Yuvavahini

SEP 15, 2024 5.05 AM IST

ಯುವವಾಹಿನಿ (ರಿ.) ಪಣಂಬೂರು - ಕುಳಾಯಿ ಘಟಕ

ಮಾಧವ ಕೀರ್ತನೋತ್ಸವ – 2024

ಕುಳಾಯಿ : ಯುವವಾಹಿನಿ (ರಿ.) ಪಣಂಬೂರು-ಕುಳಾಯಿ ಘಟಕದ ವತಿಯಿಂದ ಮಾಧವ ಕೀರ್ತನೋತ್ಸವ – 2024 ಭಜನಾ ಕಾರ್ಯಕ್ರಮವು 15-09-2024 ರಂದು ಭಾನುವಾರ ಕುಳಾಯಿ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಜರಗಿತು.

ಭಜನಾ ಕ್ಷೇತ್ರದ ಹಿರಿಯರು ಮಾಧವ ಅಂಚನ್ ಇಡ್ಯಾರವರು ದೀಪ ಬೆಳಗಿಸುವುದರ ಮೂಲಕ ಭಜನಾ ಸಂಕೀರ್ತನಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಭಜನಾ ಸಂಕೀರ್ತನೆಯಲ್ಲಿ ಸ್ಥಳೀಯ ಭಜನಾ ತಂಡದ ಭಜಕರು ಭಾಗವಹಿಸಿದ್ದರು. ಭಜನಾ ಮಂಗಲೋತ್ಸವದ ನಂತರ ಭಜನಾ ಕ್ಷೇತ್ರದ ಸಾಧಕರನ್ನು ಗೌರವಿಸುವ ಕಾರ್ಯಕ್ರಮವು ಜರಗಿತು.

ಅಧ್ಯಕ್ಷತೆಯನ್ನು ಯುವವಾಹಿನಿ(ರಿ.) ಪಣಂಬೂರು-ಕುಳಾಯಿ ಘಟಕದ ಅಧ್ಯಕ್ಷೆ ಮನಿಷಾ ರೂಪೇಶ್ ವಹಿಸಿದ್ದರು. ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಅಧ್ಯಕ್ಷರು ಕೇಶವ ಸುವರ್ಣ ಮುಖ್ಯ ಅತಿಥಿಗಳಾಗಿ, ಮಾಧವ ಕೀರ್ತನೋತ್ಸವದ ಕೇಂದ್ರ ಬಿಂದು ಮಾಧವ ಅಂಚನ್ ಇಡ್ಯಾ, ನಾರಾಯಣ ಗುರು ತತ್ವ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕ ಯಶವಂತ್ ಕುಮಾರ್, ಸಂಚಾಲಕರು ಹರೀಶ್ ಪೂಜಾರಿ ಉಪಸ್ಥಿತರಿದ್ದರು.

ಪ್ರಸಕ್ತ ಸಾಲಿನ ಭಜನಾ ಕ್ಷೇತ್ರದ ಸಾಧಕರಿಗೆ ನೀಡುತ್ತಿರುವ ಮಾಧವ ಕೀರ್ತನೋತ್ಸವ ಪ್ರಶಸ್ತಿಯನ್ನು, ಉರ್ವ ಹೊಯ್ಗೆಬೈಲ್ ನ 91 ವರ್ಷ ಪ್ರಾಯದ ಹಿರಿಯ ಭಜಕರು, ಕೃಷಿಕರೂ ಆಗಿರುವ ಸಂಜೀವ ರಾಮ್ ಪೂಜಾರಿಯವರಿಗೆ ನೀಡಿ ಗೌರವಿಸಲಾಯಿತು. ಗೌರವ ಸ್ವೀಕರಿಸಿದ ಸಾಧಕರು ಭಜನೆಯಿಂದ ಪಡೆದುಕೊಂಡ ಅರೋಗ್ಯದ ಗುಟ್ಟನ್ನು ಹಂಚಿಕೊಳ್ಳುತ್ತಾ, ಯುವವಾಹಿನಿ ಸಂಸ್ಥೆಯು ಕೈಗೊಳ್ಳುತ್ತಿರುವ ಅನೇಕ ಸಮಾಜಮುಖಿ ಕಾರ್ಯಕ್ರಮಗಳೊಂದಿಗೆ, ಯುವಭಜಕರನ್ನು ಒಟ್ಟಾಗಿಸುವ ಪುಣ್ಯ ಕಾರ್ಯದ ಮೂಲಕ ಭಜನೆಯನ್ನು ಅತೀ ಎತ್ತರಕ್ಕೆ ಬೆಳೆಸಿ, ಸಮಾಜದ ಸ್ವಾಸ್ತ್ಯವನ್ನು ಕಾಪಾಡುವಲ್ಲಿ ಯಶಸ್ವಿಯಾಗಿದೆ ಎಂದರು. ಭಜನೆಯೇ ನನ್ನ ಉಸಿರು ಎಂಬ ನನ್ನ ಭಾವನೆಗೆ ಸ್ಪಂದಿಸಿ ಈ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ಗೌರವಿಸಿರುವುದಕ್ಕಾಗಿ ಸಂತಸ ವ್ಯಕ್ತಪಡಿಸಿದರು.

ಮಾಜಿ ಅಧ್ಯಕ್ಷರು ಸಂಜೀವ ಸುವರ್ಣ ಪ್ರಸ್ತಾವನೆಗೈದರು. ಕಾರ್ಯದರ್ಶಿ ಸಚಿನ್ ಜಿ ಅಮೀನ್ ವಂದಿಸಿದರು.
ರೇಖಾ ಅಂಚನ್ ಹಾಗೂ ಯಶಸ್ವಿನಿ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!