Yuvavahini

SEP 03, 2022 4.03 PM IST

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

25ರ ಸಂಭ್ರಮ, ಬೆಳ್ಳಿ ಬೆಳಕು – 2022

ಉಪ್ಪಿನಂಗಡಿ :- ಯುವವಾಹಿನಿ ಉಪ್ಪಿನಂಗಡಿ ಘಟಕವು 25 ಸಂವತ್ಸರಗಳನ್ನು ಪೊರೈಸಿದ ಸವಿನೆನಪಿಗಾಗಿ ಘಟಕದ ಮಾಜಿ ಅಧ್ಯಕ್ಷ ರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮ ದಿ.03 ಸೆಪ್ಟೆಂಬರ್ 2022ರ ಶನಿವಾರ ಸಂಜೆ ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕವನ್ನು 2007-2008ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಡಾ.ಸದಾನಂದ ಕುಂದರ್ ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ತರುವಾಯ ಗುರು ಸ್ಮರಣೆ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷರು ಹಾಗೂ ಉಪ್ಪಿನಂಗಡಿ ಘಟಕದ ಮಾಜಿ ಅಧ್ಯಕ್ಷರಾದ ಡಾ.ರಾಜರಾಮ್ ಕೆ ಬಿ ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಘಟಕವನ್ನು ತಮ್ಮ ಅಧ್ಯಕ್ಷಾವಧಿಯಲ್ಲಿ ಯಶಸ್ವಿಯಾಗಿ ಮುನ್ನಡೆಸಿದ ಡಾ. ಸದಾನಂದ ಕುಂದರ್ ಹಾಗೂ ಹೇಮಾವತಿ ದಂಪತಿಗಳನ್ನು ಶಾಲು ಹೊದಿಸಿ ಸ್ಮರಣಿಕೆ ನೀಡುವುದರ ಮೂಲಕ ಗೌರವಿಸಲಾಯಿತು. ಗೌರವ ಸ್ವೀಕರಿಸಿ ಮಾತನಾಡಿದ ಡಾ. ಸದಾನಂದ ಕುಂದರ್ ರವರು ವಿವಿಧ ಸಂಘ ಸಂಸ್ಥೆಗಳ ಜವಾಬ್ದಾರಿಯನ್ನು ವಹಿಸಿಕೊಂಡು ಯಶಸ್ವಿಯಾಗಿ ನಿರ್ವಸಿದ ಅನುಭವ ಹಂಚಿಕೊಂಡರು.. ಘಟಕದ ಅಧ್ಯಕ್ಷರಾದ ಕುಶಾಲಪ್ಪ ಹತ್ತು ಕಳಸೆ, ಮಾಜಿ ಅಧ್ಯಕ್ಷರಾದ ಅಜಿತ್ ಕುಮಾರ್ ಪಾಲೇರಿ, ಹಿರಿಯರಾದ ಬೊಮ್ಮಯ್ಯ ಬಂಗೇರ, ಘಟಕದ ಕಾರ್ಯದರ್ಶಿ ಉದಯ್ ಪೂಜಾರಿ, ಕೋಶಾಧಿಕಾರಿ ಸುರೇಶ್, ಪದಾಧಿಕಾರಿಗಳಾದ ಮಾಧವ್ ಬಿ.ಕೆ, ಅಂಕಿತ್ ಪೂಜಾರಿ, ಮನೋಹರ್ ಕರುವೇಲ್, ತುಳಸಿದರ್ ಬೆನೆಪ್ಪು, ರಕ್ಷಾ ಎಚ್ ಎಸ್, ಬಿಲ್ಲವ ಗ್ರಾಮ ಸಮಿತಿ ಬೆಳ್ಳಿಪಾಡಿಯ ಅಧ್ಯಕ್ಷರಾದ ವಸಂತ್ ಪೂಜಾರಿ, ಘಟಕದ ಸದಸ್ಯರಾದ ರಮೇಶ್ ಕರ್ವೆಲು, ಸಂತೋಷ್ ಕರುವೇಲ್, ಸವಿತಾ ಕುಕ್ಕುಜೆ, ಕು. ವರ್ಷ, ಕು. ಮೇಷ, ಕು.ಸುಶ್ಮಿತಾ, ಕು. ರಕ್ಷಿತಾ, ಕು.ಆಕ್ರತಿ, ಕು.ಹರ್ಷಿತಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕುಶಾಲಪ್ಪ ಹತ್ತುಕಳಸೆ ಸ್ವಾಗತಿಸಿ,ಉಪಾಧ್ಯಕ್ಷರಾದ ಮನೋಹರ್ ಆಟಲ್ ಧನ್ಯವಾದ ಸಮರ್ಪಿಸಿದರು. ಘಟಕದ ನಿಕಟಪೂರ್ವ ಕಾರ್ಯದರ್ಶಿ ನಾಣ್ಯಪ್ಪ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!