Yuvavahini

OCT 20, 2024 7.09 AM IST

ಯುವವಾಹಿನಿಯಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

ಬೇಬಿ ಪೂಜಾರಿ ಬದುಕಿಗೆ ಆಸರೆಯ ಬೆಳಕಾದ ಯುವವಾಹಿನಿ

ಮಂಗಳೂರು : ಮಂಗಳೂರು ತಾಲೂಕು ಬೊಂಡಂತಿಲ ಗ್ರಾಮದ ತಾರಿಗುಡ್ಡೆ ನಿವಾಸಿ ಬೇಬಿ ಪೂಜಾರಿ ಕುಟುಂಬಕ್ಕೆ ದಿನಾಂಕ 20-10-2024 ರಂದು ಯುವವಾಹಿನಿ ಸಂಸ್ಥೆಯು ಸುಮಾರು ರೂ 6.40 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆಯ ಹಸ್ತಾಂತರ ಸಮಾರಂಭದಲ್ಲಿ ಉದ್ಯಮಿ ದಯಾನಂದ ಬಂಗೇರ ದೀಪ ಬೆಳಗಿ ಉದ್ಘಾಟಿಸಿದರು.

ಮಾನವತಾವಾದಿ ನಾರಾಯಣ ಗುರುಗಳ‌ ಸಂದೇಶದಂತೆ ಯುವವಾಹಿನಿ ಮಾಡುತ್ತಿರುವ ಸಮಾಜಮುಖಿ ಕಾರ್ಯ ಶ್ಲಾಘನೀಯ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಸಲಹೆಗಾರ ಡಾ.ಎನ್.ಟಿ.ಅಂಚನ್ ಅಶಕ್ತ ಕುಟುಂಬಕ್ಕೆ ಮನೆ ಹಸ್ತಾಂತರ ಮಾಡಿ ಮಾತನಾಡಿದರು.

ಯುವವಾಹಿನಿಯ ಮನೆ ಹಸ್ತಾಂತರದ ಕನಸು ನನಸಾಗಿರುವುದು ಸಂತಸ ತಂದಿದೆ : ಜಯರಾಮ ಪೂಜಾರಿ ಬಾಳಿಲ

ಹೃದಯ ಸಂಬಧಿ ಕಾಯಿಲೆಯಿಂದ ದುಡಿಯಲಾಗದೆ ಮನೆಯಲ್ಲಿರುವ ಅನಾರೋಗ್ಯ ಪೀಡಿದ ಗಂಡ, ಈಗಲೋ ಆಗಲೋ ಕುಸಿದು ಬೀಳುವಂತಿರುವ ಮನೆ, ಬೀಡಿ ಕಟ್ಟಿ ಬಂದ ಹಣದಿಂದ ಮನೆ ನಿಭಾಯಿಸುವ ಸಂಕಷ್ಟ ಹಾಗೂ ಅಶಕ್ತ ಕುಟುಂಬದ ಜವಾಬ್ದಾರಿ ಹೊತ್ತ ಬೇಬಿ ಪೂಜಾರಿಯವರಿಗೆ ಯುವವಾಹಿನಿ ಸದಸ್ಯರು ಹಾಗೂ ದಾನಿಗಳ ನೆರವಿನಿಂದ ಸುಮಾರು ರೂ 6.40 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಮನೆ ಹಸ್ತಾಂತರ ನಿಜಕ್ಕೂ ಯುವವಾಹಿನಿಯ ಸಂತಸದ ಕ್ಷಣ ಎಂದು ಮನೆ ನಿರ್ಮಾಣದ ಸಂಪೂರ್ಣ ಮೇಲುಸ್ತುವಾರಿ ವಹಿಸಿಕೊಂಡ ಯುವವಾಹಿನಿ ಕೇಂದ್ರ ಸಮಿತಿಯ ಸಮಾಜ ಸೇವಾ ನಿರ್ದೇಶಕ ಜಯರಾಮ ಪೂಜಾರಿ ಬಾಳಿಲ ತಿಳಿಸಿದರು.

ನಾರಾಯಣಗುರುಗಳ ಆಶೀರ್ವಾದದಿಂದ ಮನೆಯು ನಂದಾದೀಪವಾಗಿ ಬೆಳಗಲಿ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಸಲಹೆಗಾರರಾದ ಟಿ.ಎನ್ ಪೂಜಾರಿ ಶುಭ ಹಾರೈಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಮಾತನಾಡಿ, ಹಗಲು ರಾತ್ರಿಯೆನ್ನದೆ ಸೇವಾ ಮನೋಭಾವದಿಂದ ಮನೆ ನಿರ್ಮಾಣದಲ್ಲಿ ಸಹಕಾರ ನೀಡಿದ ದಾನಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ, ಕೋಶಾಧಿಕಾರಿ ಹರೀಶ್ ಪಚ್ಚನಾಡಿ, ಉಪಾಧ್ಯಕ್ಷ ಅಶೋಕ್ ಕುಮಾರ್ ಪಡ್ಪು, ಜತೆ ಕಾರ್ಯದರ್ಶಿ ರೇಖಾ ಗೋಪಾಲ್, ಕಾರ್ಯಕಾರಿ ಸಮಿತಿ ಸದಸ್ಯರು, ಮಾಜಿ ಅಧ್ಯಕ್ಷರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!