10-08-2026, 10:00 PM
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ಪ್ರತೀ ಸೋಮವಾರ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ: 10-08-2026 ರಂದು ಸಂಜೆ ನಡೆಯಿತು. ಈ ವಾರದ ಭಜನಾ ಸೇವೆ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ ಇವರ ಸಹಯೋಗದಲ್ಲಿ ನೆರವೇರಿತು. ಹರಿನಾಮ ಸ್ಮರಣೆಯ ಭಕ್ತಿ ಭಾವ ತುಂಬಿದ ಭಜನೆಯನ್ನು ಗೋಕರ್ಣನಾಥ ಹಾಗೂ ನಾರಾಯಣ ಗುರುಗಳ ಚರಣಕ್ಕೆ ಸಮರ್ಪಿಸಿದರು. ಸಂಜೆ 7 ಗಂಟೆಗೆ ಸರಿಯಾಗಿ ಕ್ಷೇತ್ರದ ನಾರಾಯಣ […]
Read More
10-08-2026, 9:00 PM
ಬಜಪೆ, ಆಗಸ್ಟ್ 10: ಶ್ರೀ ನಾರಾಯಣ ಗುರುಗಳ ತತ್ವ, ಆದರ್ಶ ಹಾಗೂ ಸಂದೇಶಗಳನ್ನು ಸಮಾಜಕ್ಕೆ ತಲುಪಿಸುವಲ್ಲಿ ಯುವವಾಹಿನಿ (ರಿ.) ಕೈಗೊಂಡಿರುವ ಮನೆ ಮನೆ ಭಜನಾ ಸಂಕೀರ್ತನೆಯ ಕಾರ್ಯ ಶ್ಲಾಘನೀಯ ಎಂದು ಹಿರಿಯ ಭಜಕ ಯಾದವ ಸುವರ್ಣ ಹೇಳಿದರು. ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ಆಯೋಜಿಸಲಾದ ಮನೆ ಮನೆ ಭಜನಾ ಸಂಕೀರ್ತನೆಯು ಆ.10ರಂದು ಸಂಜೆ 6.30ರಿಂದ 7.30ರವರೆಗೆ ಸುಂಕದಕಟ್ಟೆ, ಬಜಪೆಯ ನಾರಾಯಣ ಸುವರ್ಣ ಅವರ ‘ಪ್ರಕೃತಿ ನಿಲಯ’ದಲ್ಲಿ ಭಕ್ತಿ ಹಾಗೂ ಶ್ರದ್ಧೆಯಿಂದ ನಡೆಯಿತು. ಭಜನಾ ಸಂಕೀರ್ತನೆಯ ಬಳಿಕ […]
Read More
09-08-2026, 8:00 PM
ಕಡಬ, ಆಗಸ್ಟ್ 09: ಯುವಕರ ಒಗ್ಗಟ್ಟು ಹಾಗೂ ಸಂಘಟಿತ ಪ್ರಯತ್ನವೇ ಯುವವಾಹಿನಿಯ ಶಕ್ತಿ. ಯುವಜನತೆ ಸಮಾಜಮುಖಿ ಚಿಂತನೆಯೊಂದಿಗೆ ಒಗ್ಗಟ್ಟಾಗಿ ಮುನ್ನಡೆದಾಗ ಸಮಾಜದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಲು ಸಾಧ್ಯ ಎಂದು ಶ್ರೀ ಕಾಮಧೇನು ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಉಷಾ ಅಂಚನ್ ಹೇಳಿದರು. ಅವರು ದಿನಾಂಕ 09.08.2026ರಂದು ಯುವವಾಹಿನಿ (ರಿ.) ಕಡಬ ಘಟಕದ ಆಶ್ರಯದಲ್ಲಿ, ಬಿಲ್ಲವ ಸಂಘ ಕಡಬ ತಾಲೂಕು ಹಾಗೂ ಬಿಲ್ಲವ ಮಹಿಳಾ ವೇದಿಕೆಯ ಸಹಕಾರದೊಂದಿಗೆ ಅಲಂಕಾರು–ಪೆರಾಬೆ ಗ್ರಾಮದ ಶ್ರೀ ರಕ್ತೇಶ್ವರಿ ದೈವಸ್ಥಾನ ಮಾಯಿಲ್ಗದ ಮುಂಭಾಗದ […]
