Yuvavahini

JUL 21, 2024 5.05 PM IST

ಯುವವಾಹಿನಿ (ರಿ) ಪಣಂಬೂರು- ಕುಳಾಯಿ ಘಟಕ

ಯುವ ಕೂಡು-ಕೂಟ-ಕುಟುಂಬ ಮಿನದನ

ಕುಳಾಯಿ: ಯುವವಾಹಿನಿ (ರಿ) ಪಣಂಬೂರು-ಕುಳಾಯಿ ಘಟಕದ ವತಿಯಿಂದ ಯುವ ಕೂಡು-ಕೂಟ ಕುಟುಂಬ ಮಿನದನ ಎಂಬ ವಿನೂತನ ಕಾರ್ಯಕ್ರಮ ದಿ.  21-07-2024 ರಂದು ಭಾನುವಾರ ಕುಳಾಯಿ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಜರಗಿತು.

ಯುವವಾಹಿನಿ (ರಿ) ಪಣಂಬೂರು – ಕುಳಾಯಿ ಘಟಕದ ಅಧ್ಯಕ್ಷೆ ಮನಿಷಾ ರೂಪೇಶ್ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಅಧ್ಯಕ್ಷರು ಕೇಶವ ಸುವರ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯಅತಿಥಿ ಮುಡಿಪು ಸರಕಾರಿ ಪ್ರಥಮ ದರ್ಜೆ ಕಾಲೇಜು ಸಹ ಪ್ರಾಧ್ಯಾಪಕರು ಡಾ. ಶೇಷಪ್ಪ ಅಮೀನ್. ಕೆ ಮಾತನಾಡುತ್ತಾ, ಹಲವಾರು ವರ್ಷಗಳಿಂದ ಯುವವಾಹಿನಿಯು ಸಮಾಜ ಮುಖಿಯಾಗಿ ನೀಡುತ್ತಿರುವ ಸೇವಾ ಚಟುವಟಿಕೆಯೊಂದಿಗೆ ಪ್ರತಿಯೊಂದು ಕಾರ್ಯಕ್ರಮವು ಬಹಳ ಅರ್ಥ ಪೂರ್ಣವಾಗಿ ಮೂಡಿ ಬರುತ್ತಿದೆ. ಅದರಲ್ಲಿಯೂ ವಿಶೇಷವಾಗಿ ಯುವ ಸಮುದಾಯವನ್ನು, ಸುಸಂಸ್ಕೃತರನ್ನಾಗಿಸುವಲ್ಲಿ ಕೈಗೊಳ್ಳುತ್ತಿರುವ ಕಾರ್ಯಕ್ರಮದ ಬಗ್ಗೆ ಬಹಳ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಕಾರ್ಯಕ್ರಮವು ಯುವಕರನ್ನು ಒಟ್ಟುಗೂಡಿಸುವ ವಿನೂತನ ಕಾರ್ಯಕ್ರಮವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಪಣಂಬೂರು-ಕುಳಾಯಿ ಘಟಕದ ಕಾರ್ಯದರ್ಶಿ ಸಚಿನ್ ಜಿ ಅಮೀನ್, ಕಾರ್ಯಕ್ರಮದ ಸಂಚಾಲಕಿ ಶೋಭ ದಿವಾಕರ್ ಉಪಸ್ಥಿತರಿದ್ದರು.

ಪರಿಸರ ಪ್ರೇಮಿ ಹಾಗೂ ಉತ್ತಮ ನಿರೂಪಕ ನಾಗರಾಜ್ ಬಜಾಲ್ ವಿವಿಧ ವಿನೋದಾವಳಿಯ ಮೂಲಕ ಸಬಿಕರನ್ನು ರಂಜಿಸಿದರು .

ಘಟಕದ ಅಧ್ಯಕ್ಷೆ ಮನೀಷಾ ರೂಪೇಶ್ ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯದರ್ಶಿ ಸಚಿನ್ ಜಿ ಅಮೀನ್ ವಂದಿಸಿದರು. ಸಂಜೀವ ಸುವರ್ಣ ಹಾಗೂ ಯಶಸ್ವಿನಿ ಕಾರ್ಯಕ್ರಮ ನಿರೂಪಿಸಿದರು.

ಘಟಕದ ಸದಸ್ಯರುಗಳು ತಯಾರಿಸಿದ 35 ಕ್ಕೂ ಹೆಚ್ಚಿನ ವಿವಿಧ ಖಾದ್ಯಗಳನ್ನು ಸವಿಯುವ ಮೂಲಕ ಯುವ ಕೂಡು ಕೂಟ – ಕುಟುಂಬ ಮಿನದನ ಕಾರ್ಯಕ್ರಮವು ಬಹಳ ಅರ್ಥಪೂರ್ಣವಾಗಿ ನಡೆಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!