ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಪದಗ್ರಹಣ ಕಾರ್ಯಕ್ರಮ ದಿ. 16-11-2024 ರಂದು ಯುವವಾಹಿನಿ ಸಭಾಂಗಣದಲ್ಲಿ ನಡೆಯಿತು.
ಗುರು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಜಯಾನಂದ ಎಮ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಬಿಲ್ಲವ ಸಮಾಜದ ಪ್ರತಿಷ್ಟಿತ ಸಂಘಟನೆಯಾದ ಯುವವಾಹಿನಿ ಉತ್ತಮ ಸಮಾಜ ಮುಖಿ ಕಾರ್ಯಕ್ರಮಗಳನ್ನು ನಿರ್ವಹಿಸುತ್ತಿದ್ದು, ಮಹಿಳಾ ಘಟಕದ ಸಮಾಜಮುಖಿ ಕಾರ್ಯ ಶ್ಲಾಘನೀಯ ಎಂದರು.
ಶ್ರೀ ಬಪ್ಪನಾಡು ಕ್ಷೇತ್ರ ಮೂಲ್ಕಿಯ ಕಾರ್ಯನಿರ್ವಹಣಾ ಅಧಿಕಾರಿ ಶ್ವೇತಾ ಪಳ್ಳಿ ಮಾತನಾಡಿ, ನಮ್ಮ ಸಮಾಜದ ಹೆಚ್ಚು ಹೆಚ್ಚು ಜನರು ಸ್ಪರ್ಧಾತ್ಮಕ ಪರೀಕ್ಷೆ ಬರೆದು ಸರಕಾರಿ ಕೆಲಸದತ್ತ ಒಲವು ತೋರಬೇಕು ಎಂದರು.
ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್.ಕೆ.ಪೂಜಾರಿಯವರು 2024-25 ರಂದು ನೂತನ ಕಾರ್ಯಕಾರಿ ಸಮಿತಿಗೆ ಪ್ರತಿಜ್ಞಾವಿಧಿ ಭೋಧಿಸಿದರು.
ನೂತನ ಅಧ್ಯಕ್ಷರು ಎಲ್ಲರ ಸಹಕಾರವನ್ನು ಕೋರಿದರು.
ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು.
ಒಂದು ವರ್ಷದಲ್ಲಿ ತಮ್ಮ ಘಟಕಕ್ಕೆ ನೀಡಿದ ಸಹಕಾರಕ್ಕಾಗಿ ಕೇಂದ್ರ ಸಮಿತಿಯ ಅಧ್ಯಕ್ಷರನ್ನು ಮಹಿಳಾ ಘಟಕದ ವತಿಯಿಂದ ಗೌರವಿಸಲಾಯಿತು.
ಮಹಿಳಾ ಘಟಕದ ನಿರ್ಗಮನ ಅಧ್ಯಕ್ಷರಾದ ಶುಭ ರಾಜೇಂದ್ರ ಅವಧಿಯಲ್ಲಿ ಸಹಕರಿಸಿದ ಎಲ್ಲಾ ಸದಸ್ಯರನ್ನು ಗೌರವಿಸಿದರು.
ಕಾರ್ಯದರ್ಶಿ ಹಾಗೂ ಕೋಶಾಧಿಕಾರಿಯವರನ್ನು ಗೌರವಿಸಲಾಯಿತು.
ಒಂದು ವರ್ಷದ ಸೇವೆಗಾಗಿ ಘಟಕದ ಅಧ್ಯಕ್ಷರನ್ನು ಗೌರವಿಸಲಾಯಿತು.
ಆಯ್ಕೆ ಸಮಿತಿಯ ಸಂಚಾಲಕರಾದ ಸರಸ್ವತಿ ಎಸ್ ಕೂಳೂರು ನೂತನ ಸಮಿತಿಯ ಸದಸ್ಯರ ಪಟ್ಟಿಯನ್ನು ಸಭೆಯಲ್ಲಿ ವಾಚಿಸಿದರು.
ನಿಯೋಜಿತ ಕಾರ್ಯದರ್ಶಿ ಜಯಲಕ್ಷ್ಮಿ ಬಿ ವಂದಿಸಿದರು. ವಿದ್ಯಾ ರಾಖೇಶ್ ಹಾಗೂ ರಮ್ಯಾ ಕಾರ್ಯಕ್ರಮ ನಿರೂಪಿಸಿದರು.