ಮಂಗಳೂರು : ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ರಜತ ಮಹೋತ್ಸವದ ಅಂಗವಾಗಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಮತ್ತು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಮಂಗಳೂರು ಹಾಗೂ ಕನಾ೯ಟಕ ತುಳು ಸಾಹಿತ್ಯ ಅಕಾಡೆಮಿ ಇವರ ಸಹಕಾರದೊಂದಿಗೆ ಬೃಹತ್ ರಕ್ತದಾನ ಶಿಬಿರವು ದಿನಾಂಕ 06-02- 2022 ರಂದು ಮಂಗಳೂರಿನ ತುಳು ಭವನದಲ್ಲಿ ಜರುಗಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ದಯಾನಂದ .ಜಿ. ಕತ್ತಲಸಾರ್ ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮ ಉದ್ಘಾಟಿಸಿದರು.
ಮುಖ್ಯ ಅತಿಥಿ ಮಹಾನಗರ ಪಾಲಿಕೆಯ ಸದಸ್ಯ ಅನಿಲ್ ಕುಮಾರ್ ರವರು ಮಾತನಾಡಿ ಇನ್ನೊಬ್ಬರ ಜೀವ ಉಳಿಸುವ ಕಾರ್ಯ ಶ್ಲಾಘನೀಯವಾದದ್ದು, ಯುವವಾಹಿನಿಯ ಎಲ್ಲ ಕೆಲಸ ಕಾರ್ಯಗಳನ್ನು ಕೊಂಡಾಡಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಶುಭಹಾರೈಸಿದರು. ಪ್ರಜಾಪತಿ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಸಂಚಾಲಕರಾದ ವಿಶ್ವೇಶ್ವರಿ ,ವೆನ್ಲಾಕ್ ಆಸ್ಪತ್ರೆಯ ಬ್ಲಡ್ ಬ್ಯಾಂಕ್ ಮೆಡಿಕಲ್ ಆಫೀಸರ್ ಡಾಕ್ಟರ್ ಶಿವಂ, ಬ್ಲಡ್ ಬ್ಯಾಂಕ್ ವ್ಯವಸ್ಥಾಪಕರು ಆಂಟೋನಿ ಡಿಸೋಜಾ, ಕಾರ್ಯದರ್ಶಿ ಚಿತ್ರಾಶ್ರೀ ಮನೋಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಸುನೀತಾ ಗೋಪಾಲಕೃಷ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಘಟಕದ ಅಧ್ಯಕ್ಷೆ ಸುನೀತಾ ಗೋಪಾಲಕೃಷ್ಣ ಶಾಲು, ಹೂ ನೀಡಿ ಸ್ವಾಗತಿಸಿದರು. ಶಿಬಿರದಲ್ಲಿ ಸುಮಾರು 50 ಮಂದಿ ರಕ್ತದಾನ ಮಾಡಿದರು. ಚಿತ್ರಶ್ರೀ ಮನೋಜ್ ಧನ್ಯವಾದೈದರು. ರವಿಕಲಾ ಕಾರ್ಯಕ್ರಮ ನಿರೂಪಿಸಿದರು.