ಯುವವಾಹಿನಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ ಡೆನ್ನಾನ ಡೆನ್ನನ – 2018
15-02-2018, 9:19 AM
23-04-2017, 6:11 AM
ತಲೆಗೊಂದು ಸೂರು – ಇದು ಯುವವಾಹಿನಿ (ರಿ) ಉಡುಪಿ ಘಟಕದ ಶಾಶ್ವತ ಯಶಸ್ವೀ ಯೋಜನೆ – ವರುಷಕ್ಕೊಂದು ತೀರಾ ಬಡ ಕುಟುಂಬವನ್ನು ಆಯ್ಕೆ ಮಾಡಿ ಅವರಿಗೆ ಮನೆ ನಿರ್ಮಾಣ ಮಾಡಿ ಕೊಡುವುದು ಉಡುಪಿ ಯುವವಾಹಿನಿಯ ಜನಪ್ರಿಯ ಸಮಾಜಮುಖಿ ಕಾರ್ಯಕ್ರಮ. ಈ ವರ್ಷದ ತಲೆಗೊಂದು ಸೂರು ಕಾರ್ಯಕ್ರಮದಲ್ಲಿ ದಿನಾಂಕ 23.04.2017ನೇ ಆದಿತ್ಯವಾರ ಶ್ರೀಮತಿ ಇಂದಿರಾ ಎಂಬ ಬಡ ಕುಟುಂಬಕ್ಕೆ ಮನೆ ನಿರ್ಮಾಣ ಮಾಡಿ ಹಸ್ತಾಂತರಿಸಲಾಗಿದೆ. ರಾಜ್ಯ ಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಸಾಂಕೇತಿಕವಾಗಿ ಶ್ರೀಮತಿ ಇಂದಿರಾ ಕುಟುಂಬಕ್ಕೆ ಮನೆ ಹಸ್ತಾಂತರಿಸಿದರು. ಮಾಜಿ ಸಚಿವ […]
22-04-2017, 12:03 PM
ಯುವವಾಹಿನಿ ಪುತ್ತೂರು ಘಟಕದ ಆಶ್ರಯದಲ್ಲಿ ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಇದರ ಸಹಯೋಗದೊಂದಿಗೆ ದಿನಾಂಕ 22.04.2017 ನೇ ಶನಿವಾರ ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಸಭಾಭವನದಲ್ಲಿ ರಕ್ತದಾನ ಶಿಬಿರ ಜರುಗಿತು. ಪುತ್ತೂರು ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಬಿಲ್ಲವ ಸಂಘದ ಅದ್ಯಕ್ಷರಾದ ಜಯಂತ ನಡುಬೈಲು ಶಿಬಿರ ಉದ್ಘಾಟಿಸಿ ಮಾತನಾಡಿ ಮನುಷ್ಯನ ಶರೀರದಲ್ಲಿ ಹರಿಯುವ ರಕ್ತ ಒಂದೇ, ಜಾತಿ, ಮತ, ಧರ್ಮಗಳ ವ್ಯತ್ಯಾಸವಿಲ್ಲದೆ ಎಲ್ಲರೂ ಒಂದೇ ತಾಯಿಯ ಮಕ್ಕಳು ಎಂಬ ಸಂದೇಶ ಸಾರುತ್ತದೆ ಎಂದು ತಿಳಿಸಿದರು. ಯುವವಾಹಿನಿ […]
16-04-2017, 12:35 PM
ಜಾಗತೀಕರಣದ ಭರಾಟೆಯಲ್ಲಿ ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯ ನಶಿಸಿಹೋಗುತ್ತಿರುವ ಈ ಕಾಲಘಟ್ಟದಲ್ಲಿ ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಮೂಲಕ ಯುವ ಜನಾಂಗದಲ್ಲಿ ಹೊಸ ಹುರುಪು ಮೂಡಿಸುವ ಕಾರ್ಯ ಮಾಡುತ್ತಿರುವ ಬಜಪೆ ಯುವವಾಹಿನಿಯು ಉತ್ತಮ ದಾರಿಯಲ್ಲಿ ಮುನ್ನಡೆಯುತ್ತಿದೆ ಎಂದು ರೋಟರಿ ವಲಯ 1ರ ಸಹಾಯಕ ಗವರ್ನರ್ ಜಿನರಾಜ್ ಸಾಲ್ಯಾನ್ ತಿಳಿಸಿದರು. ಅವರು ಯುವವಾಹಿನಿ(ರಿ) ಬಜಪೆ ಘಟಕದ ಆಶ್ರಯದಲ್ಲಿ ದಿನಾಂಕ 16.04.2017 ನೇ ಆದಿತ್ಯವಾರ ಬೆಳಗ್ಗೆ ಬಜಪೆ ಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ಹೊಸ ವರ್ಷಾಚರಣೆಯ ಪ್ರಯುಕ್ತ ಜರುಗಿದ ಬಿಸು […]
16-04-2017, 12:35 PM
ಮಹಿಳೆಯರು ಪುರುಷರಿಗಿಂತ ಮಾನಸಿಕವಾಗಿ ದೈಹಿಕವಾಗಿ ಬಲಾಡ್ಯರು ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಯಶಸ್ಸು ಗಳಿಸಲು ಸಾಧ್ಯವಾಗಿದೆ. ಮಾನವ ಧನಾತ್ಮಕ ಮತ್ತು ಋಣಾತ್ಮಕವೂ ಆದ ಚಿಂತನೆ ಮತ್ತು ಗುಣಗಳ ವಿಭಿನ್ನ ರೀತಿಯ ಸಂಕೇತ ತನ್ನಲ್ಲಿರುವ ಕೆಟ್ಟದ್ದನ್ನು ತ್ಯಜಿಸಿ ಒಳ್ಳೆಯದನ್ನು ಮೈಗೂಡಿಸಿಕೊಂಡು ಬಂದಂತೆಲ್ಲಾ ಗೌರವ ಪಡೆದುಕೊಳ್ಳುತ್ತಾರೆ. ಇಂತಹ ಗುಣವಂತರನ್ನು ಸಮಾಜ ಅರಸಿಕೊಂಡು ಬರುತ್ತದೆ, ಆದ್ದರಿಂದ ಮನಸ್ಸು ಮನಸ್ಸುಗಳ ಮಧ್ಯೆ ಸೇತುವೆ ನಿರ್ಮಾಣದ ಕಾರ್ಯ ನಾವು ಮಾಡಬೇಕಾಗಿದೆ ಎಂದು ಬೆಳ್ತಂಗಡಿ DKRDS ಯೋಜನಾಧಿಕಾರಿ ಶೈಲು ಬಿರ್ವ ಅಗತ್ತಾಡಿ ಅಭಿಪ್ರಾಯಪಟ್ಟರು. ಅವರು 16.04.2017 […]
16-04-2017, 4:16 AM
ವಿದ್ಯೆ ಉದ್ಯೋಗ ಸಂಪರ್ಕ ಎಂಬ ಮೂರು ಮುಖ್ಯ ಉದ್ದೇಶಗಳೊಂದಿಗೆ ಹಳೆಯಂಗಡಿ ಯುವವಾಹಿನಿಯ ಸಮಾಜಮುಖಿ ಕಾರ್ಯ ಶ್ಲಾಘನೀಯವಾದುದು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅದ್ಯಕ್ಷ ಪದ್ಮನಾಭ ಮರೋಳಿ ತಿಳಿಸಿದರು. ಅವರು ದಿನಾಂಕ 16.04.2017 ನೇ ಆದಿತ್ಯವಾರ ಹಳೆಯಂಗಡಿ ಬ್ರಹ್ಮಶ್ರೀ ನಾರಾಯಣಗುರು ಸಭಾಗೃಹದಲ್ಲಿ ಜರುಗಿದ ಯುವವಾಹಿನಿ (ರಿ) ಹಳೆಯಂಗಡಿ ಘಟಕದ 2017-18 ನೇ ಸಾಲಿನ ನೂತನ ಪದಾದಿಕಾರಿಗಳ ಪದಪ್ರಧಾನ ನೆರವೇರಿಸಿ ಮಾತನಾಡಿದರು. ಕಟೀಲು ಮೇಳದ ಸುಪ್ರಸಿದ್ಧ ಯಕ್ಷಗಾನ ಕಲಾವಿದ ರಾಮಚಂದ್ರ ಮುಕ್ಕ ಇವರು ಯಕ್ಷಗಾನ ತರಬೇತಿ ತರಗತಿಯನ್ನು ಉದ್ಘಾಟಿಸಿ, ಜಿಲ್ಲೆಯ […]
10-04-2017, 11:24 AM
