ಕೂಳೂರು :- ಯುವವಾಹಿನಿ (ರಿ.) ಕೂಳೂರು ಘಟಕ, ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಫಲ್ಗುಣಿ, ಹಿಂದ್ ಕುಷ್ಟ್ ನಿವಾರಣ್ ಸಂಘ್ ಹಾಗೂ ರೆಡ್ ಕ್ರಾಸ್ ಸಂಸ್ಥೆ, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ದಿನಾಂಕ 04 ಸೆಪ್ಟೆಂಬರ್ 2022 ರಂದು ಬೃಹತ್ ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರವು ಫಲ್ಗುಣಿ ಸಭಾಂಗಣ ಕೂಳೂರುನಲ್ಲಿ ನಡೆಯಿತು. ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಯುವವಾಹಿನಿ ಮತ್ತು ಲಯನ್ಸ್ ಸಂಸ್ಥೆಯಲ್ಲಿ ನಿರಂತರವಾಗಿ ಕಾರ್ಯಕ್ರಮಗಳು ನಡೆಯುತ್ತಿವೆ ಎಂದು ಹೇಳಿದರು. ಲಯನ್ಸ್ ಕ್ಲಬ್ ನ ಮಾಜಿ ಜಿಲ್ಲಾ ರಾಜ್ಯಪಾಲರಾದ ಲಯನ್ ರೋನಾಲ್ಡ್ ಗೋಮ್ಸ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ರೆಡ್ ಕ್ರಾಸ್ ಸಂಸ್ಥೆಯ ಡಾ. ಜೆ ಎನ್ ಭಟ್ ಅವರು ರಕ್ತದಾನ ಶಿಬಿರದ ಬಗ್ಗೆ ಮಾಹಿತಿ ನೀಡಿದರು. ಲಯನ್ಸ್ ಕ್ಲಬ್ ಮಂಗಳೂರು ಫಲ್ಗುಣಿ ಇದರ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಕಾರ್ಯಕ್ರಮದಲ್ಲಿ ಕೂಳೂರು ಘಟಕದ ಅಧ್ಯಕ್ಷರಾದ ದೀಕ್ಷಿತ್ ಸಿ ಎಸ್ ಹಾಗೂ ಅನುಗ್ರಹ ಪವರ್ ಸರ್ವಿಸಸ್ ನ ಮಾಲಕರಾದ ಭಾಸ್ಕರ್ ಕೋಟ್ಯಾನ್ ಉಪಸ್ಥಿತರಿದ್ದರು. ಶಿಬಿರದಲ್ಲಿ 60 ಕ್ಕೂ ಹೆಚ್ಚು ಜನ ಭಾಗವಹಿಸಿ, ರಕ್ತದಾನ ಮಾಡಿದರು. ಈ ಮೂಲಕ ಜನರಿಗೆ ರಕ್ತದಾನದ ಮಹತ್ವವನ್ನು ತಿಳಿಸುವುದರ ಜೊತೆಗೆ ತಮ್ಮ ಬದುಕಿನ ಮಹತ್ವದ ಕ್ಷಣಗಳನ್ನು ರಕ್ತದಾನದ ಮೂಲಕ ಸಾರ್ಥಕ ಮಾಡಿಕೊಂಡರು. ಸ್ಥಳೀಯ ಕೂಳೂರು ಪರಿಸರದ ಜನತೆ ಆರೋಗ್ಯ ತಪಾಸಣಾ ಶಿಬಿರದ ಸದುಪಯೋಗ ಪಡೆದುಕೊಂಡರು. ಲಯನ್ಸ್ ಕ್ಲಬ್ ಮಂಗಳೂರು ಫಲ್ಗುಣಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಸ್ವಾಗತಿಸಿದರು. ಲಯನ್ಸ್ ಕ್ಲಬ್ ಮಂಗಳೂರು ಫಲ್ಗುಣಿ ಕೋಶಾಧಿಕಾರಿ ಶ್ರವಣ್ ಸಿ ಎಸ್ ಧನ್ಯವಾದ ಸಲ್ಲಿಸಿದರು. ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.