ಯುವವಾಹಿನಿ ಸಾಂಸ್ಕೃತಿಕ ಸೌರಭ : ಡೆನ್ನಾನ ಡೆನ್ನನ - 2022

ಡೆನ್ನಾನ ಡೆನ್ನನ – 2022 : ದ್ವೀತಿಯ ಬಹುಮಾನ : ಯುವವಾಹಿನಿ ಹಳೆಯಂಗಡಿ ಘಟಕ

ಕಟಪಾಡಿ :- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಸಂಸ್ಥೆಯ ವರ್ಷದ ಪ್ರತಿಷ್ಠಿತ ಸಾಂಸ್ಕೃತಿಕ ಸೌರಭ, ಡೆನ್ನಾನ ಡೆನ್ನನ – 2022ನೇ ಸಾಲಿನ ದ್ವೀತಿಯ ಬಹುಮಾನವನ್ನು ಯುವವಾಹಿನಿ ಹಳೆಯಂಗಡಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ.

ದಿನಾಂಕ 21 ಆಗಸ್ಟ್ 2022ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಪದಿ ಸಭಾಗೃಹದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2022 ಕಾರ್ಯಕ್ರಮದಲ್ಲಿ ಭಾಗವಹಿಸಿದ ಯುವವಾಹಿನಿಯ 20 ಘಟಕಗಳ ತೀವ್ರ ಪೈಪೋಟಿಯ ಸ್ಪರ್ಧೆಯಲ್ಲಿ ತೀರ್ಪುಗಾರರ ಮೆಚ್ಚುಗೆ ಗಳಿಸಿ ಹಳೆಯಂಗಡಿ ಘಟಕವು ದ್ವೀತಿಯ ಬಹುಮಾನ ಪಡೆಯಿತು.

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಹಳೆಯಂಗಡಿ ಘಟಕವು ಪ್ರಶಸ್ತಿ ಫಲಕ ಹಾಗೂ ರೂ 15000/- ನಗದು ಹಾಗೂ ವೈಯಕ್ತಿಕ ಶ್ರೇಷ್ಠ ನಿರ್ವಹಣೆಗಾಗಿ ನಿರ್ಮಿತಾ ಹಳೆಯಂಗಡಿ ವೈಯಕ್ತಿಕ ಬಹುಮಾನಕ್ಕೆ ಪಡೆದರು. ಸಮಾರೋಪ ಸಮಾರಂಭದಲ್ಲಿ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆರವರು ಪ್ರಶಸ್ತಿ ಫಲಕ ಹಾಗೂ ನಗದನ್ನು ಹಳೆಯಂಗಡಿ ಘಟಕದ ಸದಸ್ಯರಿಗೆ ಹಸ್ತಾಂತರಿಸಿದರು. ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ , ನಾರಾಯಣಗುರು ಅರ್ಬನ್ ಕೋ- ಆಪರೇಟಿವ್ ಬ್ಯಾಂಕ್‌ ಅಧ್ಯಕ್ಷರಾದ ಹರಿಶ್ಚಂದ್ರ ಅಮೀನ್, ಉಡುಪಿ ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ, ಉಡುಪಿ ಜಿಲ್ಲೆಯ ಬಿಲ್ಲವ ಪರಿಷತ್‌ ಅಧ್ಯಕ್ಷರಾದ ನವೀನ್ ಅಮೀನ್ ಶಂಕರಪುರ, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ದೀಪಕ್ ಕುಮಾರ್ ಎರ್ಮಾಳ್, ಕಾಪು ಬಿಲ್ಲವರ ಸಹಾಯಕ ಸಂಘದ ಗೌರವ ಅಧ್ಯಕ್ಷರಾದ ಪ್ರಭಾಕ‌ರ ಪೂಜಾರಿ, ಯುವವಾಹಿನಿ ಉಡುಪಿ ಘಟಕದ ಕಾರ್ಯದರ್ಶಿ ದಯಾನಂದ ಕರ್ಕೇರ, ಯುವವಾಹಿನಿ ಕೇಂದ್ರ ಸಮಿತಿಯ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ನಿರ್ದೇಶಕರಾದ ಜಗದೀಶ್ ಕುಮಾರ್ ಕಾರ್ಯಕ್ರಮ, ಮಹಾಬಲ ಅಮೀನ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ವಹಿಸಿದ್ದರು. ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷರಾದ ಪ್ರವೀಣ್ ಡಿ. ಪೂಜಾರಿ ಸ್ವಾಗತಿಸಿದರು. ಮಾಣಿ ಘಟಕದ ಕಾರ್ಯದರ್ಶಿ ರೇಣುಕಾ ಕಣಿಯೂರು ಮತ್ತು ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮ ಸಂಚಾಲಕರಾದ ಅಶೋಕ್ ಕೋಟ್ಯಾನ್ ಸ್ಪರ್ಧಾ ವಿಜೇತರ ಪಟ್ಟಿ ವಾಚಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!