Yuvavahini

JUL 07, 2024 4.59 PM IST

ಹೊಂಬಿಸಿಲು ಯುವ ಮನಸಿಗೆ

ಸ್ಪಷ್ಟ ಗುರಿಯೊಂದಿಗೆ ನಾಯಕತ್ವದ ಗುಣ ನಮ್ಮಲ್ಲಿ ಬೆಳೆಯಬೇಕು: ಶ್ರೀ ನರೇಶ್ ಕುಮಾರ್ ಸಸಿಹಿತ್ಲು

 

ಕೊಲ್ಯ: ಯುವವಾಹಿನಿಯಿಂದ ನಮಗೇನು ಸಿಗುತ್ತದೆ ಎನ್ನುವುದರ ಬದಲು ಯುವವಾಹಿನಿಗೆ ಸೇರಿ ನಾವು ಏನನ್ನು ಪಡೆಯಬಹುದು, ಹೇಗೆ ಬೆಳೆಯಬಹುದು, ಆ ಮೂಲಕ ಸಮಾಜಕ್ಕೆ ಯಾವ ರೀತಿಯ ಕೊಡುಗೆ ನೀಡಬಹುದು ಇಂತಹ ಮನೋಚಿಂತನೆಯನ್ನು ಸದಸ್ಯರಾಗಿ ಸೇರುವ ಯುವವಾಹಿನಿ ಬಂಧುಗಳು ಬೆಳೆಸಿಕೊಳ್ಳಬೇಕೆಂದು ಯುವವಾಹಿನಿ ( ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಶ್ರೀ ನರೇಶ್ ಸಸಿಹಿತ್ಲು ತಿಳಿಸಿದರು.

07-07-2024ರಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಂಗಣ ಕೊಲ್ಯದಲ್ಲಿ ಯುವವಾಹಿನಿ (ರಿ) ಕೊಲ್ಯ ಘಟಕಕ್ಕೆ ಹೊಸ ಸದಸ್ಯರಾಗಿ ಸೇರ್ಪಡೆಗೊಂಡವರಿಗೆ ಯುವವಾಹಿನಿ ಸಂಘಟನೆಯ ಬಗ್ಗೆ ಮಾಹಿತಿಯನ್ನು ನೀಡಲು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಅವರು, ನಮಗೆ ಬದುಕಿನ ಕುರಿತು ಒಂದು ನಿರ್ಧಿಷ್ಟ ಗುರಿ ಇರಬೇಕು. ಆ ಗುರಿಯನ್ನು ಮುಟ್ಟಲು ನಿರಂತರ ಪರಿಶ್ರಮ ಪಡೆದು ಮುಂದೆ ಸಮಾಜದಲ್ಲಿ ಉತ್ತಮ ನಾಯಕರಾಗಬೇಕೆಂದು ಸ್ಫೂರ್ತಿಯುತ ಮಾತುಗಳಿಂದ ಹುರಿದುಂಬಿಸಿದರು. ಸಭೆಯಲ್ಲಿ ಕೊನೆಯ ಆಸನದಲ್ಲಿ ಕುಳಿತವರು ಮುಂದೊಂದು ದಿನ ಮನೋಬಲದಿಂದ ಜೊತೆಗೆ ಜನರ ವಿಶ್ವಾಸವನ್ನು ಗಳಿಸಿಕೊಂಡು ಉನ್ನತೋನ್ನತ ಹುದ್ದೆಗಳನ್ನು ಅಲಂಕರಿಸಬೇಕು, ಬಡವರ ಕಣ್ಣೀರೊರೆಸುವ ಕಾರ್ಯಗಳನ್ನು ಸಂಘಟನೆಯ ಮೂಲಕ ಕಾರ್ಯಗತಗೊಳಿಸಬೇಕೆಂದು, ಅದಕ್ಕೆ ಪೂರಕವಾದ ಕಥೆ ಮತ್ತು ಉಪಕಥೆಗಳನ್ನು ಪೋಣಿಸಿ ಅರ್ಥಪೂರ್ಣ, ಚಿಂತನಾರ್ಹ ವಿಚಾರಧಾರೆಯನ್ನು ಹರಿಸಿದರು.

ಮಾಹಿತಿ ಕಾರ್ಯಾಗಾರದ ನಂತರ ಮುಕ್ತ ಸಂವಾದ ನಡೆಸಲಾಯಿತು. ಘಟಕದ ಸದಸ್ಯರು ತಮ್ಮಲ್ಲಿದ್ದ ಕೆಲವೊಂದು ಸಂದೇಹಗಳಿಗೆ ಸಂಪನ್ಮೂಲ ವ್ಯಕ್ತಿಯಿಂದ ಸಮರ್ಪಕ ಮಾಹಿತಿಯನ್ನು ಪಡೆದುಕೊಂಡರು. ಇದೇ ಸಂದರ್ಭದಲ್ಲಿ 30.06.2024 ರಂದು ಘಟಕದ ಸದಸ್ಯರಿಗಾಗಿ ನಡೆಸಲಾದ ಕೆಸರು ಗದ್ದೆ ಕ್ರೀಡೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕೆಸರುಗದ್ದೆ ಕ್ರೀಡೆ ನಡೆಸಲು ತಮ್ಮ ಕೃಷಿ ಮಾಡುವ ಗದ್ದೆಯಲ್ಲಿ ಅವಕಾಶ ಕಲ್ಪಿಸಿದ ಘಟಕದ ಮಾಜಿ ಕಾರ್ಯದರ್ಶಿ ಶ್ರೀ ಲತೀಶ್ ಪಾಪುದಡಿ ಮತ್ತು ಮನೆಯವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಕೆಸರುಗದ್ದೆ ಕ್ರೀಡೆಗೆ ವಿವಿಧ ರೀತಿಯಲ್ಲಿ ಸಹಕರಿಸಿದ ಕೆಲವೊಂದು ಸದಸ್ಯರಿಗೆ ಹೂವನ್ನು ನೀಡಿ ಗೌರವಿಸಲಾಯಿತು.

ಘಟಕದ ಕ್ರೀಡಾ ಕಾರ್ಯದರ್ಶಿ ಶ್ರೀಮತಿ ಸಾರಿಕಾ ಜೀವನ್ ಬೆರಿಕೆ ಮತ್ತು ಘಟಕದ ಕಾರ್ಯದರ್ಶಿ ಶ್ರೀ ಜೀವನ್ ಕೊಲ್ಯ ಬಹುಮಾನ ವಿತರಣೆಯ ಕಾರ್ಯಕ್ರಮ ನೆರವೇರಿಸಿದರು.

ಯುವವಾಹಿನಿ (ರಿ) ಕೊಲ್ಯ ಘಟಕದ ಅಧ್ಯಕ್ಷರು ಸರ್ವರನ್ನು ಸ್ವಾಗತಿಸಿ, ಸಂಪನ್ಮೂಲ ವ್ಯಕ್ತಿ, ಬಹುಮುಖ ಪ್ರತಿಭೆಯ ಶ್ರೀ ನರೇಶ್ ಕುಮಾರ್ ಸಸಿಹಿತ್ಲುರವರ ಸಾಧನೆಯ ಸಂಕ್ಷಿಪ್ತ ವಿವರಣೆಯನ್ನು ನೀಡಿದರು. ಘಟಕದ ಕಾರ್ಯದರ್ಶಿ ಶ್ರೀ ಜೀವನ್ ಕೊಲ್ಯ ಧನ್ಯವಾದ ಸಮರ್ಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!