Yuvavahini

MAR 13, 2024 5.02 PM IST

ಯುವವಾಹಿನಿ(ರಿ.) ಕೊಲ್ಯ ಘಟಕ

ಸಂಭ್ರಮದ ಮಹಿಳಾ ದಿನಾಚರಣೆ

ಕೊಲ್ಯ: ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ದಿನಾಂಕ 13-03-2024 ರಂದು ಯುವವಾಹಿನಿ(ರಿ.) ಕೊಲ್ಯ ಘಟಕದ ಸಾಪ್ತಾಹಿಕ ಸಭೆಯಂದು ಘಟಕದ ಮಹಿಳಾ ಸದಸ್ಯರಿಗೆ ಹಾಗೂ ನಾರಾಯಣ ಗುರು ಮಹಿಳಾ ಮಂಡಳಿ ಸದಸ್ಯರಿಗೆ ವಿವಿಧ ಸ್ಪರ್ಧೆ ನಡೆಸಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಮಹಿಳಾ ಸದಸ್ಯರಿಗೆ ಅಂತರ್ಜಾಲದಲ್ಲಿ ನಾರಿಯರಿಗೊಂದು ಸವಾಲು ರಸ ಪ್ರಶ್ನೆ ಸ್ಪರ್ಧೆ ನಡೆಸಲಾಗಿತ್ತು. ಕೊಲ್ಯ ಘಟಕದ ಕಾರ್ಯದರ್ಶಿ ಜೀವನ್ ಕೊಲ್ಯ ಮಹಿಳೆಯರಿಗೆ ಅಂತರ್ಜಾಲ ಸ್ಪರ್ಧೆ ನಡೆಸಿಕೊಟ್ಟರು. ಮಹಿಳಾ ಸಾಧಕರ ಕುರಿತಾಗಿ ಗಂಟೆಗೊಂದು ಪ್ರಶ್ನೆಗಳನ್ನು ಗುಂಪಿನಲ್ಲಿ ಹಾಕಿ ವೇಗವಾಗಿ ಸರಿಯಾದ ಉತ್ತರ ನೀಡಿದ ಮಹಿಳಾ ಸದಸ್ಯರಿಗೆ ಅಂಕಗಳನ್ನು ನೀಡಿ ಅತೀ ಹೆಚ್ಚು ಅಂಕ ಪಡೆದ ಮಹಿಳಾ ಸದಸ್ಯರಿಗೆ ಬಹುಮಾನ ನೀಡಲಾಯಿತು.

ಸ್ಪರ್ಧೆಯಲ್ಲಿ ಪೂರ್ಣಿಮಾ ಕುಂಪಲ ಪ್ರಥಮ, ಅನ್ವಿತಾ ಎ. ದ್ವಿತೀಯ, ಸೌಮ್ಯ ಕುಸುಮಾಕರ್ ಹಾಗೂ ಶಮ ಕೊಲ್ಯ ತೃತೀಯ, ಆಶಾ ಆರ್. ಕೋಟೆಕಾರ್ ಚತುರ್ಥ,  ವಿಜೀತ ಪಂಚಮ ಬಹುಮಾನ ಪಡೆದರು. ಮಹಿಳಾ ಸದಸ್ಯರು ಬಹಳ ಆಸಕ್ತಿಯಿಂದ ಸ್ಪರ್ಧೆಯಲ್ಲಿ ಭಾಗವಹಿಸಿದರು.

ಸಮಾಜದಲ್ಲಿ ಯಾವುದಕ್ಕೂ ಹೆದರದೆ ಮುನ್ನುಗ್ಗಿ ಯಶಸ್ಸು ಸಾಧಿಸಿ ಎಂದು ಕೊಲ್ಯ ಘಟಕದ ಅಧ್ಯಕ್ಷರು ಲತೀಶ್ ಸಂಕೋಳಿಗೆ ಸ್ಪರ್ಧೆಯ ಬಹುಮಾನ ವಿತರಣಾ ಸಂದರ್ಭದಲ್ಲಿ ನುಡಿದು ಅಭಿನಂದನೆ ಸಲ್ಲಿಸಿದರು.

ಸುಸಂದರ್ಭದಲ್ಲಿ ಕೇಂದ್ರ ಸಮಿತಿಯ ಸಂಘಟನಾ ನಿರ್ದೇಶಕರು, ಕೊಲ್ಯ ಘಟಕದ ನಿಕಟ ಪೂರ್ವ ಅಧ್ಯಕ್ಷರು ಸುಂದರ್ ಸುವರ್ಣ, ನಾರಾಯಣ ಗುರು ಮಹಿಳಾ ಮಂಡಳಿ ಅಧ್ಯಕ್ಷರು ರೇವತಿ ವಿಶ್ವನಾಥ್ ಕುಂಪಲ, ಘಟಕದ ಪ್ರಥಮ ಉಪಾಧ್ಯಕ್ಷರು ಸುಧಾ ಸುರೇಶ್, ದ್ವಿತೀಯ ಉಪಾಧ್ಯಕ್ಷರು ನಿತಿನ್ ಕರ್ಕೇರ, ಕೋಶಾಧಿಕಾರಿ ವಿನುತ ಬಾಲಕೃಷ್ಣ ವಿಜೇತರಿಗೆ ಬಹುಮಾನ ವಿತರಿಸಿದರು.

ಘಟಕದ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರು ರಶ್ಮಿ ಸನಿಲ್ ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿದ ಅನುಭವ ಹಂಚಿಕೊಂಡರು. ಕಲೆ ಮತ್ತು ಸಾಹಿತ್ಯ ನಿರ್ದೇಶಕರು ಹಾಗೂ ಕೇಂದ್ರ ಸಮಿತಿಯ ಜಾಲತಾಣ ಸದಸ್ಯೆ ಅರ್ಚನಾ ಎಂ ಬಂಗೇರ ಮಹಿಳಾ ದಿನಾಚರಣೆಯ ಖುಷಿಯ ಕ್ಷಣಗಳನ್ನು ಮೆಲುಕು ಹಾಕಿದರು.

ಕೊಲ್ಯ ಘಟಕದ ಕಾರ್ಯದರ್ಶಿ ಜೀವನ್ ಕೊಲ್ಯ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿಕೊಟ್ಟರು. ಅರ್ಚನಾ ಎಂ. ಬಂಗೇರ ಧನ್ಯವಾದ ಸರ್ಮಪಣೆಗೈದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!