ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

25 ರ ಸಂಭ್ರಮ : ಬೆಳ್ಳಿ ಬೆಳಕು – 2022,

ಉಪ್ಪಿನಂಗಡಿ:- ಘಟಕವು 25 ಸಂವತ್ಸರಗಳನ್ನು ಪೂರೈಸಿದ ಸವಿನೆನಪಿಗಾಗಿ ಘಟಕವನ್ನು ಮುನ್ನಡೆಸಿದ ಮಾಜಿ ಅಧ್ಯಕ್ಷರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮ ದಿನಾಂಕ 13 ಆಗಸ್ಟ್ 2022ರ ಶನಿವಾರದಂದು ಘಟಕದಲ್ಲಿ 2000-01ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ದಿವಂಗತ ಸದಾನಂದ ದಾಸರಮೂಲೆ ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ತರುವಾಯ ಗುರು ಸ್ಮರಣೆ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಹಾಗೂ ಘಟಕದ ಮಾಜಿ ಅಧ್ಯಕ್ಷರಾದ ಡಾ. ಸದಾನಂದ ಕುಂದರ್ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಘಟಕವನ್ನು ತಮ್ಮ ಅಧ್ಯಕ್ಷಾವಧಿಯಲ್ಲಿ ಯಶಸ್ವಿಯಾಗಿ ಮುನ್ನಡಿಸಿದ ದಿವಂಗತ ಸದಾನಂದ ದಾಸರಮೂಲೆ ಸ್ಮರಣಾರ್ಥ ಅವರ ಧರ್ಮಪತ್ನಿಯಾದ ಚಂದ್ರಕಲಾ ಮತ್ತು ಮಕ್ಕಳಾದ ತೇಜ ಸೂರ್ಯ, ಮನೀಕ್ಷಾ ಇವರುಗಳನ್ನು ಶಾಲು ಹೊದಿಸಿ ಸ್ಮರಣಿಕೆ ನೀಡುವುದರ ಮೂಲಕ ಗೌರವಿಸಲಾಯಿತು.
ಘಟಕದ ಅಧ್ಯಕ್ಷರಾದ ಕುಶಾಲಪ್ಪ ಹತ್ತು ಕಲಸೆ, ಉಪಾಧ್ಯಕ್ಷರಾದ ಮನೋಹರ್ ಅಟಲ್,ಮನೋಜ್ ಸಾಲಿಯಾನ್, ಮಾಜಿ ಅಧ್ಯಕ್ಷರಾದ ಅಜಿತ್ ಕುಮಾರ್ ಪಾಲೇರಿ, ಅಶೋಕ್ ಕುಮಾರ್ ಪಡ್ಪು, ಕಾರ್ಯದರ್ಶಿ ಉದಯ್ ಪೂಜಾರಿ, ಪುನೀತ್ ದಾಸರಮೂಲೆ, ನಾಣ್ಯಪ್ಪ ಕೋಟ್ಯಾನ್, ಹಿರಿಯರಾದ ಬೊಮ್ಮಯ್ಯ ಬಂಗೇರ, ಪದಾಧಿಕಾರಿಗಳಾದ ಮಾಧವ್ ಬಿ.ಕೆ, ಮನೋಹರ್ ಕರುವೇಲ್,ರಕ್ಷಾ ಎಚ್ ಎಸ್ ಸದಸ್ಯರಾದ ಕು. ವರ್ಷ, ಕುಮಾರಿ ಮೇಷ, ಕು. ಶ್ರೀಲಕ್ಷ್ಮಿ, ಮಾಸ್ಟರ್ ದ್ರುವ, ಹಿರೆಬಂಡಾಡಿ ಗ್ರಾಮ ಪಂಚಾಯತ್ ನ ಸದಸ್ಯೆ ಗೀತಾ ದಾಸರಮೂಲೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಅಧ್ಯಕ್ಷರಾದ ಕುಶಾಲಪ್ಪ ಹತ್ತುಕಳಸೆ ಸ್ವಾಗತಿಸಿ, ಉಪಾಧ್ಯಕ್ಷರಾದ ಮನೋಹರ್ ಕುಮಾರ್ ಆಟಲ್ ಧನ್ಯವಾದ ಸಮರ್ಪಿಸಿದರು. ನಾಣ್ಯಪ್ಪ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!