Yuvavahini

NOV 14, 2022 2.48 PM IST

ಯುವವಾಹಿನಿ (ರಿ.) ಕೂಳೂರು ಘಟಕ

ಅಂಗನವಾಡಿ ಪುಟಾಣಿ ಮಕ್ಕಳ ಜೊತೆ ಮಕ್ಕಳ ದಿನಾಚರಣೆ ಆಚರಣೆ

ಕೂಳೂರು :- ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಮಕ್ಕಳ ದಿನಾಚರಣೆಯ ಅಂಗವಾಗಿ ಮಂಜೊಟ್ಟಿ ಅಂಗನವಾಡಿ ಕೇಂದ್ರ ಪಂಜಿಮೋಗರು ನಲ್ಲಿ ದಿನಾಂಕ 14 ನವೆಂಬರ್ 2022ರ ಸೋಮವಾರದಂದು ಬೆಳಗ್ಗೆ ಶಾಲಾ ಶಿಕ್ಷಕಿಯಾದ ಪ್ರಮೀಳರವರು ನಾರಾಯಣ ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಯಂತ್ ಸುವರ್ಣರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜವಹಾರ ಲಾಲ್ ನೆಹರು ರವರ ಜನ್ಮ ದಿನದ ಅಂಗವಾಗಿ ನೆಹರೂರವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ನಂತರ ಅಂಗನವಾಡಿ ಪುಟಾಣಿ ಮಕ್ಕಳ ಜೊತೆ ಸೇರಿ ಕೇಕ್ ಕಟ್ ಮಾಡುವ ಮೂಲಕ ಸಂಭ್ರಮಿಸಿ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಘಟಕದ ಅಧ್ಯಕ್ಷರಾದ ದೀಕ್ಷಿತ್ ಸಿ ಎಸ್ ಕಾರ್ಯಕ್ರಮ ನಡೆಸಲು ಅನುವು ಮಾಡಿ ಕೊಟ್ಟ ಶಾಲಾ ಶಿಕ್ಷಕಿ ಪ್ರಮೀಳಾ ಹಾಗೂ ಸಹಾಯಕಿಯಾದ ಲೋಲಾಕ್ಷಿಯವರಿಗೆ ಧನ್ಯವಾದ ತಿಳಿಸಿ ಕಾರ್ಯಕ್ರಮ ನಡೆಸಲು ಸಹಕರಿಸಿದ ಎಲ್ಲರಿಗೂ ಧನ್ಯವಾದ ತಿಳಿಸಿದರು. ಕಾರ್ಯಕ್ರಮದಲ್ಲಿ ಘಟಕದ ಮಾಜಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಭಾಸ್ಕರ್ ಕೋಟ್ಯಾನ್, ಮಾರ್ಗದರ್ಶಕರಾದ ಚಂದಪ್ಪ ಸನಿಲ್, ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಘಟಕದ ಸದಸ್ಯರಾದ ಹರ್ಷಿತಾ ಪ್ರಾರ್ಥಿಸಿದರು. ಅಂಗನವಾಡಿ ಶಿಕ್ಷಕಿ ಪ್ರಮೀಳಾ ಎಲ್ಲರನ್ನೂ ಸ್ವಾಗತಿಸಿದರು. ಮಾತೃ ಸ್ಪರ್ಶ ನಿರ್ದೇಶಕರಾದ ಇಂದಿರಾ ಸುರೇಶ್ ನಿರೂಪಿಸಿದರು. ಕಾರ್ಯದರ್ಶಿ ಧನ್ಯವಾದ ಸಲ್ಲಿಸಿದರು. ಕೊನೆಯಲ್ಲಿ ಲಘು ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!