Yuvavahini

AUG 18, 2024 11.06 AM IST

ಯುವವಾಹಿನಿ ಬಂಟ್ವಾಳ : ಆಟಿಡೊಂಜಿ ಕೂಟ

ಪ್ರತಿಭೆಗಳಿಗೆ ಅವಕಾಶ ಕಲ್ಪಿಸಿ ಕ್ರೀಯಾಶೀಲತೆಯನ್ನು ಜೀವಂತಿಕೆಯಾನ್ನಾಗಿಸುವುದು ಯುವವಾಹಿನಿ : ಲೋಕೇಶ್ ಕೋಟ್ಯಾನ್

ಬಂಟ್ವಾಳ : ತುಳುವ ಶೈಲಿಯ ವೇದಿಕೆ ನೋಡಿ ಬಹಳ ಸಂತೋಷವಾಯಿತು‌. ಈ ಮೂಲಕ ತುಳು ಸಂಪ್ರದಾಯವನ್ನೇ ಮೈಗೂಡಿಸಿ ಕೊಂಡಿರುವ ತುಳುವರ ಕೂಟದಲ್ಲಿ ಭಾಗವಹಿಸುವ ಸುಯೋಗ ದೊರಕಿದೆ. ಜೊತೆಗೆ ಯುವವಾಹಿನಿಯ ಪ್ರತಿಭೆಗಳಿಗೆ ಸುಂದರ ವೇದಿಕೆ ದೊರಕಿರುವುದು ಸಂತೋಷವೆನಿಸಿದೆ. ಸಮಾಜಮುಖಿ ಸೇವೆ ಸಲ್ಲಿಸುತ್ತಾ ರಾಜ್ಯೋತ್ಸವ ಪ್ರಶಸ್ತಿ ಪಡೆದೆರುವ ಸಂಸ್ಥೆ ಯುವವಾಹಿನಿಯ ಕಾರ್ಯಗಳು ಶ್ಲಾಘನೀಯ ಎಂದು ಮುಖ್ಯ ಅತಿಥಿಯಾದ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಉಪಾಧ್ಯಕ್ಷ ಲೋಕೇಶ್ ಕೋಟ್ಯಾನ್ ಅವರು ಅಭಿಪ್ರಾಯ ಪಟ್ಟರು.

