Yuvavahini

MAY 15, 2024 1.45 PM IST

ಯುವವಾಹಿನಿ (ರಿ.) ಕೊಲ್ಯ ಘಟಕ

ಚಿಗುರು ಬೇಸಿಗೆ ಶಿಬಿರದ ಸಮಾರೋಪ

ಕೊಲ್ಯ: ಬೇಸಿಗೆ ಶಿಬಿರಗಳು ಮಕ್ಕಳ ಸೃಜನಾತ್ಮಕ ಚಟುವಟಿಕೆಗಳಿಗೆ ಸಹಕಾರಿಯಾಗಿದೆ. ಮಕ್ಕಳು ಮೊಬೈಲ್, ಟಿವಿಯಿಂದ ಹೊರಗಡೆ ಬಂದು ಬೇರೆ ಬೇರೆ ಚಟುವಟಿಕೆಗಳಲ್ಲಿ ಭಾಗವಹಿಸಿ ತಮ್ಮ ಹವ್ಯಾಸ ಉತ್ತಮಪಡಿಸಲು ಸಹಕಾರಿಯಾಗಲಿದೆ ಎಂದು ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ .ಕೆ. ಪೂಜಾರಿ ಹೇಳಿದರು.

ಕರ್ನಾಟಕ ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿಯ ಕೊಲ್ಯ ಘಟಕದ ನೇತೃತ್ವದಲ್ಲಿ, ಬಿಲ್ಲವ ಸೇವಾ ಸಮಾಜ ಟ್ರಸ್ಟ್(ರಿ.) ಕೊಲ್ಯ ಇವರ ಸಹಕಾರದಲ್ಲಿ, ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ 15-05-2014 ರಿಂದ 18-05-2024ರ ವರೆಗೆ ನಾಲ್ಕು ದಿನಗಳ ಕಾಲ ಬಿಲ್ಲವ ಸಂಘ ಕೊಲ್ಯ ಇಲ್ಲಿ ನಡೆದ ಮಕ್ಕಳ ಬೇಸಿಗೆ ಶಿಬಿರದ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಹೇಳಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿಯಾದ ಸಚಿನ್ ಹೆಗ್ಡೆ ಶಿಬಿರದ ನೇತೃತ್ವ ವಹಿಸಿದ ಯುವವಾಹಿನಿ ಘಟಕಕ್ಕೆ ಅಭಿನಂದನೆ ಸಲ್ಲಿಸಿದರು. ಇಂತಹ ಶಿಬಿರಗಳಿಂದ ಮಕ್ಕಳಲ್ಲಿ ಉತ್ತಮ ಮೌಲ್ಯ, ಕೌಶಲ್ಯ ಬೆಳೆಯಲು ಸಾಧ್ಯ, ಯುವವಾಹಿನಿಯು ಇಂತಹ ಅರ್ಥಪೂರ್ಣ ಶಿಬಿರಗಳನ್ನು ಇನ್ನೂ ಹೆಚ್ಚು ಆಯೋಜಿಸಲಿ ಎಂದು ಕರೆ ನೀಡಿದರು. ಶಿಬಿರದಲ್ಲಿ ಪೇಪರ್ ಕ್ರಾಫ್ಟ್, ಮುಖವಾಡ ತಯಾರಿ, ಚಿತ್ರ ಕಲೆ, ಹದಿಹರೆಯದ ಸಮಸ್ಯೆ, ಹೂಜೋಡಣೆ, ತ್ಯಾಜ್ಯ ವಿಲೇವಾರಿ, ಅಜ್ಜಿಕತೆ, ಬೆಂಕಿ ಇಲ್ಲದೆ ಅಡುಗೆ, ಕಸದಿಂದ ರಸ ಹೀಗೆ ವಿವಿಧ ವಿಷಯದಲ್ಲಿ ಬೇರೆ ಬೇರೆ ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಿದರು.

ಕೊಲ್ಯ ಯುವವಾಹಿನಿ ಘಟಕದ ಪ್ರಥಮ ಉಪಾಧ್ಯಕ್ಷರಾದ ಸುಧಾ ಸುರೇಶ್, ಘಟಕದ ನಿಕಟ ಪೂರ್ವ ಅಧ್ಯಕ್ಷರಾದ ಸುಂದರ್ ಸುವರ್ಣ, ಬ್ಯಾಂಕ್ ಒಫ್ ಬರೋಡ ಮಂಗಳೂರು ಇದರ ಸ್ಥಾಪಕ ಶಾಖೆಯ ಅಧಿಕಾರಿ ಮೋಹನ್ ಆಳ್ವ, ಕೇಂದ್ರ ಸಮಿತಿಯ ಪ್ರಚಾರ ನಿರ್ದೇಶಕರಾದ ಪೃಥ್ವಿ ರಾಜ್ ಉಪಸ್ಥಿತರಿದ್ದರು. ಶಿಬಿರದ ಅನಿಸಿಕೆಯನ್ನು ಮಕ್ಕಳು, ಪೋಷಕರು ಸಭೆಯಲ್ಲಿ ಹಂಚಿದರು. ಇದೇ ಸಂದರ್ಭದಲ್ಲಿ ಮಕ್ಕಳು ಮಾಡಿದ ಕಲಾಕೃತಿ, ಆಹಾರ ವಸ್ತುಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ಶಿಬಿರದಲ್ಲಿ ಭಾಗವಹಿಸಿದ ಮಕ್ಕಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಅದ್ವಿತ್ ಕಾರ್ಯಕ್ರಮ ನಿರೂಪಿಸಿ, ಹಿತಾಶ್ರೀ ಸ್ವಾಗತಿಸಿ, ಪ್ರಣವಿ ಧನ್ಯವಾದಗೈದರು. ಯುವವಾಹಿನಿ ಘಟಕದ ಕಾರ್ಯದರ್ಶಿ ಜೀವನ್ ಕೊಲ್ಯ ಹಾಗೂ ಮಂಗಳೂರು ವಿಶ್ವ ವಿದ್ಯಾಲಯ ಕೊಣಾಜೆ ಇಲ್ಲಿಯ ಸಮಾಜ ಕಾರ್ಯ ವಿದ್ಯಾರ್ಥಿಗಳು ಶಿಬಿರದ ಚಟುವಟಿಕೆ ಸಂಯೋಜಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!