Yuvavahini

FEB 22, 2024 5.12 PM IST

ಯುವವಾಹಿನಿ (ರಿ.) ಕೊಲ್ಯ ಘಟಕ

ಉಳ್ಳಾಲ ಬಿಲ್ಲವ ಸಮಾವೇಶ: ಮನೆ ಮನೆ ಭೇಟಿ

ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ.) ಕೊಲ್ಯ ಇವರ ಆಶ್ರಯದಲ್ಲಿ ಉಳ್ಳಾಲ ತಾಲೂಕು ಬಿಲ್ಲವರ ಸಮಾವೇಶ ಸಮಿತಿ ಸಹಭಾಗಿತ್ವದಲ್ಲಿ ಫೆಬ್ರವರಿ 25 ರಂದು ಕೊಲ್ಯ ಬಿಲ್ಲವ ಸಮಾಜ ಸಂಘದ ಆವರಣದಲ್ಲಿ ಬಿಲ್ಲವರ ಸಮಾವೇಶ ನಡೆಯಲಿದೆ.

ಕೇಂದ್ರ ಸರ್ಕಾರದ ಮಾಜಿ ವಿತ್ತ ಸಚಿವರು, ಬಿಲ್ಲವರ ಹಿರಿಯ ಮುಖಂಡರಾದ ಬಿ. ಜನಾರ್ಧನ ಪೂಜಾರಿ ಇವರಿಂದ ಉದ್ಘಾಟನೆಗೊಳ್ಳಲಿರುವ ಕಾರ್ಯಕ್ರಮದಲ್ಲಿ ಬಿಲ್ಲವ ಸಮಾಜದ ಗಣ್ಯಾತಿಗಣ್ಯರು ಭಾಗವಹಿಸಲಿದ್ದು ದಿನಪೂರ್ತಿ ಸಭಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮಕ್ಕೆ ಉಳ್ಳಾಲ ವಲಯದ ಅನೇಕ ಬಿಲ್ಲವ ಸಂಘಗಳು, ಮುಖಂಡರು ಸಹಕಾರ ನೀಡಿದ್ದು, ಅಂದು ಸಾವಿರಾರು ಬಿಲ್ಲವರು ಸಮಾವೇಶಗೊಳ್ಳಲಿದ್ದಾರೆ. ಈ ಕಾರ್ಯಕ್ರಮದ ಪೂರ್ವ ಸಿದ್ಧತೆಯಲ್ಲಿ ಯುವವಾಹಿನಿ(ರಿ.) ಕೊಲ್ಯ ಘಟಕದ ಅಧ್ಯಕ್ಷರು/ಕಾರ್ಯದರ್ಶಿ/ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಮಾತೃ ಸಂಘವಾದ ಬಿಲ್ಲವ ಸಂಘದ ಜೊತೆಗೆ ತೊಡಗಿಸಿಕೊಂಡಿದ್ದು ಪ್ರತಿ ದಿನ ಘಟಕದ ಸದಸ್ಯರು ಉಳ್ಳಾಲ ವಲಯದ ಬಿಲ್ಲವರ ಮನೆ ಮನೆಗೆ ಭೇಟಿ ನೀಡಿ ಆಮಂತ್ರಣ ನೀಡಿ ಸಮಾವೇಶಕ್ಕೆ ಆಹ್ವಾನ ನೀಡುತ್ತಿದ್ದಾರೆ.

ಯುವವಾಹಿನಿ ಸದಸ್ಯರು ಪ್ರತಿ ಸಂಜೆ ಮನೆ ಮನೆಗೆ ಭೇಟಿ ನೀಡಿ ಸಮಾವೇಶದ ಬಗ್ಗೆ ಬಿಲ್ಲವ ಸದಸ್ಯರ ಜೊತೆ ಮಾಹಿತಿ ಹಂಚಿಕೊಳ್ಳುತ್ತಿದ್ದಾರೆ. ಸಮಾವೇಶದ ಯಶಸ್ವಿಗಾಗಿ ಮಾತೃ ಸಂಘದ ಜೊತೆ ಕೈ ಜೋಡಿಸಿದ್ದಾರೆ. ಹಾಗೇ ಯುವವಾಹಿನಿ ಕೊಲ್ಯ ಘಟಕದ ವತಿಯಿಂದ ಉಳ್ಳಾಲ ವಲಯದ ಬಿಲ್ಲವರ ಸಮಾವೇಶಕ್ಕೆ ಆದರದ ಸ್ವಾಗತ ಸುಸ್ವಾಗತ.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!