Yuvavahini

AUG 21, 2022 8.23 AM IST

ಡೆನ್ನಾನ ಡೆನ್ನನ 2022

ಯುವಾಹಿನಿಯಿಂದ ಕಾಮನ್‌ವೆಲ್ತ್ ಪದಕ ವೀರ ಗುರುರಾಜ್ ಪೂಜಾರಿಗೆ ಗೌರವ ಅಭಿನಂದನೆ

ಕಟಪಾಡಿ :- ಯುನೈಟೆಡ್ ಕಿಂಗ್ಡಮ್ ನ ಬರ್ಮಿಂಗ್ಹ್ಯಾಮ್‌ ನಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ವೇಯ್ಟ್ ಲಿಪ್ಟ್ ವಿಭಾಗದಲ್ಲಿ ದೇಶಕ್ಕೆ ಚೊಚ್ಚಲ ಪದಕ ಪಡೆದು ದೇಶದ ಕೀರ್ತಿ ಪತಾಕೆಯನ್ನು ಹಾರಿಸಿದ ಗುರುರಾಜ್ ಪೂಜಾರಿ ಇವರನ್ನು ಯುವವಾಹಿನಿ ಸಂಸ್ಥೆಯ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು. ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಪದಿ ಸಭಾಗ್ರಹದಲ್ಲಿ ಜರಗಿದ ಯುವವಾಹಿನಿ ಕೇಂದ್ರ ಸಮಿತಿ ಹಾಗೂ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2022 ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ ಸುನೀಲ್ ಕುಮಾರ್ ಸಂಸ್ಥೆಯ ಪರವಾಗಿ ಗೌರವಿಸಿ ಅಭಿಂದಿಸಿದರು.
ಈ ಸಂದರ್ಭದಲ್ಲಿ ಶಾಸಕ ಲಾಲಾಜಿ ಆರ್ ಮೆಂಡನ್, ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್, ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಅಧಿಕಾರಿ ಪೂರ್ಣಿಮಾ, ದ.ಕ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟಗಾರರ ಒಕ್ಕೂಟದ ಅಧ್ಯಕ್ಷ ಯಶ್ ಪಾಲ್ ಸುವರ್ಣ, ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಉದಯ್ ಅಮೀನ್ ಮಟ್ಟು, ಕಟಪಾಡಿ ವಿಶ್ವನಾಥ ಕ್ಷೇತ್ರದ ಅಧ್ಯಕ್ಷ ಇ. ಎನ್ ಶಂಕರ ಪೂಜಾರಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಶಿಲ್ಪಾ ಸುವರ್ಣ, ಉಡುಪಿ ಘಟಕದ ಅಧ್ಯಕ್ಷ ಪ್ರವೀಣ್ ಡಿ.ಪೂಜಾರಿ , ಯುವವಾಹಿನಿ ಕೇಂದ್ರ ಸಮಿತಿಯ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ನಿರ್ದೇಶಕರಾದ ಜಗದೀಶ್ ಕುಮಾರ್ ಉಡುಪಿ ಹಾಗೂ ಡೆನ್ನಾನ ಡೆನ್ನನ ಕಾರ್ಯಕ್ರಮ ಸಂಚಾಲಕರಾದ ಮಹಾಬಲ ಅಮೀನ್ ಮತ್ತು ಅಶೋಕ್ ಕೋಟ್ಯಾನ್ ಉಪಸ್ಥಿತರಿದ್ದರು. ಕೇಂದ್ರ ಸಮಿತಿಯ ನಿರ್ದೇಶಕರಾದ ಜಗದೀಶ್ ಕುಮಾರ್ ಸ್ವಾಗತಿಸಿ, ಘಟಕದ ಕಾರ್ಯದರ್ಶಿ ದಯಾನಂದ ಕರ್ಕೆರ ವಂದಿಸಿ, ರೇಣುಕಾ ಕಣಿಯೂರು ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!