Yuvavahini

JUN 02, 2024 2.55 PM IST

ಯುವವಾಹಿನಿ(ರಿ.) ಬೆಂಗಳೂರು ಘಟಕ

ಪದಗ್ರಹಣ

ಬೆಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ, ಸ್ವಾಮಿ ವಿವೇಕಾನಂದರ ಚಿಂತನಾಧಾರೆ ಮತ್ತು ಅಂಬೇಡ್ಕರ್ ಅವರ ಪ್ರಾಯೋಗಿಕ ಬದುಕಿನಿಂದ ಯುವವಾಹಿನಿ ಸಂಘಟನೆಯು ಪ್ರೇರಣೆ ಪಡೆದು, ಮುನ್ನಡೆದರೆ ಸಮಾಜದಲ್ಲಿ ಇನ್ನಷ್ಟು ಸುಧಾರಣೆ ಕಾಣಲು ಸಾಧ್ಯ ಎಂದು ಮಂಗಳೂರು ಕುದ್ರೋಳಿ ನಾರಾಯಣ ಗುರು ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ ಹೇಳಿದರು.

ಬೆಂಗಳೂರಿನ ಮಹಾಲಕ್ಷ್ಮಿ ಬಡಾವಣೆಯ ನಾಗಪುರ ವಾರ್ಡ್‌ ಡಾ.ರಾಜ್‌ಕುಮಾರ್ ಸಭಾಭವನದಲ್ಲಿ ಜೂ.2 ರಂದು ನಡೆದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.) ಬೆಂಗಳೂರು ಘಟಕದ 2024-25ರ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಪ್ರಧಾನ ಭಾಷಣ ಮಾಡಿದರು.

ಯುವ ಸಮುದಾಯ ಸಂಘಟಿತರಾದರೆ ಸಮಾಜದಲ್ಲಿ ಮಹತ್ತರ ಬದಲಾವಣೆ ತರಬಹುದು ಎಂಬುದಕ್ಕೆ ಕಳೆದ ಹಲವು ದಶಕಗಳಿಂದ ವಿದ್ಯೆ, ಉದ್ಯೋಗ ಮತ್ತು ಸಂಪರ್ಕದ ಉದ್ದೇಶದಿಂದ ಸೇವೆ ಸಲ್ಲಿಸುತ್ತಿರುವ ಯುವವಾಹಿನಿ ಸಂಘಟನೆಯೇ ಉತ್ತಮ ಉದಾಹರಣೆ. ಕರಾವಳಿ ಜಿಲ್ಲೆಗಳಲ್ಲಿ ಮಾತ್ರವಲ್ಲದೆ, ರಾಜಧಾನಿಯಲ್ಲೂ ಸಮಾಜದ ಯುವ ಮನಸ್ಸುಗಳನ್ನು ಜಾಗೃತಿಗೊಳಿಸುವ ಕಾರ್ಯ ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು.

ರಂಗಭೂಮಿ ಕಲಾವಿದ, ಚಲನಚಿತ್ರ ನಟ ತುಳುವ ಮಾಣಿಕ್ಯ ಅರವಿಂದ ಬೋಳಾ‌ರ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಮಾಜಮುಖಿ ಕಾರ್ಯಗಳನ್ನು ಮಾಡಲು ಸಂಘಟನೆ ಅಗತ್ಯ. ಸಮಾಜದ ಧ್ವನಿಯಾಗಿರುವ ಯುವವಾಹಿನಿ ಸಂಘಟನೆಯು ಬೆಂಗಳೂರಿನಲ್ಲಿ ಇನ್ನಷ್ಟು ಗಟ್ಟಿಯಾಗಬೇಕು. ಹಾಗಾದಲ್ಲಿ ಮಾತ್ರ ಸಮುದಾಯದ ಬೇಡಿಕೆಗಳಿಗೆ ಸ್ಪಂದಿಸಲು ಶಕ್ತಿ ಸಿಗುತ್ತದೆ ಎಂದು ಹೇಳಿದರು.

ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಹರೀಶ್ ಕೆ. ಪೂಜಾರಿ ಹೊಸ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ, ಯುವವಾಹಿನಿ ಸಂಘಟನೆಯು 33 ಘಟಕಗಳನ್ನು ಹೊಂದಿದ್ದು, ಐದು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಆರಂಭಗೊಂಡ ಘಟಕವು ಅತ್ಯಂತ ಕ್ರಿಯಾಶೀಲವಾಗಿದ್ದು, ಇದರ ಮೂಲಕ ಹತ್ತು ಹಲವು ಸಮಾಜಮುಖಿ ಕೆಲಸಗಳನ್ನು ಮಾಡಲಾಗುತ್ತಿದೆ ಎಂದರು.

ಅಧ್ಯಕ್ಷತೆಯನ್ನು ಯುವವಾಹಿನಿ(ರಿ.) ಬೆಂಗಳೂರು ಘಟಕದ ಅಧ್ಯಕ್ಷ ಮಿತೇಶ್ ಕುಮಾ‌ರ್ ವಹಿಸಿದ್ದರು. ಘಟಕದ ಕಾರ್ಯದರ್ಶಿ ಪ್ರಸಾದ್ ಕುಮಾರ್ ಸಿ.ಪಿ, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಶ್ರೀಧರ್ ಡಿ. ಪೂಜಾರಿ ಇದ್ದರು. ಉಪಾಧ್ಯಕ್ಷ ಶಶಿಧರ್ ಕೋಟ್ಯಾನ್ ಪ್ರಸ್ತಾವಿಕ ಮಾತನಾಡಿದರು. ಬೆಳ್ತಂಗಡಿ ಘಟಕದ ಅಧ್ಯಕ್ಷ ಸದಾಶಿವ ಊರ, ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ. ಕೆ., ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು. ಸಕೇಶ್ ಬುನ್ನನ್ ಕಾರ್ಯಕ್ರಮ ನಿರೂಪಿಸಿದರು. ಬೆಂಗಳೂರು ಘಟಕ ನಿಯೋಜಿತ ಕಾರ್ಯದರ್ಶಿ ಧನುಷ್ ವಂದಿಸಿದರು.

ನಿಯೋಜಿತ ಅಧ್ಯಕ್ಷ ಪ್ರಸಾದ್ ಕುಮಾರ್ ಕಲ್ಲಾಜೆ ಮತ್ತು ಅವರ 33 ಪದಾಧಿಕಾರಿಗಳ ತಂಡವು ಪ್ರತಿಜ್ಞಾವಿಧಿ ಸ್ವೀಕರಿಸಿತು. ಇದೇ ವೇಳೆ ಅರವಿಂದ ಬೋಳಾ‌ರ್, ಕೇಶವ ಬಂಗೇರ, ಸುಭಾಷ್ ಅರುವ, ಹರೀಶ್ ಕೆ. ಪೂಜಾರಿ, ಮಿತೇಶ್ ಕುಮಾ‌ರ್, ಪ್ರಸಾದ್ ಕುಮಾರ್ ಸಿ.ಪಿ, ಸ್ವಾತಿ ಪೂಜಾರಿ, ರಾಘವೇಂದ್ರ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮಕ್ಕೂ ಮುನ್ನ ಘಟಕದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!