ಬಂಟ್ವಾಳ : ಆರೋಗ್ಯ ಮಾನವನ ಅತ್ಯಂತ ಶ್ರೇಷ್ಠ ಸಂಪತ್ತು, ಆಯುರ್ವೇದ ಔಷಧಿಗಳು ನಿಧಾನವಾದ ಪರಿಣಾಮ ಎಂಬುದು ಸತ್ಯಕ್ಕೆ ದೂರವಾದ ಮಾತು, ಋಷಿಮನಿಗಳ ಕಾಲದಿಂದಲೂ ನಾವು ಕೇಳಿ ತಿಳಿದುಕೊಂಡ ಹಾಗೂ ಯಾವುದೇ ಅಡ್ಡ ಪರಿಣಾಮಗಳು ಇಲ್ಲದ, ಆಯುರ್ವೇದ ಚಿಕಿತ್ಸೆ ಅತ್ಯಂತ ಪ್ರಯೋಜನಕಾರಿಯಾಗಿದೆ ಎಂದು ರೊಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ ಇದರ ಅಧ್ಯಕ್ಷೆ ಪಲ್ಲವಿ ಕಾರಂತ್ ತಿಳಿಸಿದರು. ಅವರು ದಿನಾಂಕ 10 ಆಗಸ್ಟ್ 2022 ರಂದು ಬಂಟ್ವಾಳ ತಾಲೂಕಿನ ಪಚ್ಚಿನಡ್ಕದಲ್ಲಿ ಯುವವಾಹಿನಿ ಬಂಟ್ವಾಳ ಘಟಕ, ಓಂ ಫ್ರೇಂಡ್ಸ್ ಪಚ್ಚಿನಡ್ಕ ಹಾಗೂ ರೋಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ ಇದರ ಆಶ್ರಯದಲ್ಲಿ ಯೆನಪೊಯ ಆಯುರ್ವೇದ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಸಹಯೋಗದೊಂದಿಗೆ ನಡೆದ ಉಚಿತ ಆಯುರ್ವೇದ ಆರೋಗ್ಯ ಹಾಗೂ ಕಣ್ಣು ತಪಾಸಣಾ ಶಿಬಿರದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ.ಸೇಸಪ್ಪ ಕೋಟ್ಯಾನ್ ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿದರು.
ಯುವವಾಹಿನಿ (ರಿ.) ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ಗಣೇಶ್ ಪೂಂಜರೆಕೋಡಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಯೆನಪೊಯ ಆಯುರ್ವೇದ ವೈದ್ಯಕೀಯ ಕಾಲೇಜಿನ ಮೆಡಿಕಲ್ ಸೂಪರಿಂಟೆಂಡೆಂಟ್ ಲಕ್ಷ್ಮೀಶ ಉಪಾಧ್ಯಾಯ ಹಾಗೂ ಶಿಬಿರದ ಕಾರ್ಡಿನೇಟರ್ ಅಬ್ದುಲ್ ರಝಾಕ್ ಶಿಬಿರದ ಮಹತ್ವ ತಿಳಿಸಿದರು, ಓಂ ಫ್ರೇಂಡ್ಸ್ ಪಚ್ಚಿನಡ್ಕದ ಸ್ಥಾಪಕ ಅಧ್ಯಕ್ಷ ಹಾಗೂ ಯುವವಾಹಿನಿ ಬಂಟ್ವಾಳ ಘಟಕದ ರಜತ ವರ್ಷದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಈ ಶಿಬಿರದಲ್ಲಿ ಒಟ್ಟು 150 ಶಿಬಿರಾರ್ಥಿಗಳು ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದರು. ಈ ಸಂದರ್ಭದಲ್ಲಿ ಬಂಟ್ವಾಳ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಶ್ರೀನಿವಾಸ್ ಪೂಜಾರಿ, ಯುವವಾಹಿನಿ ಬಂಟ್ವಾಳ ಘಟಕದ ಉಪಾಧ್ಯಕ್ಷ ಹರೀಶ್ ಕೋಟ್ಯಾನ್ ಕುದನೆ, ಕಾರ್ಯದರ್ಶಿ ನಾಗೇಶ್ ಪೂಜಾರಿ ನೈಬೇಲು, ಮಾಜಿ ಅಧ್ಯಕ್ಷ ರಾಮಚಂದ್ರ ಸುವರ್ಣ, ಪ್ರೇಮನಾಥ್ ಕೆ, ಯೋಗೀಶ್ ಪೂಜಾರಿ ಮೆಸ್ಕಾಂ, ಕಿರಣ್ರಾಜ್ ಪೂಂಜರೆಕೋಡಿ, ಹರಿಣಾಕ್ಷಿ, ನಿಕೇಶ್ ಕೋಟ್ಯಾನ್ ರೋಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ ಮಾಜಿ ಅದ್ಯಕ್ಷ ಸತೀಶ್ , ಪದ್ಮನಾಭ ರೈ ಮತ್ತಿತರರು ಉಪಸ್ಥಿತರಿದ್ದರು ಯುವವಾಹಿನಿ ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ರಾಜೇಶ್ ಸುವರ್ಣ ಸ್ವಾಗತಿಸಿದರು, ಗ್ರಾಮ ಪಂಚಾಯತ್ ಅಧ್ಯಕ್ಷ ಹರೀಶ್ ಶೆಟ್ಟಿ ಪಡು ವಂದಿಸಿದರು