Read More
09-08-2026, 8:00 PM
ಕೂಳೂರು, ಆಗಸ್ಟ್ 09: ಯುವವಾಹಿನಿ (ರಿ.) ಮೂಲಕ ಯುವ ಸಮುದಾಯ ಸಮಾಜದ ಬಲಿಷ್ಠ ಶಕ್ತಿಯಾಗಿ ರೂಪುಗೊಳ್ಳಬೇಕು. ಇಂತಹ ಯುವಕರನ್ನು ರೂಪಿಸುವ ಯುವವಾಹಿನಿಯ ಸಮಾಜಮುಖಿ ಕಾರ್ಯ ನಿರಂತರವಾಗಿ ಮುಂದುವರಿದು ಅಜರಾಮರವಾಗಲಿ ಎಂದು ‘ಅಭಿಮತ’ ಸುದ್ದಿ ವಾಹಿನಿಯ ನಿರ್ದೇಶಕಿ ಡಾ. ಮಮತಾ ಪಿ. ಶೆಟ್ಟಿ ಆಶಿಸಿದರು. ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಕೂಳೂರಿನ ಫಲ್ಗುಣಿ ಸಭಾಂಗಣದಲ್ಲಿ ಭಾನುವಾರ ನಡೆದ ‘ಆಟಿದ ಪೊರ್ಲು–2026’ ಕಾರ್ಯಕ್ರಮವನ್ನು ತುಳಸಿ ಕಟ್ಟೆಯ ತುಳಸಿ ಗಿಡಕ್ಕೆ ನೀರು ಹಾಕಿ, ದೀಪ ಬೆಳಗಿಸುವ ಮೂಲಕ ಸಾಂಪ್ರದಾಯಿಕವಾಗಿ ಉದ್ಘಾಟಿಸಿ […]
Read More
09-08-2026, 4:00 PM
ಮಾಣಿ ಅಗಸ್ಟ್ 09: ಮಾಣಿ ಪರಿಸರದ ಜನರ ಬಹುಕಾಲದ ನಿರೀಕ್ಷೆಯಾಗಿದ್ದ ಆಂಬ್ಯುಲೆನ್ಸ್ ಸೇವೆಯ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಆಯೋಜಿಸಲಾಗಿದ್ದ ‘ಆಟಿ ಸಿರಿ ಸಂಭ್ರಮ–2026’ ಕಾರ್ಯಕ್ರಮದ ವೇದಿಕೆಯಲ್ಲಿ ನೆರವೇರಿತು.ಜನರ ತುರ್ತು ಆರೋಗ್ಯ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಿಸಲಾಗುತ್ತಿರುವ ಈ ‘ಸೇವಾ ಸ್ಪರ್ಶ–ಆಂಬ್ಯುಲೆನ್ಸ್ ಸೇವೆ’ ಮಾಣಿ ಹಾಗೂ ಸುತ್ತಮುತ್ತಲಿನ ಜನರಿಗೆ ಮಹತ್ವದ ಆರೋಗ್ಯ ಸೇವಾ ಸೌಲಭ್ಯವಾಗಲಿದೆ. ಆರೋಗ್ಯ ಸೇವೆಯ ಕ್ಷೇತ್ರದಲ್ಲಿ ಮಾನವೀಯ ಕಾಳಜಿಯೊಂದಿಗೆ ಸಮಾಜಮುಖಿ ಹೆಜ್ಜೆ ಇಟ್ಟಿರುವ ಯುವವಾಹಿನಿ (ರಿ.) ಮಾಣಿ ಘಟಕದ […]
Read More
09-08-2026, 2:00 PM
