Yuvavahini

AUG 21, 2022 8.12 AM IST

ಡೆನ್ನಾನ- ಡೆನ್ನಾನ - 2022 : ಯುವವಾಹಿನಿಯ ಅಂತರ್ ಘಟಕಗಳ ಸಾಂಸ್ಕೃತಿಕ ಕಾರ್ಯಕ್ರಮ ಡೆನ್ನಾನ ಡೆನ್ನನ ಉದ್ಘಾಟಿಸಿ ಸಚಿವ ಸುನೀಲ್ ಅಭಿಮತ

ಉತ್ತಮ ನಡವಳಿಕೆ ಸಾಂಸ್ಕೃತಿಕ ಚಟುವಟಿಕೆಗೆ ಸಹಕಾರಿ :- ಸುನೀಲ್ ಕುಮಾರ್

ಕಟಪಾಡಿ :- ನಮ್ಮ ನಡವಳಿಕೆಯನ್ನು ರೂಪಿಸಲು ಸಾಂಸ್ಕೃತಿಕ ಚಟುವಟಿಕೆಗಳು ಪರೋಕ್ಷವಾಗಿ ಸಹಾಯ ಮಾಡುತ್ತಿದೆ. ಭಾಷೆ , ಸಂಸ್ಕೃತಿಯ ಒಡನಾಟದಿಂದ ಉತ್ತಮ ನಡವಳಿಕೆ ಮೂಡಲು ಸಾಧ್ಯ. ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಸಮಾಜವನ್ನು ತಿದ್ದಿ ಸುಸಂಸ್ಕೃತ ಸಮಾಜ ನಿರ್ಮಾಣ ಮಾಡುವುದು ಸಾಧ್ಯ ಎಂದು ಇಂಧನ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಹೇಳಿದರು.


ಅವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಹಾಗೂ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಗಿರಿ ಸಭಾಗ್ರಹದಲ್ಲಿ ದಿನಾಂಕ 21 ಆಗಸ್ಟ್ 2022ರ ಭಾನುವಾರ ನಡೆದ ಯುವವಾಹಿನಿಯ ಅಂತರ್ ಘಟಕಗಳ ಸಾಂಸ್ಕೃತಿಕ ಸೌರಭ ಡೆನ್ನಾನ ಡೆನ್ನನ -2022 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಮಾತನಾಡಿ, ಸ್ಪರ್ಧೆಯಲ್ಲಿ ಸೋಲು ಗೆಲುವುಗಳು ಸಹಜ. ಸೋಲನ್ನು ಸವಾಲಾಗಿ ಸ್ವೀಕರಿಸಿದಾಗ ಗೆಲುವಿನ ಮೆಟ್ಟಿಲು ಹತ್ತಿರವಾಗುತ್ತದೆ ಎಂದರು. ಉಡುಪಿ ಘಟಕದ ಅಧ್ಯಕ್ಷ ಪ್ರವೀಣ್ ಡಿ.ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ದ.ಕ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ , ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ , ಕಟಪಾಡಿ ವಿಶ್ವನಾಥ ಕ್ಷೇತ್ರದ ಅಧ್ಯಕ್ಷ ಬಿ ಎನ್ ಶಂಕರ ಪೂಜಾರಿ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿ ಪೂರ್ಣಿಮಾ , ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತ ಗುರುರಾಜ್ ಪೂಜಾರಿ , ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಉದಯ ಅಮೀನ್ ಮಟ್ಟು , ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶಿಲ್ಪಾ ಸುವರ್ಣ, ಉಡುಪಿ ಘಟಕದ ಕಾರ್ಯದರ್ಶಿ ದಯಾನಂದ ಕರ್ಕೇರ , ಕಾರ್ಯಕ್ರಮ ಸಂಚಾಲಕರಾದ ಮಹಾಬಲ ಅಮೀನ್, ಅಶೋಕ್ ಕೋಟ್ಯಾನ್ ಉಪಸ್ಥಿತರಿದ್ದರು. ಉದ್ಘಾಟನಾ ಕಾರ್ಯಕ್ರಮದ ಮೊದಲು ಧ್ವಜಾರೋಹಣವನ್ನು ಉದಯ ಅಮೀನ್ ಮಟ್ಟು ನೆರವೇರಿಸಿದರು. ಇದೇ ವೇಳೆ ಇತ್ತೀಚೆಗೆ ನಮ್ಮನ್ನಗಲಿದ ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಪ್ರವೀಣ್ ನೆಟ್ಟಾರು ಭಾವಚಿತ್ರಕ್ಕೆ ಸಚಿವ ಸುನೀಲ್ ಕುಮಾರ್ ಮತ್ತಿತರ ಗಣ್ಯರು ಪುಷ್ಪಾರ್ಚನೆಗೈದರು. ಈ ಸಂದರ್ಭದಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಿ ಕಂಚಿನ ಪದಕ ವಿಜೇತರಾದ ಗುರುರಾಜ್ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಯುವವಾಹಿನಿ ಕೇಂದ್ರ ಸಮಿತಿಯ ಕಲೆ , ಸಾಹಿತ್ಯ ಮತ್ತು ಸಾಂಸ್ಕೃತಿಕ ನಿರ್ದೇಶಕ ಜಗದೀಶ್ ಸ್ವಾಗತಿಸಿದರು , ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಉದಯ್ ಅಮೀನ್ ಮಟ್ಟು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಘಟಕದ ಕಾರ್ಯದರ್ಶಿ ದಯಾನಂದ ಕರ್ಕೆರ ವಂದಿಸಿದರು. ರೇಣುಕಾ ಕಣಿಯೂರು ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!