Yuvavahini

AUG 26, 2024 3.01 PM IST

ಯುವವಾಹಿನಿ (ರಿ) ಬಂಟ್ವಾಳ ಘಟಕ

ನಾರಾಯಣ ಗುರುಗಳ ಆದರ್ಶಗಳು ಮುಂದಿನ ಭವಿಷ್ಯದ ದಾರಿದೀಪ: ರಾಜೇಶ್ ನಾಯ್ಕ್.

ಬಂಟ್ವಾಳ : ನಾರಾಯಣ ಗುರುಗಳ ತತ್ವ ಸಂದೇಶದ ಆದರ್ಶಗಳನ್ನು ವಿದ್ಯಾರ್ಥಿಗಳು ರೂಡಿಸಿಕೊಳ್ಳಬೇಕು, ಈ ಆದರ್ಶಗಳು ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ದಾರಿ ದೀಪವಾಗಿದೆ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ತಿಳಿಸಿದರು.

ಅವರು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕ ಇದರ ಆಶ್ರಯದಲ್ಲಿ ಕರ್ನಾಟಕ ಸರಕಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಶ್ರೀನಾರಾಯಣ ಗುರು ವಸತಿ ಶಾಲೆ ಪೂಂಜಾಲಕಟ್ಟೆ ಇವರ ಸಹಯೋಗದೊಂದಿಗೆ ಶ್ರೀ ನಾರಾಯಣ ಗುರು ವಸತಿ ಶಾಲೆ ಪೂಂಜಾಲಕಟ್ಟೆಯಲ್ಲಿ ನಡೆದ
ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಯುವವಾಹಿನಿ (ರಿ) ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಾಜಿ ಸಚಿವರಾದ ಬಿ.ರಮಾನಾಥ ರೈ ಇವರು ಮಾತನಾಡಿ ನಾರಾಯಣ ಗುರುಗಳು ಯಾವುದೇ ಸಮಾಜಕ್ಕೆ ಸೀಮಿತವಾದ ಗುರುಗಳು ಅಲ್ಲ ಅವರು ಇಡೀ ಮನುಕುಲದ ಗುರುಗಳು ಎಂದರು.

35 ವರ್ಷಗಳಿಂದ ಸಮಾಜದ ಏಳಿಗೆಗಾಗಿ ದುಡಿಯುತ್ತಿರುವ ಯುವವಾಹಿನಿಯು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮುಖ್ಯ ಪಾತ್ರ ವಹಿಸಿದೆ ಈ‌ ನಿಟ್ಟಿನಲ್ಲಿ ಯುವವಾಹಿನಿಯು ಅಚ್ಚುಮೆಚ್ಚಿನ ಸಂಘಟನೆಯಾಗಿ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನವಾಗಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ತಿಳಿಸಿದರು.

ಶಿಕ್ಷಕ ಮಹೇಶ್ ಕರ್ಕೇರಾ ಗುರು ಜಯಂತಿಯ ಪ್ರಯುಕ್ತ ವಿಶೇಷ ಉಪನ್ಯಾಸ ನೀಡಿ ಮೌನ ಕ್ರಾಂತಿಯ ಮೂಲಕ ಪರಿವರ್ತನೆಯ ದೀಪ ಬೆಳಗಿದ ದಾರ್ಶನಿಕ ನಾರಾಯಣ ಗುರುಗಳು ಎಂದರು.

ಪುಂಜಾಲಕಟ್ಟೆ ಶ್ರೀ ನಾರಾಯಣ ಗುರು ವಸತಿ ಶಾಲೆ ಮುಖ್ಯೋಪಧ್ಯಾಯರಾದ ಸಂತೋಷ ಕುಮಾರ್, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬಹುಮಾನ‌ ವಿತರಣೆ : ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಹಯೋಗ ದೊಂದಿಗೆ, ಬ್ರಹ್ಮಶ್ರೀ ನಾರಾಯಣ ಗುರುಗಳ ಕುರಿತು ನಡೆದ ಭಾಷಣ ಸ್ಪರ್ಧೆಯ ಪ್ರೌಢಶಾಲಾ ವಿಭಾಗದಲ್ಲಿ ಪ್ರಥಮ ಧನುಶ್ರೀ ಸಿದ್ದಕಟ್ಟೆ, ದ್ವಿತೀಯ ಅಪೇಕ್ಷ ಸಿದ್ದಕಟ್ಟೆ, ತೃತೀಯ ಪ್ರಗತಿ ಮಾಣಿ, ಪ್ರಾಥಮಿಕ ವಿಭಾಗದಲ್ಲಿ ಪ್ರಥಮ ನಿನಾದ್ ಕೈರಂಗಳ, ದ್ವಿತೀಯ ದೀಕ್ಷಾ ಸುವರ್ಣ ಬೋಳಂತೂರು, ತೃತೀಯ ವಿಶ್ಮಾ ಸುವರ್ಣ ಬಂಟ್ವಾಳ ಇವರಿಗೆ ಈ ಸಂದರ್ಭದಲ್ಲಿ ಬಹುಮಾನ‌ ವಿತರಿಸಲಾಯಿತು.

ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ರಾಜೀವ ಪೂಜಾರಿ, ಉಪನ್ಯಾಸಕರಾದ ಡಾ.ಯಶು ಕುಮಾರ್, ಶಿಕ್ಷಕಿ ರೇಣುಕಾ ಕಣಿಯೂರು, ಅರ್ಚನಾ ಎಮ್.ಬಂಗೇರ, ಚೇತನ್ ಮುಂಡಾಜೆ, ಹರ್ಷಿತ್ ಕೊಯಿಲ ತೀರ್ಪುಗಾರರಾಗಿ ಸಹಕರಿಸಿದ್ದರು

ದಿನೇಶ್ ಸುವರ್ಣ ಸ್ವಾಗತಿಸಿದರು, ಧನುಷ್ ಮದ್ವ ನಿರೂಪಿಸಿದರು, ಯುವವಾಹಿನಿ ಬಂಟ್ವಾಳ ಘಟಕದ ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಪ್ರಜಿತ್ ಅಮೀನ್ ವಂದಿಸಿದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!