ಕುಪ್ಪೆಪದವು : ಯುವವಾಹಿನಿ (ರಿ.) ಕುಪ್ಪೆಪದವು ಘಟಕದ 2024-25 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸಮ್ಮಾನ ಕಾರ್ಯಕ್ರಮ ಕುಪ್ಪೆಪದವು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ದಿನಾಂಕ 11-02-2024 ರ ರವಿವಾರ ನಡೆಯಿತು.
ನೂತನ ಕಾರ್ಯಕಾರಿ ಸಮಿತಿ ಸದಸ್ಯರಿಗೆ ಪದಪ್ರದಾನಗೈದು, ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ. ಪೂಜಾರಿ ಮಾತನಾಡಿ, ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಗಳನ್ನು ಆದರ್ಶವಾಗಿಟ್ಟುಕೊಂಡು, ಸಮಾಜದ ಏಳಿಗೆಗಾಗಿ ಶ್ರಮಿಸುತ್ತಾ ಬಿಲ್ಲವ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಮುಂಚೂಣಿಗೆ ತರುವ ಕೆಲಸ ಮಾಡುತ್ತಿರುವ ಯುವವಾಹಿನಿ ರಾಜ್ಯಾದ್ಯಾಂತ 33 ಘಟಕಗಳಲ್ಲಿ 3,500 ಸದಸ್ಯರನ್ನು ಹೊಂದಿದೆ. ಕುಪ್ಪೆಪದವಿನಂತಹ ಗ್ರಾಮೀಣ ಭಾಗದ ಘಟಕಗಳ ಸಮಾಜಮುಖಿ ಕಾರ್ಯಚಟುವಟಿಕೆಗಳು ಸೇರಿದಂತೆ 33 ಘಟಕಗಳ ಸಮಾಜಮುಖಿ ಸಾಧನೆಯನ್ನು ಸರಕಾರವು ಪರಿಗಣಿಸಿ ಯುವವಾಹಿನಿ ರಾಜ್ಯೋತ್ಸವ ಪ್ರಶಸ್ತಿಯನ್ನು ಮುಡಿಗೇರಿಸುವಂತೆ ಮಾಡಿದೆ ಎಂದರು.
ಹಿರಿಯ ಬಿಲ್ಲವ ಮುಖಂಡ ಹಾಗೂ ಶ್ರೀ ದುರ್ಗೇಶ್ವರೀ ದೇವಿ ದೇವಸ್ಥಾನ ಕುಪ್ಪೆಪದವು ಇದರ ಮೊಕ್ತೆಸರರಾದ ಕೆ. ಪುರುಷೋತ್ತಮ ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭ ಹಾರೈಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಯುವವಾಹಿನಿ ಕುಪ್ಪೆಪದವು ಘಟಕದ ಅಧ್ಯಕ್ಷೆಯಾದ ಸೌಮ್ಯ ಕೋಟ್ಯಾನ್ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮುತ್ತೂರು ಗ್ರಾ.ಪಂ. ಅಧ್ಯಕ್ಷ ಪ್ರವೀಣ್ ಆಳ್ವ ಗುಂಡ್ಯ, ಕುಪ್ಪೆಪದವು ಪಂ. ಉಪಾಧ್ಯಕ್ಷ ಮಹಮ್ಮದ್ ಶರೀಫ್ ಕಜೆ ಮತ್ತು ನಿಯೋಜಿತ ಅಧ್ಯಕ್ಷ ಅಕ್ಷಿತ್ ಕುಮಾರ್ ಶುಭ ಹಾರೈಸಿದರು.
ಸನ್ಮಾನ:
ಕಟೀಲು ಯಕ್ಷಗಾನ ಮೇಳದ ಹಿರಿಯ ಕಲಾವಿದ ಸುರೇಶ್ ಪೂಜಾರಿ ಬಳ್ಳಿ, ಗ್ರಾಮ ಪಂಚಾಯತ್ ನಿವೃತ್ತ ಕಾರ್ಯದರ್ಶಿ ಸೋಮಶೇಖರ್ ಕೊತ್ತಲಾಯಿ, ಯುವವಾಹಿನಿ ಕೇಂದ್ರ ಘಟಕದ ಅಧ್ಯಕ್ಷ ಹರೀಶ್ ಕೆ ಪೂಜಾರಿ ಮತ್ತು ನಿರ್ಗಮನ ಅಧ್ಯಕ್ಷೆ ಸೌಮ್ಯ ಕೋಟ್ಯಾನ್ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.
ಪ್ರತಿಭಾ ಪುರಸ್ಕಾರ ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಸಮಾಜದ ಇಬ್ಬರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ., ಪದಾಧಿಕಾರಿಗಳು, ನಿರ್ದೇಶಕರುಗಳು, ಘಟಕದ ಸ್ಥಾಪಕಾಧ್ಯಕ್ಷ ಅರುಣ್ ಕುಮಾರ್ ಅಂಬೆಲೊಟ್ಟು, ಘಟಕದ ಮಾಜಿ ಅಧ್ಯಕ್ಷ ಸತೀಶ್ ಪೂಜಾರಿ ಹೊಸಮನೆ ಉಪಸ್ಥಿತರಿದ್ದರು.
ಘಟಕದ ಸದಸ್ಯರ ಮಕ್ಕಳಿಂದ ವಿವಿಧ ನೃತ್ಯ ವೈವಿಧ್ಯ ನಡೆಯಿತು. ಘಟಕದ ಮಾಜಿ ಅಧ್ಯಕ್ಷ ಅಜಯ್ ಅಮೀನ್ ನಾಗಂದಡಿ ಪ್ರಾಸ್ತವಿಕ ಮಾತನಾಡಿದರು. ಘಟಕದ ಮಾಜಿ ಅಧ್ಯಕ್ಷ ಆಯ್ಕೆ ಸಮಿತಿಯ ಸಂಚಾಲಕರಾದ ಜಗದೀಶ್ ದುರ್ಗಾಕೋಡಿ ನೂತನ ಕಾರ್ಯಕಾರಿ ಸಮಿತಿ ಸದಸ್ಯರ ಪರಿಚಯವನ್ನು ಸಭೆಯ ಮುಂದಿಟ್ಟರು.
ರಕ್ಷಿತ್ ಕುಮಾರ್ ಸ್ವಾಗತಿಸಿದರು. ಕಾರ್ಯದರ್ಶಿ ರಜನಿ ಕುಂದರ್ ವಾರ್ಷಿಕ ವರದಿಯನ್ನು ವಾಚಿಸಿದರು. ಧನ್ಯಶ್ರೀ ಮುಗಿಲ ಕಾರ್ಯಕ್ರಮ ನಿರೂಪಿಸಿದರು. ನೂತನ ಕಾರ್ಯದರ್ಶಿ ರೇಣುಕಾ ಬಾಲಕೃಷ್ಣ ವಂದಿಸಿದರು.