Yuvavahini

DEC 03, 2022 3.10 PM IST

ಯುವವಾಹಿನಿ (ರಿ.) ಕೂಳೂರು ಘಟಕ

ವಿದ್ಯಾನಿಧಿಯ ಸದ್ಬಳಕೆಯೊಂದಿಗೆ ಸಮಾಜದ ಸತ್ಪ್ರಜೆಗಳಾಗಿ :- ಉದಯ ಅಮೀನ್ ಮಟ್ಟು ಆಶಯ

ಕೂಳೂರು :- ಸಮಾಜದಲ್ಲಿರುವ ಪ್ರತಿಭಾನ್ವಿತ, ಬಡ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಯುವವಾಹಿನಿ (ರಿ.) ಕೂಳೂರು ಘಟಕ ಕಳೆದ 7 ವರುಷಗಳಿಂದ ವಿದ್ಯಾನಿಧಿ ನೀಡುತ್ತಾ ಬಂದಿದೆ . ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದು ಉನ್ನತ ಅಂಕ ಗಳಿಸಿ ಸಮಾಜದಲ್ಲಿ ಉನ್ನತ ಸ್ಥಾನಮಾನ ಪಡೆಯಬೇಕು ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿ ಅಧ್ಯಕ್ಷ ಉದಯ ಅಮೀನ್ ಮಟ್ಟು ಕೂಳೂರಿನ ಪಂಪ್ ಹೌಸ್ ಬಳಿ ದಿನಾಂಕ 03 ಡಿಸೆಂಬರ್ 2022ರ ಶನಿವಾರದಂದು ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ನಡೆದ ವಿದ್ಯಾನಿಧಿ ಅರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ಅದೆಷ್ಟೋ ವಿದ್ಯಾರ್ಥಿಗಳು ಪ್ರತಿಭಾನ್ವಿತರಾಗಿರುತ್ತಾರೆ. ಆದರೆ ಕಲಿಯಲು ಅನುಕೂಲವಿಲ್ಲದೆ ಅರ್ಧದಲ್ಲಿ ವಿದ್ಯಾಭ್ಯಾಸ ಕಡಿತಗೊಳ್ಳುವ ಅಪಾಯವಿರುತ್ತದೆ. ಅಂಥವರನ್ನು ಗುರುತಿಸಿ ನೆರವು ನೀಡುವುದು ಪುಣ್ಯದ ಕಾರ್ಯ. ವಿದ್ಯಾರ್ಥಿಗಳೂ ಇಲ್ಲಿ ಪಡೆದ ಸಹಾಯವನ್ನು ಮರೆಯದೆ ಉತ್ತಮ ಅಂಕ ಗಳಿಸಿ ಮುಂದೆ ಉನ್ನತ ಹುದ್ದೆ ಪಡೆದು ಮತ್ತೊಬ್ಬರಿಗೆ ಸಹಾಯ ಮಾಡುವ ಗುಣ ರೂಢಿಸಿಕೊಳ್ಳಬೇಕು ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಕಿರಣ್ ಕುಮಾರ್ ಮತ್ತು ಅನಿಲ್ ಕುಮಾರ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಎಲ್ಲರಿಗೂ ಶುಭ ಹಾರೈಸಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಘಟಕದ ಅಧ್ಯಕ್ಷರಾದ ದೀಕ್ಷಿತ್ ಸಿ ಎಸ್ ರವರು ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಎಲ್ಲರಿಗೂ ಧನ್ಯವಾದ ತಿಳಿಸಿದರು. ಘಟಕವು ಯುವವಾಹಿನಿ ಯ ಪ್ರಮುಖ ಧ್ಯೇಯಗಳಲ್ಲೊಂದಾದ ವಿದ್ಯೆಗೆ ಹೆಚ್ಚಿನ ಮಹತ್ವವನ್ನು ಕೊಡುತ್ತಾ ಬಂದಿದ್ದು ಘಟಕವು ಪ್ರಾರಂಭದಿಂದಲೂ ಪ್ರತಿ ವರುಷ ವಿದ್ಯಾನಿಧಿ ನೀಡುತ್ತಾ ಬಂದಿರುತ್ತದೆ. ಮಾಜಿ ಅಧ್ಯಕ್ಷರುಗಳ, ಮಾರ್ಗದರ್ಶಕರುಗಳ, ನಿಕಟ ಪೂರ್ವ ಅಧ್ಯಕ್ಷರ ಸಲಹೆ ಸಹಕಾರ ಸದಾ ನಮ್ಮ ಯಶಸ್ಸಿಗೆ ಕಾರಣವಾಗಿದೆ ಎಂದು ಹೇಳಿದರು. ವಿದ್ಯಾ ನಿಧಿ ಪಡೆದ ವಿದ್ಯಾರ್ಥಿಗಳು ಅದನ್ನು ಸದುಪಯೋಗಪಡಿಸಿ ಉತ್ತಮ ಪ್ರಜೆಗಳಾಗಿ ಮೂಡಿ ಬನ್ನಿ ಎಂದು ಶುಭ ಹಾರೈಸಿದರು. ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ನಿಯೋಜಿತ ಅಧ್ಯಕ್ಷರಾದ ರಾಜೇಶ್ ಬಂಟ್ವಾಳ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಜಗನ್ನಾಥ ಶೆಟ್ಟಿ ಪಂಪ್‌ಹೌಸ್ ಕೂಳೂರು, ಕೂಳೂರು ಘಟಕದ ಮಾರ್ಗದರ್ಶಕರಾದ ಜಯಾನಂದ ಅಮೀನ್ ಪುಣ್ಕೆಮಾರ್ ಮುಖ್ಯ ಅತಿಥಿಗಳಾಗಿದ್ದರು. ವೇದಿಕೆಯಲ್ಲಿ ಕಾರ್ಯದರ್ಶಿ ಸುಮಾ ಶಿವು ಕೋಡಿಕಲ್, ಕಾರ್ಯಕ್ರಮದ ಸಂಚಾಲಕರಾದ ವಾರ್ತಾ ಮತ್ತು ಪ್ರಚಾರ ನಿರ್ದೇಶಕ ರೋಹಿತ್ ಕುಮಾರ್, ವಿದ್ಯಾನಿಧಿ ನಿರ್ದೇಶಕರಾದ ಸುಮಂಗಲಾ ಸಿ.ಕೋಟ್ಯಾನ್ ಉಪಸ್ಥಿತರಿದ್ದರು. ಘಟಕದ ನಿಕಟ ಪೂರ್ವ ಅಧ್ಯಕ್ಷರಾದ ನಯನ ರಮೇಶ್, ಎರಡನೇ ಉಪಾಧ್ಯಕ್ಷರಾದ ಯಶವಂತ್ ಪೂಜಾರಿ, ಮಾರ್ಗದರ್ಶಕರಾದ ಚಂದಪ್ಪ ಸನಿಲ್, ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷರಾದ ಸಂಜೀವ ಪೂಜಾರಿ, ಕೇಂದ್ರ ಸಮಿತಿ ಮತ್ತು ಇತರ ಘಟಕಗಳ ಮಾಜಿ ಅಧ್ಯಕ್ಷರು, ಅಧ್ಯಕ್ಷರು, ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದರು. ಘಟಕದ ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ ಪ್ರಾಸ್ತಾವಿಕ ಮಾತನಾಡಿದರು. ಶೈಲೇಶ್ ಬೈಕಂಪಾಡಿ ಮತ್ತು ಮಧುಶ್ರೀ ಪ್ರಶಾಂತ್ ಕಾರ್ಯಕ್ರಮ ನಿರ್ವಹಿಸಿದರು. ಕುಮಾರಿ ಪ್ರತೀಕ್ಷಾ ಮತ್ತು ಕುಮಾರಿ ಸ್ವಾತಿ ಪ್ರಾರ್ಥಿಸಿದರು. ಸಂಚಾಲಕರಾದ ರೋಹಿತ್ ಧನ್ಯವಾದ ಸಲ್ಲಿಸಿದರು. ಸಭಾ ಕಾರ್ಯಕ್ರಮದ ಬಳಿಕ ತೆಲಿಕೆದ ಬೊಳ್ಳಿ ಡಾ.ದೇವದಾಸ್ ಕಾಪಿಕಾಡ್ ರಚಿಸಿ, ನಟಿಸಿ, ನಿರ್ದೇಶಿಸಿದ ನಾಯಿದ ಬೀಲ ನಾಟಕ ಪ್ರದರ್ಶನಗೊಂಡಿತು.
42 ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ಅಂಗವಾಗಿ 1.26 ಲಕ್ಷ ರೂ. ವಿದ್ಯಾರ್ಥಿವೇತನ ಮತ್ತು . ಕೇಂದ್ರ ಸಮಿತಿಯ ವಿದ್ಯಾನಿಧಿಗೆ 10,000 ರೂ. ನೀಡಲಾಯಿತು. ಪತ್ರಕರ್ತ ಮೋಹನದಾಸ್ ಮರಕಡ, ಎನ್ನೆಸ್ಸೆಸ್ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ರಶ್ಮಿ ಜೆ.ಅಂಚನ್, ಸಮಾಜಸೇವಾ ಚಟುವಟಿಕೆಗಾಗಿ ಮಹೇಶ್ ಅಮೀನ್ ಅವರನ್ನು ಸನ್ಮಾನಿಸಲಾಯಿತು. ವಿದ್ಯಾನಿಧಿ ಸಹಾಯ ಧನ ನೀಡಿದ ದಾನಿಗಳನ್ನು ಗುರುತಿಸಿ ಗೌರವಿಸಲಾಯಿತು. ಘಟಕದ ಮಾಜಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಮತ್ತು ಭಾಸ್ಕರ್ ಕೋಟ್ಯಾನ್ ರವರನ್ನು ಘಟಕಕ್ಕೆ ಸಲ್ಲಿಸಿದ ಸೇವೆಗಾಗಿ ಸನ್ಮಾನಿಸಲಾಯಿತು. ನಾಟಕದ ಅಂಗವಾಗಿ ಮಾಡಿದ ಲಕ್ಕಿ ಕೂಪನ್ ಡ್ರಾ ಮಾಡಲಾಯಿತು. ಕಾರ್ಯಕ್ರಮದ ಕೊನೆಗೆ ತೆಲಿಕೆದ ಬೊಳ್ಳಿ ಡಾ.ದೇವದಾಸ್ ಕಾಪಿಕಾಡ್, ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್, ನವರಸರಾಜೆ ಭೋಜರಾಜ್ ವಾಮಂಜೂರು ಅವರನ್ನು ಗೌರವಿಸಲಾಯಿತು. ನಾಟಕ ಕಾರ್ಯಕ್ರಮವನ್ನು ಸುಮಾರು 1500 ಜನ ವೀಕ್ಷಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!