ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶದಲ್ಲಿ

ಯುವವಾಹಿನಿ ಮುಖವಾಣಿ ಯುವಸಿಂಚನ ವಾರ್ಷಿಕ ವಿಶೇಷಾಂಕ ಬಿಡುಗಡೆ

ಮುಲ್ಕಿ:- ದಿನಾಂಕ 25 ಡಿಸೆಂಬರ್ 2022 ರಂದು ಮುಲ್ಕಿಯ ವಿಜಯಾ ಕಾಲೇಜಿನ, ಅರ್ಪಣ ತೆರೆದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಮುಖವಾಣಿ ಯುವಸಿಂಚನ ವಾರ್ಷಿಕ ವಿಶೇಷಾಂಕವನ್ನು ಕರ್ನಾಟಕ ಸರಕಾರದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ ವಿ.ಸುನೀಲ್ ಕುಮಾರ್ ರಥದ ಮೂಲಕ ಕಳಶದಿಂದ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷರಾದ ಸೂರ್ಯಕಾಂತ್ ಜೆ ಸುವರ್ಣ, ಶ್ರೀ ನಾರಾಯಣ ಗುರು ಕಾಲೇಜು ಕುದ್ರೋಳಿ ಇದರ ಉಪನ್ಯಾಸಕರಾದ ಕೇಶವ ಬಂಗೇರ , ಮುಲ್ಕಿ ಮೂಡಬಿದಿರೆ ಕ್ಷೇತ್ರದ ಶಾಸಕರಾದ ಉಮನಾಥ್ ಕೋಟ್ಯಾನ್, ಚಲನಚಿತ್ರನಟ ರಾಹುಲ್ ಅಮೀನ್ ,ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ, ಯುವಸಿಂಚನ ಸಂಪಾದಕರಾದ ದಿನಕರ ಡಿ. ಬಂಗೇರ, ಕಾರ್ಯನಿರ್ವಾಹಕ ಸಂಪಾದಕರಾದ ಭಾಸ್ಕರ್ ಕೋಟ್ಯಾನ್ ಕೂಳೂರು, ಸಮಾವೇಶ ನಿರ್ದೇಶಕರಾದ ಹರೀಂದ್ರ ಸುವರ್ಣ, ಸಮಾವೇಶ ಸಂಚಾಲಕರಾದ ಭಾರತಿ ಭಾಸ್ಕರ ಕೋಟ್ಯಾನ್ ಮತ್ತು ಎಲ್ಲಾ 33 ಘಟಕಗಳ ಅಧ್ಯಕ್ಷರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!