Yuvavahini

SEP 10, 2022 5.26 PM IST

ಯುವವಾಹಿನಿ ಬಂಟ್ವಾಳ ಘಟಕ

ನಾರಾಯಣಗುರುಗಳು ಸಾರಿದ ಸಾರ್ವಕಾಲಿಕ ಮೌಲ್ಯಗಳು ನಿಜ ಅರ್ಥದಲ್ಲಿ ಅನುಷ್ಟಾನಕ್ಕೆ ಬರಲೇಬೇಕಾದ ತುರ್ತು ಇಂದಿನ ಸಮಾಜಕ್ಕಿದೆ : ರಮೇಶ್ ತುಂಬೆ

ನಾರಾಯಣಗುರುಗಳು ಸಾರಿದ ಸಾರ್ವಕಾಲಿಕ ಮೌಲ್ಯಗಳು ನಿಜ ಅರ್ಥದಲ್ಲಿ ಅನುಷ್ಟಾನಕ್ಕೆ ಬರಲೇಬೇಕಾದ ತುರ್ತು ಇಂದಿನ ಸಮಾಜಕ್ಕಿದೆ. ಓರ್ವ ಸಾಧಕನ‌ ನೆಲೆ ಮತ್ತು ಬೆಲೆಗಳೆರಡೂ ಮಹತ್ವ ಪಡೆದುಕೊಳ್ಳುವುದು ಆತನಿದ್ದ ಕಾಲಕ್ಕಿಂತಲೂ ಆತನಿಲ್ಲದ ಕಾಲದಲ್ಲಿ ಅದು ಕಾರ್ಯೋನ್ಮುಖ ಗೊಳ್ಳುವುದರಲ್ಲಿ. ತಾನಿಲ್ಲದ ಕಾಲದಲ್ಲಿ ತನ್ನಿರುವನ್ನು ಉಳಿಸಬೇಕಾದರೆ ಅವನ ಜೀವನ ಕ್ರಮ ಮತ್ತು ಸಾಧನೆಗಳು ಕಾಲಾತೀತವಾಗಿರಬೇಕು. ಈ ನಿಟ್ಟಿನಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳು ವರ್ತಮಾನಕ್ಕೂ ಭವಿಷ್ಯದ ಎಲ್ಲಾ ತಲೆಮಾರುಗಳಿಗೂ ಪ್ರಸ್ತುತವೆನಿಸುವ ಸಾರ್ವಕಾಲಿಕ ದಾರ್ಶನಿಕರು. ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ಎಮ್ ತುಂಬೆ ತಿಳಿಸಿದರು.

ಅವರು ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ, ಬಿ.ಸಿ.ರೋಡ್ ಸಮಾಜ ಕಲ್ಯಾಣ ಇಲಾಖಾ ವಸತಿ ಶಾಲೆಯಲ್ಲಿ ಜರುಗಿದ ಬ್ರಹ್ಮಶ್ರೀ ನಾರಾಯಣಗುರುಗಳ 168ನೇ ಜನ್ಮ ದಿನಾಚರಣೆಯ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು, ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ರಾಜೇಶ್ ಬಿ ಸಮಾರಂಭ ಉದ್ಘಾಟಿಸಿದರು. ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ಗಣೇಶ್ ಪೂಂಜರೆಕೋಡಿ ಸಮಾರಂಭ ಅಧ್ಯಕ್ಷತೆ ವಹಿಸಿದ್ದರು.

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕೋಶಾಧಿಕಾರಿ ಉಮೇಶ್ ಸುವರ್ಣ ತುಂಬೆ, ಬಂಟ್ವಾಳ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಪ್ರೇಮನಾಥ್ ಕೆ, ಯುವವಾಹಿನಿ ಬಂಟ್ವಾಳ ಘಟಕದ ಕಾರ್ಯದರ್ಶಿ ನಾಗೇಶ್ ಪೂಜಾರಿ ನೈಬೇಲು, ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರಾದ ನಾಗೇಶ್ ಏಲಾಬೆ, ಸಮಾಜ ಕಲ್ಯಾಣ ಇಲಾಖಾ ವಸತಿ ಶಾಲೆಯ ಮೇಲ್ವಿಚಾರಕರಾದ ಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲು, ಸಿಹಿ ತಿಂಡಿ ಹಾಗೂ ಶಾಲಾ ಸಾಮಗ್ರಿಗಳನ್ನು ವಿತರಿಸಲಾಯಿತು. ಯುವವಾಹಿನಿ ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ಬಿ.ಶ್ರೀಧರ್ ಅಮೀನ್ ಕಾರ್ಯಕ್ರಮ ನಿರೂಪಿಸಿದರು, ಉಪಾಧ್ಯಕ್ಷ ಹರೀಶ್ ಕೋಟ್ಯಾನ್ ಕುದನೆ ಧನ್ಯವಾದ ನೀಡಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!