ಪ್ರೀತಿಯ ವಾಚಕರೇ, ಸಮಯ ಸಂದರ್ಭಗಳು ಒಂದೇ ರೀತಿ ಇರುವುದಿಲ್ಲ. ಬದಲಾಗುತ್ತಿರುವ ಈ ಕಾಲದಲ್ಲಿ ಅದೆಷ್ಟೋ ಬಾರಿ ನಾವು ಮಾಡುವ ಕಾರ್ಯದಲ್ಲಿ ನಮಗೆ ವಿರುದ್ಧವಾಗಿ ನಡೆಯಬಹುದು. ಅಂತಹ ಪರಿಸ್ಥಿತಿ ಬಂದಾಗ ದುಃಖಿಸುತ್ತಾ ಇರುವ ಬದಲು, ಎದುರಾದ ಪರಿಸ್ಥಿತಿಯನ್ನು ತನ್ನ ಕಡೆ ಪರಿವರ್ತನೆ ಮಾಡಿಸಿಕೊಳ್ಳುವವನೆ ನಿಜವಾದ ಜಾಣ. ಎಷ್ಟೇ ಗಂಭೀರವಾದ ಸೋಲನ್ನು ಗೆಲುವಾಗಿ ದಕ್ಕಿಸಿಕೊಂಡಿರುವ ಅಗ್ರಗಣ್ಯರು ಈ ಪ್ರಪಂಚದಲ್ಲಿ ತುಂಬಾ ಜನ ಇದ್ದಾರೆ. ಅಂತಹವರನ್ನು ಅನುಕರಿಸಿಕೊಂಡು ತನ್ನ ಯಾವುದೇ ಪ್ರತಿಕೂಲ ಪರಿಸ್ಥಿತಿಗಳನ್ನು ಸಕಾರಾತ್ಮಕವಾಗಿ ಅರ್ಥಮಾಡಿಕೊಂಡು ಮನಸ್ಸಿನ ಮೇಲೆ ಒತ್ತಡ ಹಾಕಿಕೊಳ್ಳದೆ, […]
10-04-2017, 4:06 AM
ಮದರಾಸಿನ ’ಚಂದಮಾಮ’ ಪಬ್ಲಿಕೇಶನ್‌ರವರು ಕನ್ನಡದಲ್ಲಿ ’ವಿಜಯಚಿತ್ರ’ ಸಿನೀಮ ಮಾಸಿಕ ಮತ್ತು ವನಿತಾ ಮಹಿಳಾ ಪತ್ರಿಕೆಗಳನ್ನು ಪ್ರಕಟಿಸುತ್ತಿದ್ದರು. ರವಿರಾಜ ಅಜ್ರಿಯವರು 1978 ರಲ್ಲಿ ಈ ಪತ್ರಿಕೆಗಳಿಗೆ ಕೆಲಸಕ್ಕೆ ಸೇರಿ 1983 ರ ತನಕ ಅಲ್ಲಿ ಸೇವೆ ಸಲ್ಲಿಸಿದರು. 1983 ರಲ್ಲಿ ಖ್ಯಾತ ಪತ್ರಕರ್ತ ದಿ| ಎಸ್ ವಿಜಯಶೀಲ ರಾವ್ ಅವರ ’ಮುಂಜಾನೆ’ ಕನ್ನಡ ದಿನ ಪತ್ರಿಕೆಗೆ ಸೇರಿದರು. ಇದು ಸಿನೀಮ ಪತ್ರಿಕೆಯಾಗಿದ್ದು ಇಲ್ಲಿ ಸುಮಾರು ಮೂರು ವರ್ಷ ಕೆಲಸ ನಿರ್ವಹಿಸಿದರು. ಚಂದಮಾಮ ಪಬ್ಲಿಕೇಶನ್‌ನ ಮಾಲಕ ವಿಶ್ವನಾಥ ರೆಡ್ಡಿಯವರು ’ವಿಜಯಚಿತ್ರ’ ಪತ್ರಿಕೆಯ ಕಚೇರಿಯನ್ನು ಬೆಂಗಳೂರಿನ […]
10-04-2017, 4:04 AM
ಕಲಿಯುತ್ತಿರುವ ಮಕ್ಕಳೆಲ್ಲರೂ ವಾರ್ಷಿಕ ಪರೀಕ್ಷೆಗಳನ್ನು ಎದುರಿಸುತ್ತಿರುವಂತಹ ಸಮಯದಲ್ಲಿ ನಾವಿದ್ದೇವೆ. ಇಂತಹ ಸಮಯದಲ್ಲಿ ಹೆತ್ತವರ ಪಾತ್ರ ಬಹಳ ಮುಖ್ಯವಾದುದು. ನಾವು ಮಕ್ಕಳಿಗೆ ಓದು ಓದು ಎನ್ನುವುದನ್ನು ಬಿಟ್ಟರೆ ಬೇರೇನ್ನನ್ನೂ ಮಾಡುವುದಿಲ್ಲ. ಓದುವ ಮಕ್ಕಳಿರುವ ಮನೆಯವರು ಕೆಲವು ಶಿಷ್ಠಾಚಾರಗಳನ್ನು ಪಾಲಿಸಬೇಕಾದ ಅನಿವಾರ್ಯತೆ ಇದೆ. * ಮಕ್ಕಳಿಗೆ ಓದಲು ಶಾಂತವಾದ ಪರಿಸರವನ್ನು ಒದಗಿಸಬೇಕು. * ಮಕ್ಕಳು ಓದುವ ಸಮಯದಲ್ಲಿ ಆದಷ್ಟು ಟಿ.ವಿ. ಬಂದ್ ಮಾಡಿದರೆ ಒಳ್ಳೆಯದು. * ಮಕ್ಕಳು ಓದುತ್ತಿರುವಾಗ ನಾವು ಕೂಡಾ ಯಾವುದಾದರು ಪುಸ್ತಕ ಅಥವಾ ಪೇಪರ್ ಹಿಡಿದುಕೊಂಡು ಅವರ […]