ಬೆಳ್ತಂಗಡಿ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ಪರಿಕಲ್ಪನೆಯೊಂದಿಗೆ ಸಮಾಜ ಸೇವೆ ಮಾಡುತ್ತಿರುವ ಯುವವಾಹಿನಿ ಬೆಳ್ತಂಗಡಿ ಘಟಕದ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರಧಾನ, ಸಾಧಕರಿಗೆ ಸನ್ಮಾನ ಸಾಂತ್ವನನಿಧಿ ಹಸ್ತಾಂತರ ಕಾರ್ಯಕ್ರಮ ನ.13 ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾಂಗಣದಲ್ಲಿ ನಡೆಯಿತು.
ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಮಾಣಿ೦ಜ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು , ಬೆಳ್ತಂಗಡಿ ಘಟಕ ಅಧ್ಯಕ್ಷೆ ಸುಜಾತ ಅಣ್ಣಿ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ (ರಿ.) ಕೇಂದ್ರ ಸಮಿತಿ ಉದಯ ಅಮೀನ್ ಮಟ್ಟು ನೂತನ ಪದಾಧಿಕಾರಿಗಳಿಗೆ ಪದಪ್ರಧಾನ ನೇರವೆರಿಸಿದರು. ಮುಖ್ಯ ಅಥಿತಿಗಳಾಗಿ ಮಾಜಿ ಶಾಸಕ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಗೌರವಾಧ್ಯಕ್ಷ ಕೆ. ವಸಂತ ಬಂಗೇರ, ವಿಧಾನ ಪರಿಷತ್ ಶಾಸಕ ಕೆ. ಹರೀಶ್ ಕುಮಾರ್, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರು, ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಸುಜಿತಾ ವಿ. ಬಂಗೇರ, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಎಂ.ಕೆ. ಪ್ರಸಾದ್, ಬೆಳ್ತಂಗಡಿ ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ನಿತೀಶ್ ಎಚ್.ಭಾಗವಹಿಸಿದ್ದರು. ಬೆಳ್ತಂಗಡಿ ಘಟಕ ಕಾರ್ಯದರ್ಶಿ ಸಂತೋಷ್ ಸಾಲಿಯಾನ್’ ಅರಳಿ, ಕೋಶಾಧಿಕಾರಿ ಸದಾಶಿವ ಊರ, ನಿಯೋಜಿತ ಅಧ್ಯಕ್ಷ ಅಶ್ವಥ್ ಕುಮಾರ್, ನಿಯೋಜಿತ ಪ್ರಧಾನ ಕಾರ್ಯದರ್ಶಿ ಸುನಿಲ್ ಕನ್ಯಾಡಿ, ನಿಯೋಜಿತ ಕೋಶಾಧಿಕಾರಿ ವಿಜಯ್ ಶಿರ್ಲಾಲು, ನಿರ್ದೇಶಕರುಗಳು ಗೌರವ ಸಲಹೆಗಾರರು, ಸಂಚಲನ ಸಮಿತಿಗಳ,ವಿವಿಧ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.