಹಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!