Yuvavahini

JAN 30, 2024 4.11 AM IST

ಯುವವಾಹಿನಿ(ರಿ.) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ನಾಟಕ ಪ್ರದರ್ಶನ

ಯುವವಾಹಿನಿಯ ಸಮಾಜಮುಖಿ ಕಾರ್ಯಕ್ಕೆ ಶಕ್ತಿ ತುಂಬುವ ಕೆಲಸ ಶ್ಲಾಘನೀಯ: ಮಹೇಶ್ ಕುಮಾರ್

ಮಂಗಳೂರು: ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಸಮಾಜಮುಖಿ ಕಾರ್ಯಕ್ಕೆ ಸಮಾಜದ ಸರ್ವರ ಬೆಂಬಲ ಅತ್ಯಂತ ಸಂತಸ ತಂದಿದೆ, ಆರ್ಥಿಕ ಕ್ರೋಡೀಕರಣಕ್ಕಾಗಿ ನಡೆದ ನಾಟಕ ಪ್ರದರ್ಶನದಲ್ಲಿ ಮಂಗಳೂರು ಪುರಭವನ ಜನಸ್ತೋಮದಿಂದ ತುಂಬಿರುವುದು ಮಹಿಳಾ ಘಟಕದ ಶ್ರಮಕ್ಕೆ ಸಂದ ಪ್ರತಿಫಲ ಎಂದು ಅಸಿಸ್ಟೆಂಟ್ ಕಮಿಷನರ್ ಅಫ್ ಪೋಲಿಸ್ ಮಹೇಶ್ ಕುಮಾರ್ ತಿಳಿಸಿದರು.

ಅವರು ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಘಟಕದ ಆರ್ಥಿಕ ಬಲವರ್ಧನೆಗಾಗಿ ದಿನಾಂಕ 30-01-2024 ರಂದು ಮಂಗಳೂರಿನ ಪುರಭವನದಲ್ಲಿ ನಡೆದ ಕಥೆ ಎಡ್ಡೆಂಡು ನಾಟಕ ಪ್ರದರ್ಶನದಲ್ಲಿ ಜರುಗಿದ ಸಭಾ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಶುಭಾ ರಾಜೇಂದ್ರ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿಶ್ವಬಿಲ್ಲವ ಮಹಿಳಾ ಸಂಘದ ಅಧ್ಯಕ್ಷರಾದ ಊರ್ಮಿಳಾ ರಮೇಶ್, ಅಖಿಲ ಭಾರತ ಬಿಲ್ಲವರ ಯೂನಿಯನ್ ಮಹಿಳಾ ವಿಭಾಗದ ಅಧ್ಯಕ್ಷರಾದ ಸುಮಲತಾ ಸುವರ್ಣ, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜೇಶ್ ಬಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಶಶಿಧರ ಹೆಗ್ಡೆ ಇವರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು, ಮಾಜಿ ಅಧ್ಯಕ್ಷೆರಾದ ರಶ್ಮಿ ಸಿ ಕರ್ಕೇರಾ ಮತ್ತು ರೇಖಾ ಗೋಪಾಲ್ ಸನ್ಮಾನಿತರ ಸಾಧನಾ ಪರಿಚಯ ಸಭೆಯ ಮುಂದಿಟ್ಟರು.

ನಾಟಕ ಪ್ರದರ್ಶನಕ್ಕೆ ಆರ್ಥಿಕ ಬಲ ತುಂಬಿದ ದಾನಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಮಾಜಿ ಅಧ್ಯಕ್ಷೆ ಸರಸ್ವತಿ ದಾನಿಗಳ ವಿವರ ಸಭೆಯ ಮುಂದಿಟ್ಟರು.

ಆರ್ಥಿಕ ಕ್ರೋಡೀಕರಣಕ್ಕಾಗಿ ನಡೆಸಿದ ಕಥೆ ಎಡ್ಡೆಂಡು ನಾಟಕವು, ತುಂಬಿ ತುಳುಕಿದ ಪುರಭವನ ಹಾಗು ಪ್ರೇಕ್ಷಕರ ಮೆಚ್ಚುಗೆಯ ಮಾತುಗಳಿಂದ ಯಶಸ್ವಿಯಾಗಿ ಸಂಪನ್ನಗೊಂಡಿತು.

ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಶುಭ ರಾಜೇಂದ್ರ ಸ್ವಾಗತಿಸಿದರು, ಕಾರ್ಯದರ್ಶಿ ದಿವ್ಯಾ ಧನ್ಯವಾದ ನೀಡಿದರು, ಮಾಜಿ ಅಧ್ಯಕ್ಷೆ ವಿದ್ಯಾ ರಾಕೇಶ್ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!