Yuvavahini

FEB 04, 2024 7.26 AM IST

ಮಂಗಳೂರು ನಾಗರಿಕ ಸಮಿತಿಯಿಂದ ಬೀಳ್ಕೊಡುಗೆ ಸಮಾರಂಭದಲ್ಲಿ ಯುವವಾಹಿನಿ ಅಭಿನಂದನೆ

ಪ್ರೀತಿಯಿಂದ ಕುಡ್ಲದ ಜನತೆ ಮನಗೆದ್ದೆ: ಭಾವುಕರಾಗಿ ನುಡಿದ ಎಸಿಪಿ ಮಹೇಶ್‌ಕುಮಾರ್

ಮಂಗಳೂರು: ಮಂಗಳೂರು ಜನರನ್ನು ಕಾನೂನು ಮತ್ತು ಪ್ರೀತಿಯಿಂದ ಮಾತ್ರ ಗೆಲ್ಲಲು ಸಾಧ್ಯ. ಕರಾವಳಿ ಜನತೆಗೆ ಪ್ರೀತಿ ಕೊಟ್ಟರೆ ಅವರು ನೂರುಪಟ್ಟು ಪ್ರೀತಿ ತೋರಿಸುತ್ತಾರೆ. ಹೀಗೆ ಭಾವುಕರಾಗಿ ನುಡಿದವರು ಮಂಗಳೂರು ಸೆಂಟ್ರಲ್ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಮಹೇಶ್‌ಕುಮಾರ್.
ಕೊಡಗಿಗೆ ವರ್ಗಾವಣೆಗೊಂಡ ಅವರನ್ನು ಮಂಗಳೂರು ನಾಗರಿಕ ಸಮಿತಿ ವತಿಯಿಂದ ಭಾನುವಾರ ಆಯೋಜಿಸಲಾದ ಅದ್ದೂರಿ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು. ಪೊಲೀಸ್ ಕೆಲಸದ ಜತೆಗೆ ಸಾಮಾಜಿಕ ಚಟುವಟಿಕೆಯಿಂದ ನಾನು ಜೀವನದಲ್ಲಿ ಖುಷಿ ಕಂಡಿದ್ದೇನೆ. ಮಂಗಳೂರು ಸರ್ವಧರ್ಮಗಳ ನೆಲೆಬೀಡು ಆಗಬೇಕು ಎನ್ನುವುದು ನಮ್ಮೆಲ್ಲರ ಕನಸು. ಈ ಸೌಹಾರ್ದದ ಮಂಗಳೂರಿನ ಗತವೈಭವ ಸಾರಲು ನಾವೆಲ್ಲ ಪ್ರಯತ್ನಿಸಬೇಕು ಎಂದು ಕಿವಿಮಾತು ಹೇಳಿದರು.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಮಾತನಾಡಿ, ಒಳ್ಳೆಯ ಕೆಲಸ ಮಾಡುವವರನ್ನು ಗುರುತಿಸಿ ಗೌರವಿಸುವುದು ನಮ್ಮೆಲ್ಲರ ಕರ್ತವ್ಯ. ಮಹೇಶ್‌ಕುಮಾರ್ ಒಬ್ಬ ದಕ್ಷ, ಪ್ರಾಮಾಣಿಕ, ಜನಸ್ನೇಹಿ ಅಧಿಯಾಗಿರುವ ಜತೆಗೆ ತಮ್ಮ ಸಾಮಾಜಿಕ ಚಟುವಟಿಕೆಗಳ ಮೂಲಕ ಅನೇಕ ಮಂದಿಯ ಕಣ್ಣೀರೊರೆಸಿದ್ದಾರೆ. ಕರಾವಳಿಯ ಮೂಲೆಮೂಲೆಯ ಕಲಾವಿದರನ್ನು ಗುರುತಿಸಿ ಅವರಿಗೊಂದು ವೇದಿಕೆ ಕಲ್ಪಿಸುವ ಮೂಲಕ ಕಲಾಮಾಣಿಕ್ಯರಾಗಿದ್ದರು ಎಂದು ಶ್ಲಾಘಿಸಿದರು.
ಮಾಜಿ ಮೇಯರ್ ಶಶಿಧರ ಹೆಗ್ಡೆ ಮಾತನಾಡಿ, ನಿಷ್ಠೆ, ಪ್ರಬುದ್ಧತೆ, ಪ್ರಾಮಾಣಿಕತೆಯಿಂದಾಗಿ ಎಸಿಪಿ ಮಹೇಶ್‌ಕುಮಾರ್ ಮಂಗಳೂರಿನ ಜನತೆಯ ಮನಗೆದ್ದಿದ್ದಾರೆ. ಇಂದು ಇಂತಹ ಅಧಿಕಾರಿಗಳ ಅನಿವಾರ್ಯತೆ ಇದೆ ಎಂದರು.


ಗಾಯಕರಾರ ರಮೇಶ್ಚಂದ್ರ, ನೌಷಾದ್, ಮುನೀರ್ ಕಾಟಿಪಳ್ಳ, ಡಾ.ಅಮರಶ್ರೀ ಅಮರನಾಥ ಶೆಟ್ಟಿ, ಜಯಪ್ರಕಾಶ್ ರೈ, ಐವನ್ ಡಿಸೋಜ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉದ್ಯಮಿ ಶೈಲೇಂದ್ರ ವೈ ಸೂವರ್ಣ, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಪೂಜಾರಿ ಮೊದಲಾದವರಿದ್ದರು. ತೋನ್ಸೆ ಪುಷ್ಕಳ್‌ಕುಮಾರ್ ಸ್ವಾಗತಿಸಿದರು. ಆರ್.ಜೆ. ಅಭಿಷೇಕ್ ಕಾರ್ಯಕ್ರಮ ನಿರೂಪಿಸಿದರು.

ಪುಷ್ಪವೃಷ್ಟಿಗೈದು ಭಾವುಕರಾದರು

ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಎಸಿಪಿ ಮಹೇಶ್‌ಕುಮಾರ್ ಅವರನ್ನು ಗೌರವಿಸಲಾಯಿತು. ಕಾರ್ಯಕ್ರಮದ ಕೊನೆಯಲ್ಲಿ ನಾಗರಿಕರು ಮಹೇಶ್‌ಕುಮಾರ್ ಮೇಲೆ ಪುಷ್ಪವೃಷ್ಟಿಗೈದು ಭಾವುಕರಾಗಿ ಬೀಳ್ಕೊಟ್ಟರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!