Yuvavahini

SEP 01, 2024 2.45 AM IST

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮಂಗಳೂರು ಮಹಿಳಾ ಘಟಕ ಆತಿಥ್ಯದಲ್ಲಿ

ಕುಣಿದು ಭಜಿಸಿರೋ : ಭಾವ – ಗಾನ – ಕುಣಿತ :: ಅಂತರ್ ಘಟಕ ಭಜನಾ ಸ್ಪರ್ಧೆ ಸಂಪನ್ನ

ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ), ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಹಕಾರದೊಂದಿಗೆ ದಿನಾಂಕ‌ 01.09.2024 ನೇ ಭಾನುವಾರ ಕುಣಿದು ಭಜಿಸಿರೋ : ಭಾವ – ಗಾನ – ಕುಣಿತ :: ಅಂತರ್ ಘಟಕ ಭಜನಾ ಸ್ಪರ್ಧೆ ಯಶಸ್ವೀಯಾಗಿ ಸಂಪನ್ನಗೊಂಡಿತು

ಯುವಶಕ್ತಿ ದೇಶದ ಪ್ರಭಲ ಶಕ್ತಿ ಈ ನಿಟ್ಟಿನಲ್ಲಿ ಯುವಜನತೆಯಲ್ಲಿ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಪ್ರಜ್ಞೆ ಮೂಡಿಸುವಲ್ಲಿ ಯುವವಾಹಿನಿ ಸಂಸ್ಥೆಯ ಪಾತ್ರ ಶ್ಲಾಘನೀಯ ಎಂದು ಯುವವಾಹಿನಿಯ ಅಂತರ್ ಘಟಕ ಕುಣಿದು ಭಜಿಸಿರೋ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಚಿಲಿಂಬಿ ಸಾಯಿಬಾಬಾ ಮಂದಿರದ ಮೊಕ್ತೇಸರರಾದ ವಿಶ್ವಾಸ್ ದಾಸ್ ತಿಳಿಸಿದರು.

ಯುವವಾಹಿನಿಯು ಸಮಯಪ್ರಜ್ಞೆ ಹಾಗೂ ಶಿಸ್ತು ಇತರರಿಗೆ ಮಾದರಿ ಎಂದು ಮುಖ್ಯ ಅತಿಥಿ ಕುಮಾರ್ ಪೂಜಾರಿ ಹೇಳಿದರು.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕೆ.ಜಾಹ್ನವಿ ಆರ್.ಪೂಜಾರಿ, ವಿಜಯಲಕ್ಷ್ಮಿ ಮಧುಕರ ಮಲ್ಲಿ, ಭಾಗವಹಿಸಿ ಶುಭ ಹಾರೈಸಿದರು.

ಧಾರ್ಮಿಕ ಕ್ಷೇತ್ರದ ಅನನ್ಯ ಸೇವೆಗಾಗಿ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ. ಸೇವಾದಳದ ಸಂಸ್ಥೆಯನ್ನು ಅಭಿನಂದಿಸಲಾಯಿತು.

ಭಜನಾ‌ ಸ್ಪರ್ಧೆಯ ತೀರ್ಪುಗಾರರಾಗಿ ಭಾಗವಹಿಸಿದ ಶೋಭಾ ಐತಾಳ್, ವಿಜಯಲಕ್ಷ್ಮಿ ಕಟೀಲ್, ಸಚಿನ್ ಸುವರ್ಣರವರನ್ನು ಗೌರವಿಸಲಾಯಿತು.

ಡೆನ್ನಾನ ಡೆನ್ನನ 2024 ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆಯ ಆಮಂತ್ರಣ ಪತ್ರ ಬಿಡುಗಡೆಗೊಳಿಸಲಾಯಿತು.

ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷರಾದ ಎಚ್.ಎಸ್.ಸಾಯಿರಾಮ್ ಕುಣಿತ ಭಜನಾ ಸ್ಪರ್ಧೆಯನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್.ಕೆ.ಪೂಜಾರಿ ವಹಿಸಿದ್ದರು.

ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ಲೋಕೇಶ್ ಕೋಟ್ಯಾನ್ ವಿಜೇತ ಘಟಕಗಳ ಫಲಿತಾಂಶ ಪ್ರಕಟಿಸಿದರು

ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಕಾರ್ಯದರ್ಶಿ ಅಮಿತಾ ಗಣೇಶ್, ಕಲೆ ಮತ್ತು ಸಾಹಿತ್ಯ ನಿರ್ದೇಶಕರಾದ ಶಾಲಿನಿ ಯಶವಂತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರಥಮ ಪ್ರಶಸ್ತಿ ಮುಡಿಗೇರಿಸಿಕೊಂಡ ಯುವವಾಹಿನಿ ಪಣಂಬೂರು ಕುಳಾಯಿ ಸ್ಪರ್ಧೆಯಲ್ಲಿ ಒಟ್ಟು 12 ಘಟಕಗಳು ತೀವ್ರ ಪೈಪೋಟಿಯ ಸ್ಪರ್ಧೆ ನೀಡಿ ತೀರ್ಪುಗಾರರ ಮೆಚ್ಚುಗೆಗೆ ಪಾತ್ರರಾದರು.

ಪ್ರಥಮ ಪ್ರಶಸ್ತಿ : ಪಣಂಬೂರು – ಕುಳಾಯಿ ಘಟಕ

ದ್ವಿತೀಯ ಪ್ರಶಸ್ತಿ : ಕೂಳೂರು ಘಟಕ

ತೃತೀಯ ಪ್ರಶಸ್ತಿ : ಸುರತ್ಕಲ್ ಘಟಕ

ಉತ್ತಮ ಭಜಕ : ಕಾರ್ಕಳ ಘಟಕ

ಉತ್ತಮ ತಬಲವಾದ : ಮೂಲ್ಕಿ ಘಟಕ

ಉತ್ತಮ ಹಾರ್ಮೋನಿಯಂ : ಕೂಳೂರು ಘಟಕ

ಮಂಗಳೂರು ಮಹಿಳಾ‌ ಘಟಕದ ಅಧ್ಯಕ್ಷರಾದ ಶುಭ ರಾಜೇಂದ್ರ ಹಾಗೂ ಕೇಂದ್ರ ಸಮಿತಿಯ ಕಲೆ ಹಾಗೂ ಸಾಹಿತ್ಯ ನಿರ್ದೇಶಕರಾದ ನಯನ ರಮೇಶ್ ಸ್ವಾಗತಿಸಿದರು. ಸಂಚಾಲಕರಾದ ರಶ್ಮಿ ಸಿ ಕರ್ಕೇರ ಪ್ರಸ್ತಾವನೆಗೈದರು‌. ಸಚಿನ್ ಅಂಬಾಗಿಲು ಹಾಗೂ ವಿದ್ಯಾ ರಾಕೇಶ್ ಕಾರ್ಯಕ್ರಮ ನಿರೂಪಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ, ಧನ್ಯವಾದಗೈದರು‌.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!