ಉಡುಪಿ, ಆಗಸ್ಟ್ 09: ಯುವವಾಹಿನಿ (ರಿ.) ಉಡುಪಿ ಘಟಕದ ಆಶ್ರಯದಲ್ಲಿ ‘ಅಟಿಡೊಂಜಿ ದಿನ’ ಕಾರ್ಯಕ್ರಮವು ಘಟಕದ ಸಭಾಂಗಣದಲ್ಲಿ ಸಂಭ್ರಮ ಹಾಗೂ ಸಡಗರದಿಂದ ನಡೆಯಿತು. ಘಟಕದ ಅಧ್ಯಕ್ಷ ವಿನೋದ್ ಮಂಚಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಘಟಕದ ಮಾಜಿ ಅಧ್ಯಕ್ಷರುಗಳು ಒಗ್ಗೂಡಿ ಗುರುವಿಗೆ ದೀಪ ಬೆಳಗಿಸುವ ಮೂಲಕ ಹಾಗೂ ಪ್ರಾರ್ಥನೆಯೊಂದಿಗೆ ಆರಂಭಿಸಿದರು. ಬಳಿಕ ಚೆನ್ನಮನೆಯ ಆಟವಾಡಿ, ವಾಲೆಬೆಲ್ಲ ಹಂಚುವ ಮೂಲಕ ಸಾಂಪ್ರದಾಯಿಕವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಆಟಿ ತಿಂಗಳ ಸಾಂಪ್ರದಾಯಿಕ ಆಹಾರ ಸಂಸ್ಕೃತಿಯನ್ನು ಪರಿಚಯಿಸುವ ಉದ್ದೇಶದಿಂದ ಯುವವಾಹಿನಿಯ ಸದಸ್ಯರು […]
Read More
09-08-2026, 10:00 AM
ಕಾಪು, ಆಗಸ್ಟ್ 09: ಯುವಕರಲ್ಲಿ ಬೌದ್ಧಿಕ ಸಾಮರ್ಥ್ಯ, ಏಕಾಗ್ರತೆ ಹಾಗೂ ಕ್ರೀಡಾ ಮನೋಭಾವ ಬೆಳೆಸುವಲ್ಲಿ ಚೆಸ್ ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಮಂಗಳೂರು ಸಿಎಆರ್‌ನ ಡೆಪ್ಯೂಟಿ ಕಮಿಷನರ್ ಆಫ್ ಪೊಲೀಸ್ ಉಮೇಶ್ ಪಿ. ಹೇಳಿದರು. ಕಾಪು ಶ್ರೀ ಹಳೆ ಮಾರಿಯಮ್ಮ ದೇವಸ್ಥಾನದ ಸಭಾಭವನದಲ್ಲಿ ಯುವವಾಹಿನಿ (ರಿ.) ಕಾಪು ಘಟಕದ ನೇತೃತ್ವದಲ್ಲಿ, ಕರ್ನಾಟಕ ರಾಜ್ಯ ಚೆಸ್ ಸಂಸ್ಥೆ ಹಾಗೂ ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್ ಸಹಯೋಗದಲ್ಲಿ ಆಯೋಜಿಸಲಾದ ‘ಯುವವಾಹಿನಿ ಟ್ರೋಫಿ–2026’ ಓಪನ್ ಹಾಗೂ ವಯೋಮಿತಿ ಚೆಸ್ ಪಂದ್ಯಾವಳಿಗೆ […]
Read More
08-08-2026, 8:00 PM
ಮಂಗಳೂರು, ಆಗಸ್ಟ್ 08: ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಆಯೋಜಿಸಲಾದ ‘ಸ್ನೇಹ ಮಿಲನ’ ಕಾರ್ಯಕ್ರಮವು ಉರ್ವಸ್ಟೋರ್‌ನ ಯುವವಾಹಿನಿ ಸಭಾಂಗಣದಲ್ಲಿ ಸಂಭ್ರಮ ಹಾಗೂ ಆತ್ಮೀಯತೆಯಿಂದ ನಡೆಯಿತು. ಘಟಕದ ಅಧ್ಯಕ್ಷೆ ಕಸ್ತೂರಿ ಮಹೇಶ್ ಅವರು ನಾರಾಯಣ ಗುರುಗಳಿಗೆ ದೀಪ ಬೆಳಗಿಸಿ, ಗುರುಸ್ತುತಿಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಕಾರ್ಯಕ್ರಮದಲ್ಲಿ ಘಟಕದ ಮಾಜಿ ಅಧ್ಯಕ್ಷೆಯರು ಯುವವಾಹಿನಿ ಹಾಗೂ ಮಂಗಳೂರು ಮಹಿಳಾ ಘಟಕದೊಂದಿಗಿನ ತಮ್ಮ ಒಡನಾಟ ಮತ್ತು ಅನುಭವಗಳನ್ನು ಹಂಚಿಕೊಂಡರು. ಘಟಕದ ಬೆಳವಣಿಗೆ […]
Read More