Yuvavahini

DEC 24, 2023 11.27 AM IST

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶದ ಸುಸಂದರ್ಭದಲ್ಲಿ

ಕೆ.ಚಿತ್ತರಂಜನ್ ಗರೋಡಿ ಇವರಿಗೆ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ ಪ್ರದಾನ

ಬಂಟ್ವಾಳ : ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದ ಅನನ್ಯ ಸೇವೆ ಹಾಗೂ ಕಂಕನಾಡಿ ಗರಡಿ ಕ್ಷೇತ್ರ ಅಧ್ಯಕ್ಷರಾಗಿ ನಿಸ್ವಾರ್ಥವಾಗಿ ಸಲ್ಲಿಸಿದ ಸೇವೆಯು ಗರಡಿಯ ಮೂಲ ಬೆಳವಣಿಗೆಗೆ ಕಾರಿಣಿಕರ್ತರೆಂದು ಗುರುತಿಸಿ ಬಂಟ್ವಾಳದ ಬೆಂಜನಪದವು ಶುಭಲಕ್ಷೀ ಅಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದಲ್ಲಿ 2023 ನೇ ಸಾಲಿನ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ : ಚಿತ್ತರಂಜನ್ ಗರೋಡಿ

ಈ ಸಂದರ್ಭದಲ್ಲಿ ಸಮಾರಂಭದ ಉದ್ಘಾಟಕರಾದ ಪದ್ಮರಾಜ್.ಆರ್, ಕೇಂದ್ರ ಸಮಿತಿ ಅಧ್ಯಕ್ಷರು ರಾಜೇಶ್.ಬಿ, ನಾರ್ದನ್ ಸ್ಲೈ ನಿರ್ದೇಶಕರಾದ ಕೃತೀನ್ ಅಮೀನ್, ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷರು ಡಾ।ತುಕಾರಾಮ ಪೂಜಾರಿ, ಉದ್ಯಮಿಗಳಾದ ನಿರ್ಮಲ್ ಜಗನ್ನಾಥ ಬಂಗೇರ, ನಟೇಶ್ ಪೂಜಾರಿ, ಲೋಕೇಶ್ ಪೂಜಾರಿ ಕಲ್ಲಡ್ಕ, ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾದ ಹರೀಶ್ ಕೋಟ್ಯಾನ್ ಕುದನೆ, ವಾರ್ಷಿಕ ಸಮಾವೇಶದ ನಿರ್ದೇಶಕರಾದ ಭುವನೇಶ್ ಪಚ್ಚಿನಡ್ಕ, ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಧಾನ ಕಾರ್ಯದರ್ಶಿ ಕುಸುಮಾಕರ ಕುಂಪಲ,ನೂತನ ಅಧ್ಯಕ್ಷರಾದ ಹರೀಶ್.ಕೆ.ಪೂಜಾರಿ, ನೂತನ ಪ್ರಧಾನ ಕಾರ್ಯದರ್ಶಿ ಜಗದೀಶ್‌ಚಂದ್ರ ಡಿ.ಕೆ ಹಾಗೂ ಯುವವಾಹಿನಿಯ 33 ಘಟಕಗಳ ಅಧ್ಯಕ್ಷರುಗಳ ಸಮ್ಮುಖದಲ್ಲಿ ಕೊಂಬು ವಾದ್ಯಗಳ ಹಿಮ್ಮೇಳದ ಸ್ವಾಗತದೊಂದಿಗೆ ವೇದಿಕೆಗೆ ಬರಮಾಡಿಕೊಂಡು, ಶ್ರೀಯುತರು ನಡೆದ ಬಂದ ಹಾದಿಯ ರೂಪುರೇಷೆ ಸಾಧನಾ ಪರಿಚಯವನ್ನು ಸಾಕ್ಷ್ಯ ಚಿತ್ರದ ಮೂಲಕ, ಮೈಸೂರು ಪೇಟ, ಜರಿತಾರಿ ಶಾಲು, ಅತ್ಯಾಕರ್ಷಕ ಸ್ಮರಣಿಕೆ ಹಾಗೂ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ 2023 ಪತ್ರ ನೀಡಿ ಗೌರವ ಆದರಗಳಿಂದ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ – 2023

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!