Yuvavahini

SEP 11, 2024 2.29 PM IST

ಯುವವಾಹಿನಿ (ರಿ) ಕೊಲ್ಯ ಘಟಕ

ಶಿಕ್ಷಣ-ಶಿಕ್ಷಕ ಅಂದು ಇಂದು ವಿಶೇಷ ಸಂವಾದ….

ಕೊಲ್ಯ: ಯುವವಾಹಿನಿ (ರಿ) ಕೊಲ್ಯ ಘಟಕದ ವತಿಯಿಂದ ನಿವೃತ್ತ ಹಿರಿಯ ಶಿಕ್ಷಕಿ ಶ್ರೀಮತಿ ವೇದಾವತಿ ಕೆ ಅವರೊಂದಿಗೆ ಶಿಕ್ಷಕರ ದಿನಾಚರಣೆ ವಿಶೇಷ ಸಂವಾದ ದಿ : 11-09-2024 ರಂದು ಬ್ರಹ್ಮ ಶ್ರೀ ನಾರಾಯಣ ಗುರು ಸಭಾ ಭವನ ಕೊಲ್ಯದಲ್ಲಿ ನಡೆಯಿತು.

ಅಧ್ಯಕ್ಷರಾದ ಶ್ರೀಮತಿ ಸುಧಾ ಸುರೇಶ್ ಸರ್ವರನ್ನು ಸ್ವಾಗತಿಸಿ, ಶಿಕ್ಷಕರ ದಿನಾಚರಣೆ ಕುರಿತು ಪ್ರಸ್ತಾವಣೆಗೈದರು. ಮುಖ್ಯ ಅತಿಥಿಯಾದ ನಿವೃತ್ತ ಹಿರಿಯ ಶಿಕ್ಷಕಿ ಶ್ರೀಮತಿ ವೇದಾವತಿ ಕೆ ಅವರನ್ನು ಘಟಕದ ವತಿಯಿಂದ ಗೌರವಿಸಲಾಯಿತು.

ಗೌರವ ಸ್ವೀಕರಿಸಿದ ಶಿಕ್ಷಕಿಯವರು ತಮ್ಮ ಶಿಕ್ಷಕ ವೃತ್ತಿಯ 42 ವರ್ಷಗಳ ತಮ್ಮ ಸೇವೆಯ ಸಾರ್ಥಕತೆ ಕುರಿತು ನಮ್ಮೊಂದಿಗೆ ಹಂಚಿಕೊಂಡರು ಹಾಗೂ ಅಂದಿನ ಶಿಕ್ಷಣಕ್ಕೂ,ಇಂದಿನ ಶಿಕ್ಷಣಕ್ಕೂ ಇರುವ ವ್ಯತ್ಯಾಸ ಮತ್ತು ಅಂದಿನ ಶಿಕ್ಷಕರು-ವಿದ್ಯಾರ್ಥಿಗಳ ನಡುವಿನ ಒಡನಾಟ, ಇಂದಿನ ಶಿಕ್ಷಕರು-ವಿದ್ಯಾರ್ಥಿಗಳ ನಡುವಿನ ಒಡನಾಟದ ಕುರಿತು ಸಂವಾದ ನಡೆಸಿದರು.

ಮಾತ್ರವಲ್ಲದೆ ಶಿಕ್ಷಕ ವೃತ್ತಿಗಿರುವ ಗೌರವ, ಘನತೆ ಪೋಷಕರಿಗೆ ತಮ್ಮ ಮಕ್ಕಳನ್ನು ಶಿಕ್ಷಕ‌ ವೃತ್ತಿ ಆಯ್ಕೆಗೆ ಪ್ರೇರೇಪಣೆ ನೀಡಿ, ಅರ್ಥಪೂರ್ಣ ಕಾರ್ಯಕ್ರಮ ಆಯೋಜನೆ ಮಾಡಿದಕ್ಕೆ ಧನ್ಯವಾದ ಸಮರ್ಪಿಸಿ, ಎಲ್ಲರಿಗೂ ಶುಭ ಹಾರೈಸಿದರು.

ಕಾರ್ಯದರ್ಶಿ ಜಗಜೀವನ್ ಕೊಲ್ಯ ಧನ್ಯವಾದ ಸಮರ್ಪಿಸಿದರು. ಯುವವಾಹಿನಿ(ರಿ) ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಹಾಗೂ ಘಟಕದ ಮಾಜಿ ಅಧ್ಯಕ್ಷರಾದ ಶ್ರೀ ಸುಂದರ್ ಸುವರ್ಣರವರು ಕಾರ್ಯಕ್ರಮದ ಕೊನೆಯಲ್ಲಿ ಸಿಹಿತಿಂಡಿ ನೀಡಿ ಸಹಕರಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!