ಯುವವಾಹಿನಿ (ರಿ.) ಬಂಟ್ವಾಳ ತಾಲೂಕು ಘಟಕದ ವತಿಯಿಂದ ಆಟಿಡೊಂಜಿ ಕೂಟ ಕಾರ್ಯಕ್ರಮ ರವಿವಾರ ಬಿ.ಸಿ.ರೋಡ್‌ನ ಗಾಣದಪಡ್ಪುದ ನಾರಾಯಣ ಗುರು ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ವಿಶಿಷ್ಟವಾದ ತುಳುನಾಡಿನ ಗುತ್ತುಮನೆ ಮಾದರಿಯ ಸಭಾಮಂಟಪದಲ್ಲಿ ಆಯೋಜಿಸಲಾಗಿತ್ತು. ತುಳುನಾಡಿನ ಪಾರಂಪರಿಕ ಶೈಲಿಯಲ್ಲಿ ತಂಬಿಗೆಯಲ್ಲಿ ನೀರು, ಓಲೆಬೆಲ್ಲ, ವೀಳ್ಯೆದೆಲೆ-ಅಡಿಕೆ ನೀಡಿ ಅತಿಥಿಗಳನ್ನು ಬರಮಾಡಿಕೊಳ್ಳಲಾಯಿತು.
ಬಂಟ್ವಾಳ ತಾಲೂಕು ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಸಂಜೀವ ಪೂಜಾರಿಯವರು, ಉಳಿದ ಅತಿಥಿಗಳೊಂದಿಗೆ ಸೇರಿ ನಾಗಬೆರ್ಮೆರೆನ ಪಾಡ್ದನದೊಂದಿಗೆ ಸ್ವಸ್ತಿಕವನ್ನು ಇಟ್ಟು, ದೀವಟಿಗೆ ಉರಿಸಿ ವಿಶಿಷ್ಟ ರೀತಿಯಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಅಧ್ಯಕ್ಷತೆ ವಹಿಸಿದ್ದರು.
ಬಳಿಕ ಸಂಜೀವ ಪೂಜಾರಿಯವರು ಮಾತನಾಡಿ, ಸೇಸಪ್ಪ ಕೋಟ್ಯಾನ್ ಅವರನ್ನು ನೆನಪು ಮಾಡಿಕೊಂಡರು. ಬಿಲ್ಲವ ಸಂಘ ಮತ್ತು ಯುವವಾಹಿನಿ ಎರಡೂ ಸಂಸ್ಥೆಗಳು ಒಂದೇ ಕುಟುಂಬದಂತೆ. ಯಾರಿಗೂ ಭೇದ-ಭಾವವಿಲ್ಲ‌. ಹಿಂದೆ ತುಳುವರಿಗೆ ಗದ್ದೆ ಉತ್ತು ಬಿತ್ತುವ ಬೇಸಾಯದ ಕೆಲಸ ಮಾತ್ರ ಗೊತ್ತಿತ್ತು. ಆದರೆ ಈಗ ವೈವಿಧ್ಯಮಯ ಕೆಲಸ ಕಾರ್ಯಗಳಲ್ಲಿ ತುಳುವರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಬಹಳಷ್ಟು ಶಿಸ್ತಿನಲ್ಲಿ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಕಾರ್ಯಕ್ರಮ ನಡೆಯುತ್ತಿರುವುದು ಸಂತೋಷದ ಸಂಗತಿ ಎಂದು ಹೇಳಿದರು.
ಮತ್ತೊಬ್ಬ ಅತಿಥಿ ನಮ್ಮಕುಡ್ಲ ಚಾನಲ್‌ನ ನಿರ್ದೇಶಕ ಲೀಲಾಕ್ಷ ಬಿ ಕರ್ಕೇರ ಮಾತನಾಡಿ, ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಮೊದಲ ಬಾರಿಗೆ ಆಯೋಜಿಸಿದ್ದೇ ಯುವವಾಹಿನಿ ಸಂಸ್ಥೆ. ಈಗ ಬಹಳಷ್ಟು ಸಂಘಸಂಸ್ಥೆಗಳು ಆಟಿಡೊಂಜಿ ದಿನ, ಕೆಸರ್‌ಡೊಂಜಿ ದಿನ ಕಾರ್ಯಕ್ರಮಗಳನ್ನು ಆಯೋಜಿಸಿತ್ತಿದೆ. ಹಿಂದಿನವರ ಕಷ್ಟದ ಬದುಕನ್ನು ನಾವೂ ಕಣ್ಣಾರೆ ಕಂಡವರು. ಕರಾವಳಿಯಲ್ಲಿ ಭತ್ತದ ಬೆಳೆ ಮುಖ್ಯವಾದ ಕಾಲಘಟ್ಟದಲ್ಲಿ ನಾಲ್ಕು ಹೊತ್ತು ಮನೆಮಂದಿ ಗಂಜಿ ಉಣ್ಣುತ್ತಿರುವ ಕಾಲವದು‌. ಆದರೆ ಈಗ ಅನ್ನ ಉಣ್ಣುವುದು ಕಡಿಮೆಯಾಗಿ ಉಳಿದ ಆಹಾರ ಪದಾರ್ಥಗಳ ಸೇವನೆ ಹೆಚ್ಚಾಗಿದೆ. ಎಲ್ಲಾ ಕೆಲಸ ಕಾರ್ಯಗಳಲ್ಲಿ ಯುವವಾಹಿನಿಯ ಪ್ರೋತ್ಸಾಹ ಮೆಚ್ಚುವಂತದ್ದು ಎಂದರು.
ಬಳಿಕ ಲೀಲಾಕ್ಷ ಕರ್ಕೇರ ಹಾಗೂ ದಿನೇಶ್ ಸುವರ್ಣ ರಾಯಿಯವರು ಚೆನ್ನೆಮಣೆ ಆಡಿ ಚೆನ್ನೆಮಣೆ ಸ್ಪರ್ಧೆಗೆ ಚಾಲನೆ ನೀಡಿದರು‌. ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಕಾರ್ಯದರ್ಶಿ ಚೇತನ್ ಮುಂಡಾಜೆ, ಸಂಚಾಲಕ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ ಹಾಗೂ ಎಲ್ಲಾ ಪದಾಧಿಕಾರಿಗಳು, ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಅಧ್ಯಕ್ಷತೆ ವಹಿಸಿರುವ ದಿನೇಶ್ ಸುವರ್ಣ ರಾಯಿಯವರು ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಸಂಚಾಲಕ ನವೀನ್ ಪೂಜಾರಿ ಸ್ವಾಗತಿಸಿದರು‌.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!